Bangalore News:
ANGANWADI ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು.ರಾಜ್ಯದಲ್ಲಿ ANGANWADI ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಚಿವರು, ವಿವಿಧ ಸಂಘಟನೆಗಳೊಂದಿಗೆ ಚರ್ಚಿಸಿದರು.ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದುಕೊರತೆಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು.
Efforts to increase honorarium: ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ”ನಾನು ಎಂದಿಗೂ ANGANWADI ಕಾರ್ಯಕರ್ತೆಯರ ಪರ. ಇಡೀ ದೇಶಕ್ಕೆ ನಮ್ಮ ಅಂಗನವಾಡಿಗಳು ಮಾದರಿಯಾಗಿವೆ. ANGANWADI ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ, ಮುಂದಿನ ಬಜೆಟ್ನಲ್ಲಿ ಗೌರವಧನ ಹೆಚ್ಚಿಸಲು ಪ್ರಯತ್ನಿಸಲಾಗುವುದು” ಎಂದು ತಿಳಿಸಿದರು.
ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಎನ್. ಸಿದ್ದೇಶ್ವರ್, ಸಚಿವರ ಆಪ್ತ ಕಾರ್ಯದರ್ಶಿ ಡಾ. ಟಿ.ಎಚ್. ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಎಐಟಿಯುಸಿ ಕಾರ್ಯದರ್ಶಿ ಎಂ.ಜ ಯಮ್ಮ, ಶಿವಶಂಕರ್, ಸಿಐಟಿಯು ಸಂಘಟನೆಯ ಸುನಂದ, ಎಐಯುಟಿಯುಸಿ ಉಮಾ, ಸ್ವತಂತ್ರ ಸಂಘಟನೆಯ ಪ್ರೇಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನು ಓದಿರಿ : HOW TO STORE FOOD IN FRIDGE : ನೀವು ಫ್ರಿಡ್ಜ್ನಲ್ಲಿ ಇಟ್ಟಿರುವ ಆಹಾರ ಸೇವಿಸುತ್ತೀರಾ?