ನವದೆಹಲಿ: ಎನ್ಸಿಪಿ-ಎಸ್ಪಿ ಮುಖ್ಯಸ್ಥ ಶರದ್ ಪವಾರ್, ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಖ್ಯಾತ ವಕೀಲ ಮತ್ತು ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ನಡೆಸಿದ ಸಭೆಯಲ್ಲಿ ಈ ನಿರ್ಧಾರ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಇತ್ತೀಚಿಗೆ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಇವಿಎಂ ದುರ್ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಇಂಡಿಯಾ ಒಕ್ಕೂಟವು ಸುಪ್ರೀಂ ಕೋರ್ಟ್ ಮೊರೆ ಹೋಗಲು ಸಜ್ಜಾಗಿದೆ.
ಎನ್ಸಿಪಿಯ ಶರದ್ ಪವಾರ್ ಬಣದ ನಾಯಕ ಪ್ರಶಾಂತ್ ಜಗ್ತಾಪ್ ಸುಪ್ರೀಂ ಕೋರ್ಟ್ ಕದ ತಟ್ಟಲು ನಿರ್ಧರಿಸಿದ್ದಾರೆ. ಪುಣೆಯ ಜಿಲ್ಲೆಯ ಹದಾಪ್ಸರ್ ಕ್ಷೇತ್ರದಿಂದ (Hadapsar) ಅವರು ಚುನಾವಣಾ ಕಣಕ್ಕೆ ಇಳಿದಿದ್ದರು.
ಬಿಜೆಪಿ ನೇತೃತ್ವ ಮಹಾಯುತಿ ಮೈತ್ರಿಯು ಇವಿಎಂ ದುರ್ಬಳಕೆ ಮಾಡಿಕೊಂಡಿದೆ. ಇದರಿಂದಲೇ ಚುನಾವಣೆಯಲ್ಲಿ ಸೋಲು ಉಂಟಾಗಿದೆ ಎಂದು ಇಂಡಿಯಾ ಬ್ಲಾಕ್ ಒಕ್ಕೂಟ ಆರೋಪಿಸಿದೆ.
ಎನ್ಸಿಪಿ-ಎಸ್ಪಿ ಮುಖ್ಯಸ್ಥ ಶರದ್ ಪವಾರ್, ಎಎಪಿ ಸಂಚಾಲಕ, ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಖ್ಯಾತ ವಕೀಲ ಮತ್ತು ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಅವರು ನಡೆಸಿದ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಲಾಗಿದೆ. ಪವಾರ್ ಅವರು ವಿಧಾನಸಭೆಯಲ್ಲಿ ಸೋತ ತಮ್ಮ ಪಕ್ಷದ ನಾಯಕರನ್ನು ಭೇಟಿಯಾಗುತ್ತಿದ್ದಾರೆ.
ಕಳೆದ ತಿಂಗಳು ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ 288 ಕ್ಷೇತ್ರದಲ್ಲಿ 235 ಸ್ಥಾನಗಳನ್ನು ಗೆದ್ದಿತ್ತು. ಇನ್ನು ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ ಮೈತ್ರಿ ಕೇವಲ 46 ಕ್ಷೇತ್ರದಲ್ಲಿ ಗೆಲುವು ಸಾಧಿಸಿತು.
ಈ ಸಭೆಯಲ್ಲಿ ಭಾಗಿಯಾಗಿದ್ದ ಕೇಜ್ರಿವಾಲ್ ಮುಂಬರಲಿರುವ ದೆಹಲಿ ಚುನಾವಣೆಯಲ್ಲಿ ಮತದಾರರ ಪಟ್ಟಿ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ.