spot_img
spot_img

ವಯನಾಡಿನ ದುರಂತಕ್ಕೆ ಮಿಡಿದ ಅಲ್ಲು ಅರ್ಜುನ್- ಸಂತ್ರಸ್ತರಿಗೆ 25 ಲಕ್ಷ ದೇಣಿಗೆ ನೀಡಿದ ನಟ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕೇರಳದ ವಯನಾಡಿನಲ್ಲಿ (Wayanad Landslides) ಸಂಭವಿಸಿದ ಭೀಕರ ಭೂಕುಸಿತದಲ್ಲಿ ಸತ್ತವರ ಸಂಖ್ಯೆ ಈಗ 300 ದಾಟಿದೆ. ಈ ದುರಂತದಲ್ಲಿ ಮನೆಯನ್ನು, ಕುಟುಂಬಸ್ಥರನ್ನು ಕಳೆದುಕೊಂಡು ಹಲವರು ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ ಸಂತ್ರಸ್ತರ ಸಹಾಯಕ್ಕೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಮುಂದಾಗಿದ್ದಾರೆ.

ವಯನಾಡು ಭೂಕುಸಿತ ದುರಂತದ ನಿಮಿತ್ತ ಸಂಕಷ್ಟದಲ್ಲಿರುವವರಿಗೆ ಈಗ ಅಲ್ಲು ಅರ್ಜುನ್ 25 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ಕುರಿತು ಸ್ವತಃ ನಟ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಹೊಸ ಅಡ್ವೆಂಚರ್ ಮಾದರಿಯನ್ನು ಪರಿಚಯಿಸಿದ ಜಾವ ಯೆಜ್ಡಿ! ಇಷ್ಟೊಂದು ಕಡಿಮೆ ಬೆಲೆಗೆ ಸಿಗುತ್ತಿದ್ದೆಯೆ.??

ವಯನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಕೇರಳದ ಜನರು ನನಗೆ ಯಾವಾಗಲೂ ತುಂಬಾ ಪ್ರೀತಿಯನ್ನು ನೀಡಿದ್ದಾರೆ. ಹಾಗಾಗಿ ಈ ಸಮಯದಲ್ಲಿ ಕೇರಳ ಸಿಎಂ ಪರಿಹಾರ ನಿಧಿಗೆ 25 ಲಕ್ಷ ರೂ. ದೇಣಿಗೆ ನೀಡಲು ಬಯಸುತ್ತೇನೆ. ನಿಮ್ಮೆಲ್ಲರ ಸುರಕ್ಷೆ ಮತ್ತು ಶಕ್ತಿಗಾಗಿ ಪ್ರಾರ್ಥಿಸುತ್ತೇನೆ ಎಂದು ಅಲ್ಲು ಅರ್ಜುನ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಈಗ ನಟನ ನಡೆಗೆ ಅಭಿಮಾನಿಗಳಿಂದ ಶ್ಲಾಘನೆ ವ್ಯಕ್ತವಾಗಿದೆ.

ಅಂದಹಾಗೆ, ವಯನಾಡು ಭೂಕುಸಿತ ದುರಂತ ಹಿನ್ನೆಲೆ ಈಗಾಗಲೇ ರಶ್ಮಿಕಾ ಮಂದಣ್ಣ (Rashmika Mandanna), ಸೂರ್ಯ ದಂಪತಿ, ಮಮ್ಮುಟ್ಟಿ, ಚಿಯಾನ್ ವಿಕ್ರಮ್, ದುಲ್ಕರ್ ಸಲ್ಮಾನ್ ಸೇರಿದಂತೆ ಅನೇಕರು ಕೇರಳದ ಸಿಎಂ ಫಂಡ್‌ಗೆ ಲಕ್ಷ ಲಕ್ಷ ದೇಣಿಗೆ ನೀಡುವ ಮೂಲಕ ಸಹಾಯ ಮಾಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

ಅನಕ್ಷರಸ್ಥರಿಗೆ ಅಕ್ಷರ : ನಾರಾಯಣ ಸ್ವಾಮಿ

ಚಿಂತಾಮಣಿಯ ಶಿಕ್ಷಕ ಡಾ. ಆರ್‌. ನಾರಾಯಣಸ್ವಾಮಿ ತಮ್ಮ ಶಿಕ್ಷಕ ವೃತ್ತಿಯ ಜತೆಗೆ ಸಮಾಜದಲ್ಲಿನ ಅಸಂಖ್ಯಾತ ಅನಕ್ಷರಸ್ಥರರನ್ನು ಸಾಕ್ಷರನ್ನಾಗಿ ಮಾಡುವ ಹಾಗೂ ಶಾಲೆ ಸಮುದಾಯದಕ್ಕೆ ನೈರ್ಮಲ್ಯದ...

ಮೊಟ್ಟೆ-ಬಾಳೆಹಣ್ಣು ವಿತರಣೆ : ಶಿಕ್ಷಕರ ಅಮಾನತು

ಕಲಬುರಗಿ: ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ, ಬಾಳೆಹಣ್ಣು ಹಾಗೂ ಸೇಂಗಾ ಚೆಕ್ಕಿ ವಿತರಿಸುವ ಜವಾಬ್ದಾರಿ ಮುಖ್ಯ ಶಿಕ್ಷಕರ ಮತ್ತು...

ಬಿಜೆಪಿಯ ಭರತ್ ಬೊಮ್ಮಾಯಿ ಮುನ್ನಡೆ ಸಾಧನೆ

ಶಿಗ್ಗಾಂವ : ವಿಧಾನಸಭಾ ಉಪಚುನಾವಣೆ ಫಲಿತಾಂಶ 2024 ಶನಿವಾರದಂದು ಬಿಗುವಿನ ಪರಾಕಾಷ್ಠೆಯನ್ನು ತಲುಪಿದ್ದು, 7ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ...

By-election : 2024 ರ ಕರ್ನಾಟಕ ಉಪ-ಚುನಾವಣೆ ಫಲಿತಾಂಶ

ಚೆನ್ನಪಟ್ಟಣ: ಸಂಡೂರು, ಶಿಗ್ಗಾಂವ ಮತ್ತು ಚನ್ನಪಟ್ಟಣ ಕ್ಷೇತ್ರಗಳು ಲಭ್ಯವಾಗಿ ಹಿಂದಿನ ಪ್ರತಿನಿಧಿಗಳು ಮೇ ತಿಂಗಳಲ್ಲಿ ಲೋಕಸಭೆಗೆ ಆಯ್ಕೆಯಾದ ನಂತರ ಈ ಚುನಾವಣಾ ಕದನವು ಪ್ರಾರಂಭವಾಯಿತು. ಕಾಂಗ್ರೆಸ್‌ನಿಂದ...