spot_img
spot_img

ವಿಧಾನಸಭೆ ಸಚಿವಾಲಯದಲ್ಲಿ ವಿವಿಧ ಹುದ್ದೆಗಳ ಅರ್ಜಿ ಆಹ್ವಾನ

spot_img
spot_img

Share post:

ಕರ್ನಾಟಕ ವಿಧಾನ ಸಭೆ ಸಚಿವಾಲಯದಲ್ಲಿ ಸ್ಥಳೀಯ ವೃಂದದಲ್ಲಿ ವಿವಿಧ ವೃಂದಗಳ ಹುದ್ದೆಗಳನ್ನು ಹಾಗೂ ಮಾತೃ ವೃಂದದಲ್ಲಿನ ವಿವಿಧ ವೃಂದಗಳ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.
ವರದಿಗಾರರು, ಜೂನಿಯರ್ ಪ್ರೋಗ್ರಾಮರ್, ಕಂಪ್ಯೂಟರ್ ಆಪರೇಟರ್, ದಲಾಯತ್, ಸ್ವೀಪರ್, ಮಾಸಜರ್, ಸೇರಿದಂತೆ ವಿವಿಧ ಹುದ್ದೆಗಳಿವೆ.
ಅರ್ಜಿ ಸ್ವೀಕರಿಸಲು ನಿಗದಿತ ಕೊನೆ ದಿನಾಂಕಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯಸ್ಸಿನ ಮಿತಿಯನ್ನು ವರ್ಗಾವಾರು ಕೆಳಗಿನಂತೆ ತಿಳಿಸಲಾಗಿದೆ.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ. ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 41 ವರ್ಷ ವಯಸ್ಸು ದಾಟಿರಬಾರದು.
ಕರ್ನಾಟಕ ವಿಧಾನ ಸಭೆ ಸಚಿವಾಲಯದ ನೇಮಕಾತಿ ಹಾಗೂ ಸೇವಾ ಷರತ್ತುಗಳು, ನಿಯಮಗಳು 2003ರ ಅನುಸಾರ ಮೇಲ್ಕಂಡ ಹುದ್ದೆಗಳ ಭರ್ತಿಗಾಗಿ ಅರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿ ನಮೂನೆ-1ರ ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು ವಿಧಾನ ಸಭೆ ಸಚಿವಾಲಯಕ್ಕೆ ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು.
ಅರ್ಜಿ ನಮೂನೆಯು ಸರ್ಕಾರಿ ಮುದ್ರಣಾಲಯದಲ್ಲಿ ದೊರೆಯುವುದು. ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ | ಮಾಹಿತಿ ವಿಜ್ಞಾನ | ಎಲೆಕ್ಟ್ರಾನಿಕ್ಸ್ ಇಂಜಿನೀಯರಿಂಗ್ ನಲ್ಲಿ ಪದವೀಧರರಾಗಿರಬೇಕು ಅಥವಾ ಕಂಪ್ಯೂಟರ್ ಅಪ್ಲಿಕೇಶನ್ (MCA) ನಲ್ಲಿ ಸ್ನಾತಕೋತ್ತರ ಪದವಿ ಹೊಂದಿದ್ದು hardware and softwareಗಳ ಜ್ಞಾನವುಳ್ಳವರಾಗಿರಬೇಕು.
Must have a minimum experience of one year as programmer with working knowledge of VB6, VB.Net, Oracle, SQL-Server, MS-Access, Crystal Reports and Networking.
ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿರುವ ಪ್ರಥಮ ದರ್ಜೆಯ ಕನ್ನಡ ಶೀಘ್ರಲಿಪಿ ಹಾಗೂ ಪ್ರೌಢ ದರ್ಜೆಯ ಕನ್ನಡ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತಿರ್ಣರಾಗಿರಬೇಕು. ಹಿಂದಿ ಪ್ರಥಮ ದರ್ಜೆಯ ಶೀಘ್ರಲಿಪಿಯಲ್ಲಿ ಉತ್ತೀರ್ಣರಾದವರಿಗೆ ಆದ್ಯತೆ ನೀಡಲಾಗುವುದು.
ಕನ್ನಡ ವರದಿಗಾರರು ಹುದ್ದೆಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಸ್ನಾತಕ ಪದವಿ (ಬಿ.ಸಿ.ಎ.) ಅಥವಾ ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ಸ್ ನಲ್ಲಿ ಬಿ.ಎಸ್ಸಿ. ಪದವಿ ಹೊಂದಿರಬೇಕು.
ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು ಹಾಗೂ ಗಣಕಯಂತ್ರದ ಸಾಮಾನ್ಯ ಜ್ಞಾನವುಳ್ಳವಾಗಿರಬೇಕು.
ಕಿರಿಯ ಸಹಾಯಕರು ಹುದ್ದೆಗೆ ಕರ್ನಾಟಕ ವಿಧಾನ ಸಭೆ ಸಚಿವಾಲಯದ ಗ್ರೂಪ್ ‘ಡಿ’ ಹುದ್ದೆಯಲ್ಲಿ ಸೇವೆ ನಲ್ಲಿಸುತ್ತಿದ್ದು, ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿ ಹೊಂದಿರುವ ನೌಕರರಿಗೆ ಆದ್ಯತೆ ನೀಡಲಾಗುವುದು.
ಕಿರಿಯ ಗ್ರಂಥಾಲಯ ಸಹಾಯಕರು ಹುದ್ದೆಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಲೈಬ್ರರಿ ಸೈನ್ಸ್ ನಲ್ಲಿ ಪದವಿ ಹೊಂದಿದ್ದು ಗಣಕ ಯಂತ್ರದ ಜ್ಞಾನವುಳ್ಳವಾಗಿರಬೇಕು.
ಏಳನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಮಸಾಜರ್ ಹುದ್ದೆಗೆ ಯಾವುದಾದರು ಹೆಲ್ತ್ ಕ್ಲಬ್ ನಲ್ಲಿ ಮಸಾಜರ್ ಆಗಿ ಕಾರ್ಯ- ನಿರ್ವಹಿಸಿರುವ ಬಗ್ಗೆ ಐದು ವರ್ಷಗಳ ಅನುಭವವಿರಬೇಕು.
ಬಡಗಿ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು. ಅಥವಾ ಮಾನ್ಯತೆ ಪಡೆದಿರುವ ಸಂಸ್ಥೆಯಿಂದ ಬಡಗಿ ಕೋರ್ಸ್‌ ಅಥವಾ ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರದಿಂದ ಅಥವಾ ಕೈಗಾರಿಕಾ ಸಂಸ್ಥೆಯ (ಐ.ಟಿ.ಐ.)ಯಿಂದ ಪ್ರಮಾಣ ಪತ್ರ ಹೊಂದಿರಬೇಕು.
ದಲಾಯತ್ ಹುದ್ದೆಗೆ 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಸ್ವೀಪರ್ ಹುದ್ದೆಗೆ 4ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ರೂ.500. ಅರ್ಜಿ ಶುಲ್ಕ ಭರ್ತಿ ಮಾಡಬೇಕು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...