spot_img
spot_img

10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Entrepreneurship : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಇವರ ವತಿಯಿಂದ ಸ್ವಂತ ಉದ್ಯೋಗ ಸ್ಥಾಪಿಸಲು ಇಚ್ಚಿಸುವವರಿಗಾಗಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಯಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುವುದು.

ಕಾರ್ಯಕ್ರಮದಲ್ಲಿ ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲರ ಗುಣಲಕ್ಷಣಗಳು, ನಾಯಕತ್ವದ ಗುಣಲಕ್ಷಣಗಳು, ಉದ್ಯಮವನ್ನು ಆಯ್ಕೆ ಮಾಡುವ ವಿಧಾನ, ವ್ಯಾಪಾರೋದ್ಯಮಗಳ ಅವಕಾಶಗಳು, ಉದ್ಯಮಗಳನ್ನು ಪ್ರಾರಂಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ, ಸಾಲ ಮತ್ತು ಹಣಕಾಸು ಮತ್ತು ಹಣಕಾಸೇತರ ಸೌಲಭ್ಯಗಳ ಬಗ್ಗೆ, ಲೆಕ್ಕ ಪತ್ರ ನಿರ್ವಹಣೆ, ಯೋಜನಾ ವರದಿ ತಯಾರಿಕೆ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಲ್ಲಿ ಸಹಾಯ ನೀಡುವುದು ಹಾಗೂ ಈಗಾಗಲೇ ಸಿಡಾಕ್ ಮುಖಾಂತರ ತರಬೇತಿ ಪಡೆದು ಉದ್ಯಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗುತ್ತಿರುವ ಉದ್ಯಮಶೀಲರ ಅನುಭವ ಹಂಚಿಕೆ ಮತ್ತು ಸಂಬಂಧಪಟ್ಟ ಇತ್ಯಾದಿ ವಿಷಯಗಳ ಬಗ್ಗೆ ಅನುಭವಿ ಅತಿಥಿ ಬೋಧಕರಿಂದ ಉಪನ್ಯಾಸ/ಮಾಹಿತಿ ನೀಡಲಾಗುವದು.

ಆಸಕ್ತ ಬಳ್ಳಾರಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು 18 ವರ್ಷ ದಿಂದ 45 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಓದಲು, ಬರೆಯಲು ಬರುತ್ತಿರಬೇಕು.

ಅರ್ಜಿಯನ್ನು ನಗರದ ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕಟ್ಟಡದ ಸಿಡಾಕ್‌ನ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು ಅಥವಾ ದೂರವಾಣಿ ಮೂಲಕ ನೋಂದಾಯಿಸಿಕೊಳ್ಳಬಹುದು.

ಅರ್ಜಿ ಸಲ್ಲಿಸಲು ಅಥವಾ ನೋಂದಾಯಿಸಿಕೊಳ್ಳಲು ನ.16 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕಟ್ಟಡದ ಸಿಡಾಕ್‌ನ ಜಂಟಿ ನಿರ್ದೇಶಕರ ಕಚೇರಿ ಅಥವಾ ಮೊ.9449226221, 7483538942 ಗೆ ಸಂಪರ್ಕಿಸಬಹುದು ಎಂದು ಸಿಡಾಕ್‌ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಬಿಗ್​ಬಾಸ್​ ಕೊಟ್ಟ ಟಾಸ್ಕ್​ ಆಡಲು ಸ್ಪರ್ಧಿಗಳ ಹರಸಾಹಸ

ಕನ್ನಡದ ಬಿಗ್​ಬಾಸ್​ ಸೀಸನ್​ 11ರಲ್ಲಿ ವೈಲ್ಡ್​ ಕಾರ್ಡ್​ ಸ್ಪರ್ಧಿಗಳು ಸಖತ್​ ಸದ್ದು ಮಾಡುತ್ತಿದ್ದಾರೆ. ತಮ್ಮ ಹಳ್ಳಿ ಸೊಗಡಿನ ರೀತಿಯಲ್ಲೇ ಹಾಡು ಹಾಡಿ ವೀಕ್ಷಕರಿಗೆ ಮನರಂಜನೆ...

ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಕನ್ಯಾಕುಮಾರಿ ಮತ್ತು ಶ್ರೀಲಂಕಾ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮನ್ನಾರ್ ಗಲ್ಫ್...

ಹಿಂದುಳಿದ ವರ್ಗಗಳ ಮೀಸಲಾತಿಗೆ ಆಗ್ರಹ : ಪಂಚಮಸಾಲಿಗರ ಹೋರಾಟ ತೀವ್ರ!

ಬೆಂಗಳೂರು: ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ವಿರೋಧಿಸಿ ಸುವರ್ಣಸೌಧದ ಬಳಿ ಇರುವ ಅಂಬೇಡ್ಕರ್ ಪ್ರತಿಮೆ ಎದುರು ವಿಪಕ್ಷ ನಾಯಕ ಆರ್, ಅಶೋಕ್ ನೇತೃತ್ವದಲ್ಲಿ...

ಆಸ್ತಿ ತೆರಿಗೆ ಕಟ್ಟಲು ನಿರಾಕರಣೆ : ರಸ್ತೆ ಸರಿಪಡಿಸಿದ ಪಂಚಾಯಿತಿ ಸದಸ್ಯರು

ಬೆಂಗಳೂರು: ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂಬ ನಾಗರಿಕರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಹಾಲನಾಯಕನಹಳ್ಳಿ ಪಂಚಾಯಿತಿಯ 15 ಸದಸ್ಯರು ತಮ್ಮ ಜೇಬಿನಿಂದ ಸುಮಾರು 5 ಲಕ್ಷ...