spot_img
spot_img

5 ಕೋಟಿ ರೂ.ವೆಚ್ಚದಲ್ಲಿ ಕಾವೇರಿಗೆ ಆರತಿ ಯೋಜನೆ ; ದಸರಾ ಆರಂಭಕ್ಕೆ ಸರ್ಕಾರ ಚಿಂತನೆ..!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಗಂಗಾರತಿ ಮಾದರಿಯಲ್ಲೇ ಕಾವೇರಿಗೂ ಆರತಿ ದಸರಾ ವೇಳೆ ಆರಂಭಕ್ಕೆ ಸರ್ಕಾರ ಚಿಂತನೆ

ನಿನ್ನೆ ಹರಿದ್ವಾರಕ್ಕೆ ತೆರಳಿರುವ ನಿಯೋಗ ವಿಶೇಷ ಗಂಗಾರತಿಯಲ್ಲಿ ಭಾಗಿಯಾಗಿ ಪೂಜೆ ನಡೆಸಿತು ಮತ್ತು ಆರತಿ ಮೇಲುಸ್ತುವಾರಿ ನೋಡಿಕೊಳ್ಳುವ ಹಿಂದೂ ಸಭಾ ಜೊತೆ ಮಾತುಕತೆ ನಡೆಸಿ, ಹಲವು ಅನುಮಾನಗಳಿಗೆ ಸ್ಪಷ್ಟನೆ ಪಡೆದುಕೊಂಡಿತು.

ಬೆಂಗಳೂರು: ಉತ್ತರ ಭಾರತದಲ್ಲಿ ನಡೆಯುವ ಗಂಗಾರತಿ ಮಾದರಿಯಲ್ಲಿಯೇ ರಾಜ್ಯದ ಕಾವೇರಿ ನದಿಗೆ ಕಾವೇರಿ ಆರತಿ ನಡೆಸಲು ಸರ್ಕಾರ ಮುಂದಾಗಿದ್ದು, ದಸರಾ ವೇಳೆಗೆ ಆರಂಭಿಸಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ಅಧ್ಯಯನ ನಡೆಸಲು ಸಚಿವ ಚಲುವರಾಯಸ್ವಾಮಿ ನೇತೃತ್ವದ ನಿಯೋಗ ಹರಿದ್ವಾರ ಮತ್ತು ವಾರಾಣಾಸಿಗೆ ಭೇಟಿ ನೀಡಿದೆ.

ಇದನ್ನೂ ಓದಿ : ಕೊಹ್ಲಿಗೆ ಸಿಕ್ಕಷ್ಟು ಅವಕಾಶ ಕೆ.ಎಲ್.ರಾಹುಲ್‌ಗೆ ಸಿಗದಿರಬಹುದು. 2ನೇ ಟೆಸ್ಟ್‌ಗೆ ಭಾರತ ಸಂಭಾವ್ಯ ತಂಡ.!

ನಿನ್ನೆ ಹರಿದ್ವಾರಕ್ಕೆ ತೆರಳಿರುವ ನಿಯೋಗ ವಿಶೇಷ ಗಂಗಾರತಿಯಲ್ಲಿ ಭಾಗಿಯಾಗಿ ಪೂಜೆ ನಡೆಸಿತು ಮತ್ತು ಆರತಿ ಮೇಲುಸ್ತುವಾರಿ ನೋಡಿಕೊಳ್ಳುವ ಹಿಂದೂ ಸಭಾ ಜೊತೆ ಮಾತುಕತೆ ನಡೆಸಿ, ಹಲವು ಅನುಮಾನಗಳಿಗೆ ಸ್ಪಷ್ಟನೆ ಪಡೆದುಕೊಂಡಿತು.

ಗಂಗಾ ಆರತಿ ವೀಕ್ಷಣೆ ಜತೆಗೆ ಪೂಜೆಯಲ್ಲಿ ಭಾಗಿಯಾದ ಬಳಿಕ‌ ಮಾತನಾಡಿದ ಸಚಿವ ಚಲುವರಾಯಸ್ವಾಮಿಯವರು, ‘ಕಾವೇರಿ ಆರತಿಗೆ ಎರಡು, ಮೂರು ಸ್ಥಳಗಳನ್ನು ಗುರುತಿಸಲಾಗಿದೆ. ಅಂತಿಮಗೊಂಡ ಸ್ಥಳದಲ್ಲಿ ಆರತಿಗಾಗಿ ಸೋಪಾನೆಕಟ್ಟೆ ನಿರ್ಮಿಸಲಾಗುವುದು. ಹರಿದ್ವಾರದಲ್ಲಿ ನಿತ್ಯ ಗಂಗಾ ಆರತಿ ನಡೆಯುತ್ತಿದೆ.

ರಾಜ್ಯದಲ್ಲಿ ವಾರದಲ್ಲಿ ಎರಡು ಅಥವಾ ಮೂರು ದಿನ ಆರತಿ ಮಾಡಬೇಕೆ? ನಿತ್ಯ ಆರತಿ ನಡೆಸಬೇಕೇ ಎಂಬುದರ ಬಗ್ಗೆ ಸಮಿತಿ ಜತೆ ಚರ್ಚಿಸಿ ನಿರ್ಧರಿಸಲಾಗುವುದು. ಆರಂಭದಲ್ಲಿ ಹರಿದ್ವಾರ ಮತ್ತು ವಾರಾಣಸಿಯ ಸಾಧು, ಸಂತರನ್ನು ಆಹ್ವಾನಿಸಿ ಅವರಿಂದ ಕಾವೇರಿ ಆರತಿ ನಡೆಸಲಾಗುತ್ತದೆ. ಬಳಿಕ ಅವರಿಂದಲೇ ಸ್ಥಳೀಯ ವೈದಿಕರಿಗೆ ತರಬೇತಿ ಕೊಡಿಸಿ ಕಾವೇರಿ ಆರತಿ ಮುಂದುವರಿಸಲಾಗುವುದು ಎಂದು ಹೇಳಿದರು.

ಹರಿದ್ವಾರದ ಗಂಗಾ‌ ಮಹಾಸಭಾದ ಸಮಿತಿಯ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಗಂಗಾ ಆರತಿ ಇತಿಹಾಸದ ಬಗ್ಗೆ ಮಾಹಿತಿ ನೀಡಿದ್ದಾರೆ. ಕೆಲವು ಸಲಹೆಗಳನ್ನು ನೀಡಿದ್ದಾರೆ. ಶನಿವಾರ ವಾರಾಣಸಿಗೆ ತೆರಳಿ ದಶಾಶ್ವಮೇಧ ಘಾಟ್‌ನಲ್ಲಿ ಗಂಗಾ ಆರತಿ ವೀಕ್ಷಿಸಲಾಗುವುದು. ಭಾನುವಾರ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡುವುದರ ಜೊತೆಗೆ ಘಾಟ್‌ನಲ್ಲಿ ಸಂಚರಿಸಿ, ಅಲ್ಲಿನ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಇದೇ ವೇಳೆ ಮಾಹಿತಿ ನೀಡಿದರು.

ಸುಮಾರು 5 ಕೋಟಿ ರೂ.ವೆಚ್ಚದಲ್ಲಿ ಕಾವೇರಿಗೆ ಆರತಿ ಯೋಜನೆ ರೂಪಿಸಲಾಗುತ್ತಿದ್ದು, ಅಧ್ಯಯನ ನಡೆಸಲು ಚಾಮರಾಜನಗರ, ಮೈಸೂರು, ಮಂಡ್ಯ, ಮಡಿಕೇರಿ ಭಾಗದ ಶಾಸಕರ ಸಮಿತಿಯನ್ನು ರಚಿಸಲಾಗಿದೆ.

ಸಚಿವ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ರಚಿಸಿರುವ ಸಮಿತಿಯಲ್ಲಿ ಶಾಸಕರಾದ ನರೇಂದ್ರಸ್ವಾಮಿ, ಶಿವಲಿಂಗೇಗೌಡ, ರಮೇಶ್ ಬಂಡಿ ಸಿದ್ದೇಗೌಡ, ಉದಯ್ ಗೌಡ, ರವಿಕುಮಾರ್ ಗಣಿಗ, ಮಾಗಡಿ ಬಾಲಕೃಷ್ಣ, ಹರೀಶ್​ಗೌಡ, ದರ್ಶನ್ ಧ್ರುವನಾರಾಯಣ್ ಇದ್ದು, ಚಿತ್ರನಟ ಹಾಗೂ ಸಂಗೀತ ನಿರ್ದೇಶಕ ಸಾಧುಕೋಕಿಲ ಅವರು ಸಮೀತಿಯಲಿದ್ದು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಸೂಚನೆಯಂತೆ ಕಾವೇರಿ ಆರತಿ ಕುರಿತು ವಿಶೇಷ ಹಾಡು ರಚಿಸಲಿದ್ಧಾರೆಂದು ಮೂಲಗಳು ತಿಳಿಸಿವೆ.

 

WhatsApp Group Join Now
Telegram Group Join Now
Instagram Account Follow Now
spot_img

Related articles

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...

ಅಪ್ರಾಪ್ತ ಬಾಲಕಿಯರಿಗೆ ಮಾದರಿಯಾಗಿದ್ದಾಳೆ.! ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

ಬೀದರ್, ಕಲಬುರಗಿ: ಬಸವಕಲ್ಯಾಣ ತಾಲೂಕಿನ ಹಳ್ಳಿಯೊಂದರಲ್ಲಿ 9ನೇ ತರಗತಿ ಓದುತ್ತಿರುವ 14 ವರ್ಷದ ಈ ಬಾಲಕಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ ದಿಟ್ಟ ಹೋರಾಟಗಾರ್ತಿ, ಇತರೆ...