spot_img
spot_img

ನಕಲಿ ವಸ್ತು ಹಿಂದಿರುಗಿಸಿ ಅಮೇಜಾನ್‌ಗೆ ₹69 ಲಕ್ಷ ವಂಚನೆ

spot_img
spot_img

Share post:

ಬೆಂಗಳೂರು: ಇ – ಕಾಮರ್ಸ್ ಕಂಪನಿ ಅಮೆಜಾನ್​ಗೆ ಲಕ್ಷಾಂತರ ರೂ. ವಂಚಿಸಿದ ಆರೋಪದಲ್ಲಿ ದಾಖಲಾದ ಎಫ್‌ಐಆರ್ ರದ್ದುಪಡಿಸಲು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.

ಅಂತರ್ಜಾಲ ವಾಣಿಜ್ಯ ವ್ಯಪಾರ ಕಂಪನಿಯಾಗಿರುವ (ಇ-ಕಾಮರ್ಸ್) ಅಮೆಜಾನ್‌ನಿಂದ ಅಸಲಿ ಉತ್ಪನ್ನಗಳನ್ನು ಖರೀದಿಸಿ, ಬಳಿಕ ನಕಲಿ ವಸ್ತುಗಳನ್ನು ಹಿಂದಿರುಗಿಸುವ ಮೂಲಕ ಒಟ್ಟು 69 ಲಕ್ಷ ರೂ. ಮರುಪಾವತಿ ಪಡೆದು ವಂಚಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಎಫ್‌ಐಆರ್ ರದ್ದು ಕೋರಿ ಬೆಂಗಳೂರಿನ ಸೌರೀಷ್ ಬೋಸ್ ಮತ್ತು ದೀಪನ್ವಿತ ಘೋಷ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಪ್ರಕಟಿಸಿದೆ. ಜೊತೆಗೆ, ಇದೊಂದು ಆಧುನಿಕ ಯುಗದ ಅಪರಾಧ ಎಂದು ಮೌಖಿಕವಾಗಿ ನುಡಿದ ನ್ಯಾಯಮೂರ್ತಿಗಳು, ಅರ್ಜಿ ವಜಾಗೊಳಿಸಿರುವುದಾಗಿ ತಿಳಿಸಿದರು. ವಿಸ್ತೃತ ತೀರ್ಪು ಇನ್ನಷ್ಟೇ ಪ್ರಕಟವಾಗಬೇಕಿದೆ.

ಹಲವು ವರ್ಷಗಳ ಕಾಲ ಅಮೆಜಾನ್‌ನಿಂದ ಅಸಲಿ ಉತ್ಪನ್ನಗಳನ್ನು ಖರೀದಿಸಿ, ಆನಂತರ ನಕಲಿ ಉತ್ಪನ್ನ ಎಂದು ಹಿಂದಿರುಗಿಸಿ ಮರುಪಾವತಿ ಪಡೆಯುತ್ತಿರುವ ಕಾರ್ಯ ವಿಧಾನವನ್ನು ಕಂಪನಿಯ ಉದ್ಯೋಗಿ ಪತ್ತೆ ಹಚ್ಚಿದ್ದರು. 2017ರಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 420 (ವಂಚನೆ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66ರಡಿ ದೂರು ದಾಖಲಿಸಲಾಗಿತ್ತು.

ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ವಿರುದ್ಧದ ಆರೋಪಗಳ ಕುರಿತು ಆಶ್ಚರ್ಯ ವ್ಯಕ್ತಪಡಿಸಿದ್ದ ನ್ಯಾಯಾಲಯ, ”ಪ್ರಕರಣದಲ್ಲಿ ದಿಗ್ಭ್ರಮೆ ಹುಟ್ಟಿಸುವ ವಿಚಾರಗಳು ಅಡಗಿವೆ. ಅವುಗಳನ್ನು ಪರಿಗಣಿಸಬೇಕಿದೆ. ಇದೊಂದು ಚತುರ ವಂಚನಾ ವಿಧಾನ” ಎಂದು ನುಡಿದಿತ್ತು.

ಅಮೆಜಾನ್‌ನಲ್ಲಿ ದುಬಾರಿ ಬೆಲೆಯ ಉತ್ಪನ್ನಗಳನ್ನು ಖರೀದಿಸುತ್ತಿದ್ದ ಬೋಸ್, ಅವುಗಳಿಗೆ ತನ್ನ ಬ್ಯಾಂಕ್ ಖಾತೆಯಿಂದ ಹಣ ಪಾವತಿಸುತ್ತಿದ್ದರು. ಅದು ವಿಳಾಸಕ್ಕೆ ತಲುಪಿದ ಬಳಿಕ 24 ಗಂಟೆಗಳಲ್ಲಿ ಅಸಲಿ ಉತ್ಪನ್ನಗಳ ಬಾಕ್ಸ್‌ಗಳಿಗೆ ನಕಲಿ ಉತ್ಪನ್ನಗಳನ್ನು ಇಟ್ಟು ಅಮೆಜಾನ್‌ಗೆ ಮರಳಿಸಿ, ನಗದು ಮರುಪಾವತಿ ಪಡೆಯುತ್ತಿದ್ದರು ಎಂದು ದೂರಿನಲ್ಲಿ ವಿವರಿಸಲಾಗಿತ್ತು.

ಪ್ರಕರಣದ ಸಂಬಂಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕಾಗ್ನಿಜೆನ್ಸ್ ತೆಗೆದುಕೊಂಡಿತ್ತು. ಇದನ್ನು ರದ್ದುಪಡಿಸಬೇಕು ಎಂದು ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...