spot_img
spot_img

ಹೆರಿಗೆ, ಮಕ್ಕಳ ಆರೈಕೆ ಮಾಡಲು ನರ್ಸ್​ಗೆ ಹೆಚ್ಚುವರಿ ರಜೆ : ಹೈಕೋರ್ಟ್ ಆದೇಶ

spot_img
spot_img

Share post:

ಬೆಂಗಳೂರು: ಹೆರಿಗೆ ಮತ್ತು ಮಕ್ಕಳ ಆರೈಕೆ ರಜೆಗಾಗಿ ಮಹಿಳಾ ಉದ್ಯೋಗಿಗಳ ಹಕ್ಕುಗಳನ್ನು ಪರಿಗಣಿಸಬೇಕೆಂದು ನಿಮ್ಹಾನ್ಸ್​ಗೆ ಹೈಕೋರ್ಟ್ ಸೂಚಿಸಿದೆ.

ರಾಷ್ಟ್ರೀಯ ಮಾನಸಿಕ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಮಾದರಿ ಉದ್ಯೋಗದಾತರಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿರುವ ಹೈಕೋರ್ಟ್, ಹೆರಿಗೆ ಮತ್ತು ಮಕ್ಕಳ ಆರೈಕೆ ರಜೆಗಾಗಿ (ಸಿಸಿಎಲ್) ಮಹಿಳಾ ಉದ್ಯೋಗಿಗಳ ಹಕ್ಕುಗಳನ್ನು ಪರಿಗಣಿಸಬೇಕು ಎಂದು ಸೂಚನೆ ನೀಡಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ಪೀಠ, ನಿಮ್ಹಾನ್ಸ್​ನಲ್ಲಿ ಕೆಲಸ ಮಾಡುವ ಒಟ್ಟು 700 ಶುಶ್ರೂಷಕಿಯರಲ್ಲಿ ಒಬ್ಬರಿಗೆ 120 ದಿನಗಳ ಕಾಲ ಸಿಸಿಎಲ್ ಮಂಜೂರು ಮಾಡಿದಲ್ಲಿ ಯಾವುದೇ ರೀತಿಯ ಪ್ರತಿಕೂಲ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ ಎಂದು ತಿಳಿಸಿ, ನಿಮ್ಹಾನ್ಸ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತು.

ರಜೆಯನ್ನು ತಿರಸ್ಕರಿಸಿರುವ ಹಕ್ಕು ಉದ್ಯೋಗದಾತರಿಗೆ ಇದ್ದರೂ, ಅದು ಸಂದರ್ಭಗಳನ್ನು ಅವಲಂಬಿಸುತ್ತದೆ ಮತ್ತು ಸಿಸಿಎಲ್‌ನ ಮಹತ್ವವನ್ನು ಕಡೆಗಣಿಸಲಾಗುವುದಿಲ್ಲ ಎಂದು ಪೀಠ ತಿಳಿಸಿದೆ.

ಮಗುವಿಗೆ ಎದೆ ಹಾಲುಣಿಸುವ ಮೂಲಭೂತ ಹಕ್ಕು ತಾಯಿಗಿದೆ ಎಂಬುದಾಗಿ ಬಾಲನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯ ನಿಬಂಧನೆಗಳನ್ನು ಉಲ್ಲೇಖಿಸಿರುವ ಪೀಠ, ಬೆಳೆಯುತ್ತಿರುವ ಮಗುವಿನ ಹಿತದೃಷ್ಟಿಯಿಂದ ಏನು ಮಾಡಬೇಕು ಎಂಬ ನಿರ್ಧಾರವರನ್ನು ತೆಗೆದುಕೊಳ್ಳಲು ತಾಯಿಯ ತೀರ್ಮಾನವೇ ಅಂತಿಮ ಎಂದು ಹೇಳಿದೆ.

ಕೇಂದ್ರ ನಾಗರಿಕ ಸೇವೆಗಳ (ರಜೆ) ನಿಯಮಗಳ ಪ್ರಕಾರ ಸಿಸಿಎಲ್ ಅನ್ನು 45 ದಿನಗಳಿಗೆ ಸೀಮಿತಗೊಳಿಸಬೇಕು ಎಂಬ ನಿಯಮವಿಲ್ಲ. ಆದರೆ, ನಿಮ್ಹಾನ್ಸ್ ಹೊರಡಿಸಿದ ಮಾರ್ಗಸೂಚಿಗಳು ನಿಯಮಗಳಿಗೆ ವಿರುದ್ಧವಾಗಿವೆ ಎಂದು ತಿಳಿಸಿದ್ದ ನ್ಯಾಯಮಂಡಳಿ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಕೇರಳದ ಅನಿತಾ ಜೋಸೆಫ್ ನಿಮ್ಹಾನ್ಸ್​ನಲ್ಲಿ ಶುಶ್ರೂಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ಮಗುವಿನ ಆರೈಕೆಗಾಗಿ 180 ದಿನಗಳ ಕಾಲ ಸಿಸಿಎಲ್ ಮಂಜೂರು ಮಾಡಲಾಗಿತ್ತು. ಈ ರಜೆ ಪೂರ್ಣಗೊಳ್ಳುವ ಮುನ್ನವೇ ಅವರು, ತನ್ನ ಕುಟುಂಬದ ಸದಸ್ಯರ ಕೇರಳ ರಾಜ್ಯದಲ್ಲಿ ನೆಲೆಸಿದ್ದಾರೆ.

ಪತಿ ಖಾಸಗಿ ಕಂಪೆನಿಯೊಂದರಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಗುವಿನ ಆರೈಕೆಯಾಗಿ ಹೆಚ್ಚುವರಿಯಾಗಿ 120 ದಿನಗಳ ಕಾಲ ಸಿಸಿಎಲ್ ಮಂಜೂರು ಮಾಡಬೇಕು ಎಂದು ಮನವಿ ಮಾಡಿದ್ದರು. ಈ ಮನವಿಯನ್ನು ನಿಮ್ಹಾನ್ಸ್ ಆಡಳಿತ ಮಂಡಳಿ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಅನಿತಾ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ಕೇಂದ್ರ ಆಡಳಿತ ಮಂಡಳಿ, ಅರ್ಜಿಯನ್ನು ಪುರಸ್ಕರಿಸಿ ಹೆಚ್ಚುವರಿ ರಜೆ ಮಂಜೂರಿಗೆ ಸೂಚನೆ ನೀಡಿತ್ತು. ಇದನ್ನು ಪ್ರಶ್ನಿಸಿ ನಿಮ್ಹಾನ್ಸ್ ಹೈಕೋರ್ಟ್ ಮೆಟ್ಟಿಲೇರಿತ್ತು.

ವಿಚಾರಣೆ ವೇಳೆ ನಿಮ್ಹಾನ್ಸ್ ಪರ ವಕೀಲರು, ನಿಮ್ಹಾನ್ಸ್‌ನ ಮಾರ್ಗಸೂಚಿಗಳ ಪ್ರಕಾರ ವರ್ಷದಲ್ಲಿ 45 ದಿನಗಳ ಕಾಲ ಮಾತ್ರ ಸಿಸಿಎಲ್ ಪಡೆಯುವುದಕ್ಕೆ ಅವಕಾಶವಿದೆ. ಅದಕ್ಕಿಂತ ಹೆಚ್ಚು ದಿನಗಳ ಕಾಲ ಸಿಸಿಎಲ್ ಪಡೆಯುವುದಕ್ಕೆ ಅವಕಾಶವಿಲ್ಲ.

ಅಲ್ಲದೆ, ತೀರ್ವ ನಿಗಾ ಘಟಕ(ಐಸಿಯು)ದಲ್ಲಿ ಸೇವೆ ಸಲ್ಲಿಸುವ ಶುಶ್ರೂಷಕಿಯರ ಸಂಖ್ಯೆ ಕೊರತೆ ಇದೆ. ಈ ಕಾರಣದಿಂದ ಹೆಚ್ಚುವರಿ ರಜೆ ಮಂಜೂರು ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ವಾದ ಮಂಡಿಸಿದ್ದರು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...