Davangere News:
ACCIDENT IN DAVANAGERE ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಲಾ ಬಸ್ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಅಧಿಕ ಮಕ್ಕಳು ಗಾಯಗೊಂಡ ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ಮಕ್ಕಳನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತವಾದ ಬಸ್ ಜೈನ್ ವಿದ್ಯಾ ಸಂಸ್ಥೆಗೆ ಸೇರಿದೆ ಎಂದು ತಿಳಿದು ಬಂದಿದೆ.
ಮಕ್ಕಳನ್ನು ಶಾಲೆಗೆ ಕರೆ ತರುವ ವೇಳೆ ಈ ಘಟನೆ ನೆಡೆದಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.ACCIDENT IN DAVANAGERE ಎಸ್ಪಿ ಉಮಾಪ್ರಶಾಂತ್ ಅವರು ಕೂಡ ಭೇಟಿ ನೀಡಿ ಪರಿಶೀಲಿಸಿದರು. ಘಟನೆಗೆ ಪ್ರಮುಖ ಕಾರಣ ಏನೆಂಬುದನ್ನು ಸಿಬ್ಬಂದಿ ಸೂಕ್ತ ಮಾಹಿತಿ ಕಲೆ ಹಾಕಿದರು.
ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ, ಗಾಯಗೊಂಡಿದ್ದ ಶಾಲಾ ಮಕ್ಕಳನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ACCIDENT IN DAVANAGEREಶಾಲಾ ಬಸ್ ಮರಕ್ಕೆ ಡಿಕ್ಕಿಯಾಗಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ತಾಲೂಕಿನ ಆನಗೋಡು ಅಣಜಿ ನಡುವೆ ಬರುವ ಕಂದನಕೋವಿ ಹಳ್ಳದ ಹತ್ತಿರ ಶನಿವಾರ ನಡೆದಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನು ಓದಿರಿ : GOTAGODI KALA KUTIRA : ಸಿಮೆಂಟ್ ಶಿಲ್ಪ ಕಲೆಗೆ ಹೆಸರುವಾಸಿವಾದ ಗೋಟಗೊಡಿಯ ಕಲಾ ಕುಟೀರ