spot_img
spot_img

ನಟ ಅಲ್ಲು ಅರ್ಜುನ್‌ಗೆ ಮಧ್ಯಂತರ ಜಾಮೀನು

spot_img
spot_img

Share post:

ಹೈದರಾಬಾದ್(ತೆಲಂಗಾಣ): ನಟ ಅಲ್ಲು ಅರ್ಜುನ್‌ ಅವರಿಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನ ಹೊರಭಾಗದಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆ ಸಾವನ್ನಪ್ಪಿದ ಪ್ರಕರಣದಲ್ಲಿ ಇಂದು ಬಂಧನಕ್ಕೊಳಪಟ್ಟ ನಟ ಅಲ್ಲು ಅರ್ಜುನ್ ಅವರಿಗೆ ತೆಲಂಗಾಣ ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿದೆ.
‘ಪುಷ್ಪ’ ಪಾತ್ರಕ್ಕೆ ಹೆಸರುವಾಸಿಯಾಗಿರುವ ತೆಲುಗು ನಟ ಅಲ್ಲು ಅರ್ಜುನ್ ಅವರನ್ನು ಇದಕ್ಕೂ ಮುನ್ನ ನಾಂಪಲ್ಲಿ ಕೋರ್ಟ್‌ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಹೀಗಾಗಿ, ಪೊಲೀಸರು ನಟನನ್ನು ಚಂಚಲ್‌ಗುಡ ಜೈಲಿಗೆ ರವಾನಿಸಲು ಸಿದ್ಧತೆ ನಡೆಸುತ್ತಿದ್ದರು.
ಡಿಸೆಂಬರ್ 4ರಂದು ‘ಪುಷ್ಪ: ದಿ ರೂಲ್’ ಸಿನಿಮಾದ ಪ್ರೀ ರಿಲೀಸ್​ ಈವೆಂಟ್​​​​​ನಲ್ಲಿ ನಡೆದ ಕಾಲ್ತುಳಿತದಲ್ಲಿ 35 ವರ್ಷದ ರೇವತಿ ಸಾವನ್ನಪ್ಪಿದ್ದರು. ಇವರ ಪುತ್ರ ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಥಿಯೇಟರ್‌ಗೆ ನಟ ಅಲ್ಲು ಅರ್ಜುನ್ ಅನಿರೀಕ್ಷಿತ ಭೇಟಿ, ಅಸಮರ್ಪಕ ಜನಸಂದಣಿ ನಿಯಂತ್ರಣ ಕ್ರಮಗಳು ಕಾಲ್ತುಳಿತಕ್ಕೆ ಕಾರಣವಾಯಿತು ಎಂಬುದು ಆರೋಪ.
ಹೈಕೋರ್ಟ್‌ನಲ್ಲಿ ಅಲ್ಲು ಅರ್ಜುನ್ ಪರ ವಕೀಲರು, ನಟನ ವಿರುದ್ಧದ ಆರೋಪಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಟ ಪೊಲೀಸ್ ತನಿಖೆಗೆ ಸಂಪೂರ್ಣವಾಗಿ ಸಹಕರಿಸಿದ್ದಾರೆ. ಆದ್ರೆ ಅವರ ಬಂಧನವು ಪ್ರಾಥಮಿಕವಾಗಿ ಸೆನ್ಸಟೈಸೇಶನ್​​ ಉದ್ದೇಶದಿಂದ ನಡೆದಿದೆ ಎಂದು ಒತ್ತಿ ಹೇಳಿದರು. ರಯೀಸ್‌ ಸಿನಿಮಾ ಪ್ರಚಾರದ ಸಮಯದಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಕಾನೂನು ಹೋರಾಟ ಎದುರಿಸಿದ ಬಾಲಿವುಡ್ ನಟ ಶಾರುಖ್ ಖಾನ್‌ಗೆ ಸಂಬಂಧಿಸಿದ ಪ್ರಕರಣವನ್ನೂ ವಕೀಲರು ಇಲ್ಲಿ ಉಲ್ಲೇಖಿಸಿದರು.
ಅಲ್ಲು ಅರ್ಜುನ್ ಅವರನ್ನು ಇಂದು ಬೆಳಗ್ಗೆ ಹೈದರಾಬಾದ್​​ನ ಜುಬಿಲಿ ಹಿಲ್ಸ್‌ನಲ್ಲಿರುವ ಅವರ ನಿವಾಸದಿಂದ ಪೊಲೀಸರು ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಂಡರು. ಇದಕ್ಕೂ ಮುನ್ನ ನಟನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105 ಮತ್ತು 118 (1)ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ನಾಂಪಲ್ಲಿ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತಾದರೂ, ಹೈಕೋರ್ಟ್​​ನಿಂದ ಮಧ್ಯಂತರ ಜಾಮೀನು ಮಂಜೂರಾಗಿದೆ. ಪತ್ರಕರ್ತ ಅರ್ನಬ್ ಗೋಸ್ವಾಮಿ ಪ್ರಕರಣದಲ್ಲಿ ಬಾಂಬೆ ಕೋರ್ಟ್ ನೀಡಿದ ತೀರ್ಪಿನ ಆಧಾರದ ಮೇಲೆ ಹೈಕೋರ್ಟ್ ಈ ಆದೇಶ ಹೊರಡಿಸಿದೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...