ರಾಜ್ಯ ಸರ್ಕಾರಕ್ಕೆ ದೊಡ್ಡ ಗಿಫ್ಟ್ ನೀಡಿದೆ Central Government! (ಅನ್ನಭಾಗ್ಯ )
ಕರ್ನಾಟಕಕ್ಕೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ರಾಜ್ಯಕ್ಕೆ ಅಕ್ಕಿ ನೀಡುವ ಬಗ್ಗೆ ಸ್ವತಃ ಕೇಂದ್ರ ಆಹಾರ ಸಚಿವರಾದ ಪ್ರಲ್ಹಾದ್ ಜೋಶಿ(Food Minister Pralhad Joshi) ಘೋಷಣೆ ಮಾಡಿದ್ದಾರೆ. ನಿಜಕ್ಕೆ ರಾಜ್ಯ ಸರ್ಕಾರಕ್ಕೆ ಒಂದು ದೊಡ್ಡ ಉಡುಗೊರೆ ನೀಡಿದೆ ಕೇಂದ್ರ ಸರಕಾರ!
ಕೇಂದ್ರ ಸರ್ಕಾರ ಮಾಡಿದ್ದು ಏನು? ನಿಮಗೆ ಗೊತ್ತಾ?
ಅಕ್ಕಿ ನೀಡುವಂತೆ ಕರ್ನಾಟಕ ಸರ್ಕಾರ ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಿತ್ತು. ರಾಜ್ಯದಿಂದ ಸಚಿವ ಕೆಹೆಚ್ ಮುನಿಯಪ್ಪ ಖುದ್ದು ದೆಹಲಿಗೆ ಬೇಟಿ ಮಾಡಿ ಕೇಂದ್ರ ಸಚಿವರ ಜತೆ ಮಾತುಕತೆಯನ್ನೂ ನಡೆಸಿದ್ದರು. ಆದರೆ, ಪ್ರಯೋಜನವಾಗಿರಲಿಲ್ಲ.
ನಂತರ ರಾಜ್ಯ ಸರ್ಕಾರದ ಪಾಲಿನ ಅಕ್ಕಿಯ ಬದಲು ಅದರ ಮೊತ್ತವನ್ನು ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ನೀಡಲು ಆರಂಭಿಸಲಾಗಿತ್ತು. ಇದೀಗ ಕೇಂದ್ರದಿಂದ ಅಕ್ಕಿ ದೊರೆತರೆ ರಾಜ್ಯ ಸರ್ಕಾರವು ಫಲಾನುಭವಿಗಳಿಗೆ ಅಕ್ಕಿಯನ್ನೇ ವಿತರಿಸಬಹುದಾಗಿದೆ.
Food Minister Pralhad Joshi ಹೇಳಿದ್ದೇನು ?
ರಾಜ್ಯ ಸರ್ಕಾರದಿಂದ ಒಂದು ಆರೋಪ ಕೇಳಿ ಬಂದಿತ್ತು! ಅದು ಏನು ನಿಮ್ಮ ಮನಸಿನಲ್ಲಿ ಪ್ರಶ್ನೆ ಮೂಡಿರಲೇಬೇಕು ಅದು ಏನು ಎಂದು ನೀವೇ ನೋಡಿ!
ಅನ್ನಭಾಗ್ಯ ಯೋಜನೆಯಡಿ ಕರ್ನಾಟಕ ಸರ್ಕಾರದ ಪಾಲಿನ ಉಚಿತ 5 ಕೆಜಿ ಅಕ್ಕಿ ನೀಡಲು ಕೇಂದ್ರದಿಂದ ಅಕ್ಕಿ ದೊರೆಯುತ್ತಿಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವರು ಆರೋಪಿಸುತ್ತಲೇ ಬಂದಿದ್ದಾರೆ. ದುಡ್ಡು ಕೊಟ್ಟರೂ ಅಕ್ಕಿ ಕೊಡಲು ಕೇಂದ್ರ ಸರ್ಕಾರ ಸಿದ್ಧವಿಲ್ಲ. ಬಡವರ ಅಕ್ಕಿ ವಿಚಾರದಲ್ಲೂ ರಾಜಕೀಯ ಮಾಡುತ್ತಿದೆ ಎಂಬ ಆರೋಪ ನಿರಂತರ ಕೇಳಿಬಂದಿತ್ತು.
ಕೊನೆಗೂ ಅಕ್ಕಿ ನೀಡಿದ ಕೇಂದ್ರ ಸರ್ಕಾರ!
ರಾಜ್ಯ ಸರಕ್ರದ ಮನವಿ ಬಂದರೆ ಹೆಚ್ಚುವರಿ ಅಕ್ಕಿ ಕೊಡಲಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೆಜಿಗೆ 28ರೂ.ನಂತೆ ನಾವು ಅಕ್ಕಿ ಕೊಡಲು ಸಿದ್ಧರಿದ್ದೇವೆ. ಎಷ್ಟು ಬೇಕಾದರೂ ಅಕ್ಕಿಕೊಡಲಿದ್ದೇವೆ ಎಂದು Food Minister Pralhad Joshi ಹೇಳಿದ್ದಾರೆ! ಇನ್ನು Anna bhagya schemeಗೆ ಅಕ್ಕಿ ಸಿಗೋದು ಗ್ಯಾರಂಟಿ! ಎಂದು ಹೇಳಿದ್ದಾರೆ Food Minister Pralhad Joshi!
ಅನ್ನಭಾಗ್ಯದ ಹೆಸರಿನ ಮೇಲೆ ರಾಜಕೀಯ?
ಅಕ್ಕಿ ಕೊಡಲು ಕಾರಣ ಏನು ಎಂದು ನೀವು ಯೋಚಿಸುತ್ತಿರಬಹುದು ಅದು ಏನು ಅಂದ್ರೆ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಅಂದುಕೊಂಡಂತೆಯೇ ನಡೆಯಲಿದೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದರು. ಪಾದಯಾತ್ರೆಗೆ ಜೆಡಿಎಸ್ ಬೆಂಬಲವಿಲ್ಲದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹೆಚ್ಡಿ ಕುಮಾರಸ್ವಾಮಿ ಜತೆ ಮಾತುಕತೆ ಮಾಡಿ ಪಾದಯಾತ್ರೆ ನಡೆಸಲಿದ್ದೇವೆ. ಜೊತೆಗೆ ಜನರ ಮನಸ್ಸನ್ನು ಓಲೈಸಲು ಕೇಂದ್ರ ಸರ್ಕಾರ ಈ ಒಂದು ಕಾರ್ಯ ಮಾಡಿದೆ ಎಂದು ಕಾಂಗ್ರೆಸ್ ಹೇಳುತ್ತಿದೆ! ಯಾರು ನಿಜ ಯಾರು ಸುಳ್ಳು ಎಂಬ ಪ್ರಶ್ನೆಗೆ ಉತ್ತರ ನೀವೇ ಕೊಡಬೇಕು! ಓದುಗರೇ..