ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ (ಹೆಚ್‌ಎಎಲ್) ನಾನ್ ಎಕ್ಸಿಕ್ಯೂಟಿವ್ ಕೇಡರ್‌ನ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಐಟಿಐ ಹಾಗೂ ಡಿಪ್ಲೊಮ ಪಾಸಾದವರು ಉದ್ಯೋಗಕ್ಕಾಗಿ ಮುನ್ನೋಡುತ್ತಿದ್ದಲ್ಲಿ, ಈಗಲೇ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ ಹುದ್ದೆಗಳಿಗೆ ಅರ್ಜಿ ಹಾಕಿರಿ. ಅರ್ಜಿ ಸಲ್ಲಿಸಲು ಡಿಸೆಂಬರ್ 22 ರವರೆಗೆ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಿದವರನ್ನು ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಡಿಪ್ಲೊಮ, ಐಟಿಐ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಟೆಕ್ನೀಷಿಯನ್ ಹಾಗೂ ಆಪರೇಟರ್ ಹುದ್ದೆಗಳಲ್ಲಿ ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು.
ಡಿಪ್ಲೊಮ ಟೆಕ್ನೀಷಿಯನ್ ಹುದ್ದೆಗಳಿಗೆ: ಬೇಸಿಕ್ ಪೇ ರೂ.23,000., ಆಪರೇಟರ್ ಹುದ್ದೆಗಳಿಗೆ: ಬೇಸಿಕ್ ಪೇ ರೂ.22,000. ಮಾಸಿಕ ಆದಾಯವನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
ಈ ಹುದ್ದೆಗಳಿಗೆ ಬೇಸಿಕ್ ಪೇ ಜತೆಗೆ ಪ್ರಯಾಣ ಭತ್ಯೆ, ಮನೆ ಬಾಡಿಗೆ ಭತ್ಯೆ, ತುಟ್ಟಿ ಭತ್ಯೆ, ಇತರೆ ಭತ್ಯೆ ಹಾಗೂ ಸೌಲಭ್ಯಗಳು ಇರುತ್ತವೆ.
ಡಿಪ್ಲೊಮ ಟೆಕ್ನೀಷಿಯನ್, ಆಪರೇಟರ್ ಹುದ್ದೆಗಳನ್ನು ಮೆಕ್ಯಾನಿಕಲ್, ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್, ಫಿಟ್ಟರ್, ಪೇಂಟರ್, ಟರ್ನರ್ ಬ್ರ್ಯಾಂಚ್‌ಗಳಲ್ಲಿ ನೇಮಕ ಮಾಡಲಿದ್ದು, ಹುದ್ದೆಗೆ ಸಂಬಂಧಿತ ವಿಷಯದಲ್ಲಿ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗುತ್ತದೆ.
ಸಾಮಾನ್ಯ ಅರ್ಹತೆ, ಒಬಿಸಿ ಅಭ್ಯರ್ಥಿಗಳಿಗೆ, EWS ಅಭ್ಯರ್ಥಿಗಳಿಗೆ ರೂ.2000, ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ಯಾಶ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್‌ನೆಟ್ ಬ್ಯಾಂಕಿಂಗ್, ಮೊಬೈಲ್ ವ್ಯಾಲೆಟ್, ಹೀಗೆ ಹಲವು ವಿಧಾನಗಳಲ್ಲಿ ಅರ್ಜಿ ಶುಲ್ಕ ಪಾವತಿ ಮಾಡಬಹುದು.
ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಡಿಪ್ಲೊಮ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಇಮೇಲ್ ವಿಳಾಸ, ಮೊಬೈಲ್ ನಂಬರ್, ಇತರೆ ಮಾಹಿತಿಗಳು ಅಗತ್ಯ ಎಂದು ತಿಳಿಸಿದೆ .
ಆಸಕ್ತಿವುಳ್ಳವರು ವೆಬ್‌ಸೈಟ್ ವಿಳಾಸ https://hal-v1.exmegov.com/#/index ಕ್ಕೆ ಭೇಟಿ ನೀಡಿ. ತೆರೆದ ವೆಬ್‌ಪೇಜ್‌ನಲ್ಲಿ ‘Apply Now’ ಎಂದಿರುವಲ್ಲಿ ಕ್ಲಿಕ್ ಮಾಡಿ. ನಂತರ ತೆರೆಯುವ ವೆಬ್ ಪೇಜ್‌ನಲ್ಲಿ ಅಗತ್ಯ ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.