spot_img
spot_img

ಅಮೆರಿಕದ ಇಂಧನ, ಮೂಲಸೌಕರ್ಯ ಯೋಜನೆಗಳಲ್ಲಿ ಅದಾನಿ ಗ್ರೂಪ್

spot_img
spot_img

Share post:

ಅಹಮದಾಬಾದ್, ಗುಜರಾತ್: ಅಮೆರಿಕದ ಇಂಧನ ಭದ್ರತೆ ಮತ್ತು ಮೂಲಸೌಕರ್ಯ ಯೋಜನೆಗಳಲ್ಲಿ ಅದಾನಿ ಗ್ರೂಪ್ 10 ಬಿಲಿಯನ್ ಡಾಲರ್ ಹೂಡಿಕೆ ಮಾಡಲಿದೆ ಎಂದು ಕಂಪನಿ ಬುಧವಾರ ಪ್ರಕಟಿಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಮಾಹಿತಿ ನೀಡಿದ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ಅಮೆರಿಕದಲ್ಲಿನ ಹೂಡಿಕೆಗಳಿಂದ 15,000 ಉದ್ಯೋಗವಕಾಶಗಳು ಸೃಷ್ಟಿಯಾಗಲಿವೆ ಎಂದು ಪ್ರತಿಪಾದಿಸಿದರು.

“ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಸಹಭಾಗಿತ್ವವು ಬಲವಾಗುತ್ತಿರುವ ಮಧ್ಯೆ ಅದಾನಿ ಗ್ರೂಪ್ ತನ್ನ ಜಾಗತಿಕ ಪರಿಣತಿ ಬಳಸಿಕೊಳ್ಳಲು ಮತ್ತು ಅಮೆರಿಕ ಇಂಧನ ಭದ್ರತೆ ಮತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯ ಯೋಜನೆಗಳಲ್ಲಿ 10 ಬಿಲಿಯನ್ ಡಾಲರ್ ಹೂಡಿಕೆ ಮಾಡಲು ಬದ್ಧವಾಗಿದೆ. ಈ ಮೂಲಕ 15,000 ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದೆ” ಅವರು ಎಕ್ಸ್​ನಲ್ಲಿ ಬರೆದಿದ್ದಾರೆ.

ತಮ್ಮ ಪೋಸ್ಟ್​ಗೆ ಯುಎಸ್ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಟ್ಯಾಗ್ ಮಾಡಿರುವ ಗೌತಮ್ ಅದಾನಿ, ಇತ್ತೀಚಿನ ಅಧ್ಯಕ್ಷೀಯ ಚುನಾವಣೆಯಲ್ಲಿನ ಗೆಲುವಿಗಾಗಿ ಅವರನ್ನು ಅಭಿನಂದಿಸಿದ್ದಾರೆ. ನವೆಂಬರ್ 6 ರಂದು ಕೂಡ ಗೌತಮ್ ಅದಾನಿ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಎರಡನೇ ಅವಧಿಗೆ ಜಯ ಗಳಿಸಿದ್ದಕ್ಕಾಗಿ ಟ್ರಂಪ್ ಅವರನ್ನು ಅಭಿನಂದಿಸಿದ್ದರು.

ಟ್ರಂಪ್ ದೃಢತೆ, ಧೈರ್ಯ, ದೃಢನಿಶ್ಚಯ ಮತ್ತು ಧೈರ್ಯವಂತ ವ್ಯಕ್ತಿಯಾಗಿದ್ದಾರೆ ಎಂದು ಅವರು ಹೇಳಿದ್ದರು.

“ದೃಢತೆ, ಅಚಲ ಧೈರ್ಯ, ಪಟ್ಟುಬಿಡದ ದೃಢನಿಶ್ಚಯ ಮತ್ತು ತನ್ನ ನಂಬಿಕೆಗಳಿಗೆ ನಿಷ್ಠರಾಗಿ ಉಳಿಯುವ ಧೈರ್ಯದ ಸಾಕಾರರೂಪವಾಗಿ ನಿಂತಿರುವ ಒಬ್ಬ ವ್ಯಕ್ತಿ ಭೂಮಿಯ ಮೇಲೆ ಇದ್ದರೆ, ಅದು ಡೊನಾಲ್ಡ್ ಟ್ರಂಪ್” ಎಂದು ಅದಾನಿ ಎಕ್ಸ್ ಪೋಸ್ಟ್​ನಲ್ಲಿ ಹೇಳಿದ್ದರು. ಅಮೆರಿಕದ ಪ್ರಜಾಪ್ರಭುತ್ವವು ತನ್ನ ಜನರನ್ನು

ಸಬಲೀಕರಣಗೊಳಿಸುವುದನ್ನು ಮತ್ತು ರಾಷ್ಟ್ರದ ಸ್ಥಾಪಕ ತತ್ವಗಳನ್ನು ಎತ್ತಿ ಹಿಡಿಯುವುದನ್ನು ನೋಡಲು ಖುಷಿಯಾಗುತ್ತದೆ. 47ನೇ ಅಧ್ಯಕ್ಷರಾಗಿ ಚುನಾಯಿತರಾದ ಡೊನಾಲ್ಡ್ ಟ್ರಂಪ್ ಅವರಿಗೆ ಅಭಿನಂದನೆಗಳು ಎಂದು ಅವರು ಹೇಳಿದರು.

ಅಹಮದಾಬಾದ್ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಅದಾನಿ ಗ್ರೂಪ್ ಸಾರಿಗೆ ಲಾಜಿಸ್ಟಿಕ್ಸ್ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ ದೊಡ್ಡ ಕಂಪನಿಯಾಗಿ ಬೆಳೆಯುತ್ತಿದೆ. 1988 ರಲ್ಲಿ ಬಿಲಿಯನೇರ್ ಗೌತಮ್ ಅದಾನಿ ಸ್ಥಾಪಿಸಿದ ಬಹುರಾಷ್ಟ್ರೀಯ ಸಂಸ್ಥೆ ಭಾರತದಲ್ಲಿ ದೊಡ್ಡ ಪ್ರಮಾಣದ ಮೂಲಸೌಕರ್ಯ ಅಭಿವೃದ್ಧಿ ಒದಗಿಸುವಲ್ಲಿ ಪರಿಣತಿ ಹೊಂದಿದೆ. ಅಲ್ಲದೇ ಕಂಪನಿಯು 70 ದೇಶಗಳಲ್ಲಿ ಉಪಸ್ಥಿತಿ ಹೊಂದಿದೆ.

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...