spot_img
spot_img

ರಸ್ತೆ ಇಲ್ಲದ ಊರು : 3 ಕಿ.ಮೀ ಗರ್ಭಿಣಿಯನ್ನು ಹೊತ್ತು ಸಾಗಿದ ಗ್ರಾಮಸ್ಥರು

spot_img
spot_img

Share post:

ಭದ್ರಾದ್ರಿ ಕೊಥಗುಡೆಂ(ತೆಲಂಗಾಣ): ರಸ್ತೆ ಸೌಲಭ್ಯ ಇಲ್ಲದ ಕಾರಣ ಗರ್ಭಿಣಿ ಮಲಗಿದ್ದ ಮರದ ಮಂಚಕ್ಕೆ ಕೋಲು ಕಟ್ಟಿ, ಸ್ಟ್ರೆಚರ್​ನಂತೆ ಗ್ರಾಮಸ್ಥರು ಮೂರು ಕಿ.ಮೀ ಹೊತ್ತೊಯ್ದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಡಿಜಿಟಲ್​ ಕ್ರಾಂತಿಯತ್ತ ಭಾರತ ಮುನ್ನುಗ್ಗುತ್ತಿದೆ. ಆದರೆ, ಮತ್ತೊಂದೆಡೆ ದೇಶದ ಅನೇಕ ಕುಗ್ರಾಮಗಳು ಇಂದಿಗೂ ಮೂಲಸೌಕರ್ಯಗಳಿಂದ ವಂಚಿತವಾಗಿವೆ.

ಹೊಸ ನಿದರ್ಶನ ತೆಲಂಗಾಣದ ಛರ್ಲಾ ಮಂಡಲ್​ನಲ್ಲಿನ ರಲ್ಲಪುರಂ ಗ್ರಾಮದಲ್ಲಿ ಸಿಕ್ಕಿದೆ. ಕನಿಷ್ಠ ಮೂಲಭೂತ ಸೌಲಭ್ಯವಾದ ರಸ್ತೆಯೇ ಇಲ್ಲದ ಕಾರಣ ಗರ್ಭಿಣಿ ಮಲಗಿದ್ದ ಮರದ ಮಂಚಕ್ಕೆ ಕೋಲು ಕಟ್ಟಿ, ಸ್ಟ್ರೆಚರ್​ನಂತೆ ಮಾಡಿ ಗ್ರಾಮಸ್ಥರು ಮೂರು ಕಿ.ಮೀ ಹೊತ್ತೊಯ್ದಿದ್ದಾರೆ ಎಂದು ತಿಳಿಸಿದ್ದಾರೆ.

ಕುಂಜಮ್​ ಮಾಯೆ ಎಂಬ ಮಹಿಳೆ ಫಿಟ್ಸ್​ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ಆರೋಗ್ಯ ತೀರಾ ಹದಗೆಟ್ಟಿತ್ತು. ನರ್ಸ್​ ಪ್ರಾರ್ಥಮಿಕ ಚಿಕಿತ್ಸೆ ನೀಡಿದ್ದರು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಆರೋಗ್ಯ ಮತ್ತಷ್ಟು ಬಿಗಡಾಯಿಸಿತ್ತು.

ಹೀಗಾಗಿ, ಹತ್ತಿರದ ಆಸ್ಪತ್ರೆಗೆ ದಾಖಲಿಸಲು ನಿರ್ಧರಿಸಲಾಯಿತು. 108 ಆಂಬುಲೆನ್ಸ್​ಗೆ ಕರೆ ಮಾಡಿದ್ದಾರೆ. ಆದರೆ, ರಸ್ತೆ ಇಲ್ಲದ ಕಾರಣ ವಾಹನ ಮಹಿಳೆ ಇರುವ ಸ್ಥಳ ತಲುಪಲು ಸಾಧ್ಯವಿರಲಿಲ್ಲ. ಈ ಹಿನ್ನೆಲೆಯಲ್ಲಿ ಗ್ರಾಮದಿಂದ ಮೂರು ಕಿ.ಮೀ ದೂರದ ಕೊಳದ ಬಳಿ ಆಂಬುಲೆನ್ಸ್​ ನಿಲ್ಲಿಸುವುದಾಗಿ ಚಾಲಕ ತಿಳಿಸಿದ್ದಾನೆ. ಇದಕ್ಕೊಪ್ಪಿದ ಗ್ರಾಮಸ್ಥರು ಮತ್ತು ಆಕೆಯ ಪತಿ ಗರ್ಭಿಣಿಯನ್ನು ಎತ್ತಿಕೊಂಡು ಅಷ್ಟೂ ದೂರ ಸಾಗಿಸಿದ್ದಾರೆ.

ಬಳಿಕ ಆಂಬುಲೆನ್ಸ್​ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಸತ್ಯಾನಾರಾಯಣಪುರಂನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದೆ. ಅಲ್ಲಿ ತಪಾಸಣೆ ನಡೆಸಿದ ವೈದ್ಯರು, ಆರೋಗ್ಯ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಭದ್ರಾಚಲಂನ ಸರ್ಕಾರಿ ಆಸ್ಪತ್ರೆಗೆ ಸೇರಿಸುವಂತೆ ಸೂಚಿಸಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...