ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರ ಕಾರ್ಮಿಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ 13 ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು 48 ಹುದ್ದೆಗಳ ನೇಮಕಾತಿ ನಡೆಸಲಾಗುವುದು. 48 ಒಟ್ಟು ಹುದ್ದೆಗಳಿದ್ದು, ನಗರಸಭೆ ಗ್ರೇಡ್ – 1 – 8, ನಗರಸಭೆ ಗ್ರೇಡ್ – 2 – 6, ಪುರಸಭೆ – 3, ಪಟ್ಟಣ ಪಂಚಾಯತ್ – 3 ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಅವಶ್ಯಕತೆ ಇಲ್ಲ. ಕನ್ನಡ ಮಾತನಾಡಲು ಗೊತ್ತಿರಬೇಕು.
ಮಾಸಿಕ 27,000 ದಿಂದ 46,675 ರೂ ವರೆಗೆ ಹೊಂದಿರುತ್ತಾರೆ. ಅಭ್ಯರ್ಥಿಗಳ ವಯೋಮಿತಿ 55 ವರ್ಷ ಮೀರಿರಬಾರದು.
ಈಗಾಗಲೇ ಅಭ್ಯರ್ಥಿಗಳು ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಹಾಲಿ ನೇರಪಾವತಿ ಆಧಾರದಲ್ಲಿ 2 ವರ್ಷಕ್ಕಿಂತ ಕಡಿಮೆ ಇಲ್ಲದೇ ಕಾರ್ಯ ನಿರ್ವಹಿಸಿದ ಅಭ್ಯರ್ಥಿಗಳಿಗೆ ಆಧ್ಯತೆಗಳು ಇವೆ ಎಂದು ತಿಳಿಸಿದ್ದಾರೆ.
ಆಯಾ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು ಮತ್ತು ಮುಖ್ಯಾಧಿಕಾರಿಗಳಿಂದ ಅರ್ಜಿ ಪಡೆದು ಅಗತ್ಯ ದಾಖಲಾತಿ ಮತ್ತು ಪ್ರಮಾಣ ಪತ್ರದೊಂದಿಗೆ ನಗರ ಸ್ಥಳೀಯ ಸಂಸ್ಥೆಗಳಿಗೆ ಸಲ್ಲಿಸಿ, ಸ್ವೀಕೃತಿ ಪಡೆಯಬೇಕು.
ಸಾಮಾನ್ಯ ಅಭ್ಯರ್ಥಿಗೆ 600 ರೂ, ಪ್ರವರ್ಗ 2ಎ. 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 300 ರೂ, ಮಾಜಿ ಸೈನಿಕ ಅಭ್ಯರ್ಥಿಗೆ 50 ಅರ್ಜಿ ಶುಲ್ಕ ನಿಗದಿಸಲಾಗಿದೆ. ಪ. ಜಾ, ಪ.ಪಂ ಮತ್ತು ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
ಅಭ್ಯರ್ಥಿಗಳ ಅರ್ಜಿ ಶುಲ್ಕವನ್ನು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಪಾವತಿಸಿ ರಶೀದಿ ಪಡೆಯಬೇಕು.
ಈ ಹುದ್ದೆಗೆ ನವೆಂಬರ್ 15ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಡಿಸೆಂಬರ್ 16 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಜಿಲ್ಲಾಡಳಿತ ವೆಬ್ಸೈಟ್ uttarakannada.nic.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now