ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ) ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳನ್ನು ಅಂಚೆ ಇಲಾಖೆಯಿಂದ ಐಪಿಪಿಬಿ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಭರ್ತಿ ಮಾಡಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಕ್ಸಿಕ್ಯೂಟಿವ್ ಹುದ್ದೆಯಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಅರ್ಹತೆ, ವೇತನ, ಆಯ್ಕೆ ವಿಧಾನ, ಇನ್ನಿತ್ತರ ಮಾಹಿತಿಯನ್ನು ಓದಿ, ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ) ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳನ್ನು ಅಂಚೆ ಇಲಾಖೆಯಿಂದ ಐಪಿಪಿಬಿ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಭರ್ತಿ ಮಾಡಲು ಆನ್ಲೈನ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಟ್ಟು 344 ಹುದ್ದೆಗಳು ಇದ್ದು, ತಿಂಗಳಿಗೆ 30,000 ರೂ. ಸಂಬಳ ಇರುತ್ತದೆ.
ಅಭ್ಯರ್ಥಿಯು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆ / ಮಂಡಳಿಯಿಂದ ಯಾವುದೇ ವಿಷಯದಲ್ಲಿ (ನಿಯಮಿತ / ದೂರಶಿಕ್ಷಣ) ಪದವಿ ಪಡೆದಿರಬೇಕು. (ಅಥವಾ) ಸರ್ಕಾರಿ ನಿಯಂತ್ರಣ ಸಂಸ್ಥೆಯಿಂದ ಅನುಮೋದಿಸಲ್ಪಟ್ಟಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 2 ವರ್ಷಗಳ ಕಾಲ ಗ್ರಾಮೀಣ ಡಾಕ್ ಸೇವಕರಾಗಿ ಕೆಲಸ ಮಾಡಿದ ಅನುಭವವನ್ನು ಹೊಂದಿರಬೇಕು..
ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 35 ವರ್ಷ ಮೀರಿರಬಾರದು.
ಒಬಿಸಿ ಅಭ್ಯರ್ಥಿಗಳು 38 ವರ್ಷದವರೆಗೆ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು 40 ವರ್ಷದವರೆಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.
ಆಯ್ಕೆ ಪ್ರಕ್ರಿಯೆಯು ಪದವಿಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಆಧರಿಸಿರುತ್ತದೆ.
ಆನ್‌ಲೈನ್ ಪರೀಕ್ಷೆಯನ್ನು ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ) ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
ಇಲ್ಲಿ ನಿಮ್ಮ ಹೆಸರು, ಸಂಪರ್ಕ ವಿವರಗಳು ಮತ್ತು ಇಮೇಲ್ ಅನ್ನು ನಮೂದಿಸಿ. ತಾತ್ಕಾಲಿಕ ನೋಂದಣಿ ಸಂಖ್ಯೆ ಮತ್ತು ಪಾಸ್ ವರ್ಡ್ ಅನ್ನು ಸಿಸ್ಟಂ ರಚಿಸುತ್ತದೆ ಮತ್ತು ಪರದೆಯ ಮೇಲೆ ತೋರಿಸುತ್ತದೆ.
ಮಾರ್ಗಸೂಚಿಗಳಲ್ಲಿ ನೀಡಲಾದ ವಿಶೇಷಣಗಳ ಪ್ರಕಾರ ಫೋಟೋ ಮತ್ತು ಸಹಿಯನ್ನು ಅಪ್ಲೋಡ್ ಮಾಡಿ.ಕೊನೆಗೆ ಅಲ್ಲಿ ಯಾವುದೇ ಆನ್ಲೈನ್ ಪೇಮೆಂಟ್ ಮೂಲಕ ಅರ್ಜಿ ಶುಲ್ಕವನ್ನು 750 ರೂ ಅಂತೆ ಪಾವತಿಸಿ.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅಕ್ಟೋಬರ್ 11 ರಿಂದ 31, 2024 ರಂದು ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಐಪಿಪಿಬಿ ನೇಮಕಾತಿ 2024 ಗಾಗಿ ಆನ್ಲೈನ್ ನೋಂದಣಿ ಲಿಂಕ್ ಅನ್ನು https://www.ippbonline.com/ ನಿಂದ ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 11, 2024 ರಿಂದ ಸಕ್ರಿಯಗೊಳಿಸಲಾಗಿದೆ ಎಂದು ಪ್ರಕಟನಿಯಲ್ಲಿ ತಿಳಿಸಲಾಗಿದೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now