ಬೆಂಗಳೂರು: ಮುಂದಿನ ವರ್ಷದಿಂದ ಎಲ್ಲ ವೃತ್ತಿಪರ ಕೋರ್ಸ್ ಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೋಂದಣಿ ಮಾಡಿಸಲು ಪ್ರತಿಯೊಬ್ಬ ವಿದ್ಯಾರ್ಥಿಗಳ ಆಧಾರ್ ನೊಂದಿಗೆ ಲಿಂಕ್ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಸ್ತಾವನೆ ಮಾಡಿದ್ದಾರೆ.
ನೋಂದಣಿಯಲ್ಲಿ ಯಾವುದೇ ವಂಚನೆಯನ್ನು ತಡೆಗಟ್ಟಲು ಮತ್ತು ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್ ಗಳಲ್ಲಿಯೇ ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಅನುಕೂಲವಾಗುವಂತೆ ಆಧಾರ್-ಲಿಂಕ್ಡ್ ನೋಂದಣಿಯನ್ನು ಪ್ರಸ್ತಾಪಿಸಲಾಗಿದೆ ಎಂದು ಅವರು ಹೇಳಿದರು.
ಮುಂದಿನ ವರ್ಷದಿಂದ ಎಲ್ಲಾ ವೃತ್ತಿಪರ ಕೋರ್ಸ್ ಗಳ ನೋಂದಣಿಯನ್ನು ವಿದ್ಯಾರ್ಥಿಗಳ ಪ್ರಸ್ತಾಪ ಮಾಡಿದ್ದಾರೆ.
ಶೀಘ್ರದಲ್ಲೇ ಅನುಮೋದನೆಗಾಗಿ ಕಾಯುತ್ತಿದ್ದೇವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಎಂದು ತಿಳಿಸಿದ್ದಾರೆ.
ವಿವಿಧ ಇಲಾಖೆಗಳಿಗೆ ಕೆಇಎ ನಡೆಸುವ ನೇಮಕಾತಿ ಪರೀಕ್ಷೆಗಳಿಗೂ ಆಧಾರ್ ಲಿಂಕ್ ಮಾಡಿದ ನೋಂದಣಿಯನ್ನು ಪರಿಚಯಿಸುವ ಯೋಜನೆಯೂ ಇದೆ ಎಂದು ತಿಳಿಸಿದ್ದಾರೆ.
ಎಂಜಿನಿಯರಿಂಗ್ ಸೀಟು ಹಂಚಿಕೆಯ ಎಲ್ಲಾ ಸುತ್ತುಗಳು ಪೂರ್ಣಗೊಂಡ ನಂತರ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಕೋಟಾದಡಿ ಸೀಟ್ ಬ್ಲಾಕಿಂಗ್ ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕೆಇಎ ಈ ಕ್ರಮ ಕೈಗೊಂಡಿದೆ.
ಪರಿಣಾಮದಿಂದ ಕೆಸಿಇಟಿ ಕೋಟಾದಡಿ ಬರುವ ಅಂಥ ಎಲ್ಲಾ ಸೀಟುಗಳು ಮ್ಯಾನೇಜ್ ಮೆಂಟ್ ಕೋಟಾಕ್ಕೆ ಸೇರುವಂತಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಕೆಇಎ ಈ ಪ್ರಸ್ತಾವನೆಯನ್ನು ಈಗಾಗಲೇ ಇ-ಆಡಳಿತ ಇಲಾಖೆಗೆ ಸಲ್ಲಿಸಿದೆ. ಇ-ಆಡಳಿತ ಇಲಾಖೆಯು ನಮ್ಮ ಪ್ರಸ್ತಾವನೆಗೆ ಪರವಾಗಿದೆ ಮತ್ತು ಅವರು ಅನುಮೋದನೆಗಾಗಿ ಭಾರತ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಿದೆ.
ಈ ಸಂದರ್ಭಗಳಲ್ಲಿ ಸೀಟ್ ಬ್ಲಾಕಿಂಗ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ, ಮೂರನೇ ವ್ಯಕ್ತಿಗಳು ಕಾಲೇಜು ಆಡಳಿತ ಮಂಡಳಿಗಳೊಂದಿಗೆ ಮತ್ತು ಕೆಲವು ಸಂದರ್ಭಗಳಲ್ಲಿ ವಿದ್ಯಾರ್ಥಿಗಳೊಂದಿಗೆ ಶಾಮೀಲಾಗಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now