ಮೈಸೂರು: ಮೈಸೂರು ದಸರಾ (Mysore Dasara) ಅಂಗವಾಗಿ ಶನಿವಾರ ವಿಜಯದಶಮಿಯಂದು (Vijaya Dashami) ಅದ್ಧೂರಿ ಜಂಬೂ ಸವಾರಿ ನಡೆಯಿತು. ಅಕ್ಟೋಬರ್ 3 ರಂದು ದಸರಾ (Dasara) ಉದ್ಘಾಟನೆಯಾದಾಗಿನಿಂದ ಮೈಸೂರು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿದೆ. ಮೈಸೂರಿನ ಜಂಬೂಸವಾರಿಯಲ್ಲಿ 750ಕೆಜಿಯ ಚಿನ್ನದ ಅಂಬಾರಿಯನ್ನು (Ambari) ಹೊತ್ತು ಅಭಿಮನ್ಯು (Abhimanyu) ಆನೆ ರಾಜಬೀದಿಗಳಲ್ಲಿ ರಾಜಗಾಂಭಿರ್ಯದಿಂದ ಸಾಗಿದನು. ಈ ಉತ್ಸವವನ್ನು ಸಾವಿರಾರು ಜನರು ಕಣ್ಣುತುಂಬಿಸಿಕೊಂಡರು.
ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಮಧ್ಯಾಹ್ನ 1:55ರ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಮೂಲಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಿದರು.
ವಿಶ್ವವಿಖ್ಯಾತ ಜಂಬೂಸವಾರಿಯ ಸಲುವಾಗಿ ಅಭಿಮನ್ಯು ಆನೆ 750 ಕೆ.ಜಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ರಾಜಬೀದಿಗಳಲ್ಲಿ ಹೆಜ್ಜೆ ಹಾಕಿದನು. ಈ ಐತಿಹಾಸಿಕ ಕ್ಷಣವನ್ನು ದೇಶ- ವಿದೇಶ ಮತ್ತು ನೆರೆಹೊರೆಯ ಜಿಲ್ಲೆಯ ಲಕ್ಷಾಂತರ ಮಂದಿ ಕಣ್ಣುಂಬಿಕೊಳ್ಳಲು ರಾಜ ಬೀದಿಗಳಲ್ಲಿ ಕಿಕ್ಕಿರಿದು ಸೇರಿದ್ದರು.
ಈ ಜಂಬೂಸವಾರಿ ವೀಕ್ಷಣೆಗೆ ಅರಮನೆಯ ಆವರಣದಲ್ಲಿ 40 ಸಾವಿರ ಆಸನ ವ್ಯವಸ್ಥೆ
ಮಾಡಲಾಗಿತ್ತು. ಆದರೂ ಅರಮನೆಯ ಬಳಿಕ ಚಿಕ್ಕ ಗಡಿಯಾರ, ಕೆ.ಆರ್.ಆಸ್ಪತ್ರೆ ಹಾಗೂ ಬನ್ನಿಮಂಟಪದ ರಸ್ತೆಗಳಲ್ಲಿ ಜನ ದಟ್ಟಣೆ ಹೆಚ್ಚಾಗಿದೆ.
ಅಷ್ಟೇ ಅಲ್ಲದೇ ಜಂಬೂಸವಾರಿ ಸಾಗುವ ಸಮಯದಲ್ಲಿ ಸಾರ್ವಜನಿಕರು ಡಾ.ರಾಜ್‌ಕುಮಾರ್ ಪಾರ್ಕ್‌ನ ಮರಗಳ ಮೇಲೆ ಹಾಗೂ ಕಟ್ಟಡಗಳ ಮೇಲೆ ನಿಂತು ವೀಕ್ಷಿಸಿದರು.
ಬೆಳಗ್ಗೆ 8 ಗಂಟೆಗೆ ಚಾಮುಂಡಿ ಬೆಟ್ಟದಿಂದ ಉತ್ಸವ ಮೂರ್ತಿ ಮೆರವಣಿಗೆ ಮೂಲಕ ಅರಮನೆಗೆ ಆಗಮಿಸಲಿದೆ. 10.15ಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಉತ್ತರ ಪೂಜೆ ನೆರವೇರಿಸಿದರು. ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಕುದುರೆ ಸವಾರಿ ತೊಟ್ಟಿಗೆ ಆಗಮಿಸಿತು, ಬಳಿಕ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ 10.45ರಿಂದ ಜಟ್ಟಿ ಕಾಳಗ ನಡೆಯಿತು.
11.20 ರಿಂದ 11.45ರವರೆಗೆ ಅರಮನೆ ಆವರಣದ ಭುವನೇಶ್ವರಿ ದೇಗುಲಕ್ಕೆ ವಿಜಯಯಾತ್ರೆ ಹೊರಟಿತು. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬನ್ನಿಪೂಜೆ ನೆರವೇರಿಸಿದರು. ನಂತರ ಅರಮನೆಗೆ ಆಗಮಿಸಿ ಕಂಕಣ ವಿಸರ್ಜನೆ ಮಾಡಿದ ಬಳಿಕ, ಮಧ್ಯಾಹ್ನ ಶುಭ ಮಕರ ಲಗ್ನದಲ್ಲಿ 1.41ರಿಂದ 2.10ರ ನಡುವೆ ನಂದಿ ಧ್ವಜಕ್ಕೆ ಪೂಜೆ ನೆರವೇರಿಸಲಾಯಿತು.
ಸಂಜೆ ಕುಂಭ ಲಗ್ನದಲ್ಲಿ 4 ರಿಂದ 4.30ರ ನಡುವೆ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದರು. ಅಂಬಾರಿ ಒಳಗಿನ ಚಾಮುಂಡೇಶ್ವರಿ ದೇವಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಲಾಯಿತು.