spot_img

ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಅಹ್ವಾನ

spot_img
spot_img

Share post:

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1 ಲಕ್ಷಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6 ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಹಾಗೂ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು.

ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.5 ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.
ಹಾಗೂ ಈ ಯೋಜನೆಯಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್ಲೈನ್ ವಿಳಾಸ: kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಡಿಸೆಂಬರ್, 15 ಕೊನೆಯ ದಿನವಾಗಿದೆ.

ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಅಥವಾ ದೂ.ಸಂ. 08272-221656 ನ್ನು ಅಥವಾ ನಿಗಮದ ಸಹಾಯವಾಣಿ 9448451111 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...