ಬೆಂಗಳೂರು: ಪಾನಿಪುರಿ, ರುಚಿಕರವಾದ ಆಲೂ ಟಿಕ್ಕಿ, ಪಾವ್ ಭಾಜಿ, ಸಾಂಪ್ರದಾಯಿಕ ಜಲೇಬಿಗಳವರೆಗೆ ಎಲ್ಲ ರೀತಿಯ ಆಹಾರವನ್ನು ಇಷ್ಟಪಡುವ ಜನರಿಗೆ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾದ ಬೆನ್ನಲ್ಲೇ ಬಿಬಿಎಂಪಿ ಕೆಲ ಮಾರ್ಗಸೂಚಿಯನ್ನು ಹೊರಡಿಸಿದೆ.
ಮಳೆಯಿಂದ ತಗ್ಗು ಪ್ರದೇಶ, ರಾಜಕಾಲುವೆ, ಕೆರೆಯ ಆಸುಪಾಸಿನ ಜಾಗಗಳಲ್ಲಿ ಅಂಗಡಿಗಳನ್ನು ಇಡುವುದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಹೆಚ್ಚಾಗುತ್ತದೆ. ಆದರೆ ಸುರಕ್ಷತೆ ಮತ್ತು ನೈರ್ಮಲ್ಯದ ಕಾಳಜಿ ನಮ್ಮನ್ನು ಹಿಮ್ಮೆಟ್ಟಿಸುತ್ತದೆ.
ನಿರಂತರ ಮಳೆಯಿಂದ ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿ ಕಾಲರಾ, ಜಾಂಡಿಸ್, ಡೆಂಘೀ, ಕರುಳಬೇನೆ, ಚಿಕನ್ ಗುನ್ಯಾ ಮಲೇರಿಯಾ ರೋಗಗಳ ಆತಂಕ ಎದುರಾಗಿದೆ.
ಪ್ರವಾಹ ಪೀಡಿತ ಪ್ರದೇಶಗಳಾದ ಆರ್ ಆರ್ ನಗರ, ಮಹಾದೇವಪುರ, ಯಲಹಂಕ, ಬೊಮ್ಮನಹಳ್ಳಿ ವಲಯಗಳಲ್ಲಿ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗೆ ಕುಡಿಯುವ ನೀರಿನ ಪರೀಕ್ಷೆ ಮಾಡಿ ವರದಿ ನೀಡುವಂತೆ ಬಿಬಿಎಂಪಿ ಹಾಗೂ ಜಲಮಂಡಳಿ ಆದೇಶಿಸಲಾಗಿದೆ.
ಬಿಬಿಎಂಪಿ ಸೂಚಿಸುವ ಮಾರ್ಗಸೂಚಿಗಳು :
– ಬೆಂಗಳೂರಿನ ಹೋಟೆಲ್‌ಗಳಲ್ಲಿ ಗ್ರಾಹಕರಿಗೆ ಬಿಸಿ ನೀರು ನೀಡುವುದು ಕಡ್ಡಾಯ.
– ಬೀದಿಬದಿ ಆಹಾರ, ಕತ್ತರಿಸಿದ ಹಣ್ಣು (ಫ್ರೂಟ್ ಬೌಲ್) ಮಾರಾಟ ನಿಷೇಧ.
– ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಹಾಲೋಜೆನ್ ಮಾತ್ರೆಗಳನ್ನು ನೀಡಬೇಕು.
– ನೆರೆ ಪೀಡಿತ ಪ್ರದೇಶ ಜನರಿಗೆ ಸೂಕ್ತ ಚಿಕಿತ್ಸೆ ಹಾಗೂ ಅಗತ್ಯ ಔಷಧಿಗಳನ್ನು ಒದಗಿಸಬೇಕು.
– ಪ್ರತಿ ವಾರ್ಡ್ ಗಳ ಆರೋಗ್ಯ ಕೇಂದ್ರ, ನಮ್ಮ ಕ್ಲಿನಿಕ್, ಹೆರಿಗೆ ಆಸ್ಪತ್ರೆಗಳಲ್ಲಿ ಔಷಧಿ ಸಿಗುವಂತೆ ಕ್ರಮ.
– ತುರ್ತು ಪರಿಸ್ಥಿತಿ ನಿಭಾಯಿಸಲು ಪಾಲಿಕೆಯ ಎಲ್ಲಾ ಸಿಬ್ಬಂದಿ ಸನ್ನದ್ಧರಾಗಿರಬೇಕು.
– ನೀರು ಸಂಗ್ರಹಿಸುವ ಟ್ಯಾಂಕರ್ ಗಳನ್ನು ಶುದ್ಧಗೊಳಿಸಿ ಅಗತ್ಯಕ್ಕೆ ತಕ್ಕಂತೆ ಸಿಗುವಂತೆ ನೋಡಿಕೊಳ್ಳಬೇಕು.