spot_img
spot_img

ಆರೋಗ್ಯ ಕ್ಷೇಮ ಕೇಂದ್ರ, KSRTC ಬಸ್ ನಿಲ್ದಾಣಗಳಲ್ಲೂ ನಮ್ಮ ಕ್ಲಿನಿಕ್ ಸ್ಥಾಪನೆ

spot_img
spot_img

Share post:

ಬೆಂಗಳೂರು : ₹108.36 ಕೋಟಿ ವೆಚ್ಚದಲ್ಲಿ 254 ನಗರ ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಹಾಗೂ 39 ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ಗಳ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2024-25ನೇ ಸಾಲಿನಲ್ಲಿ ಕಾರ್ಯಕ್ರಮಗಳಡಿ 15 ವಿವಿಧ ಹಣಕಾಸು ಆಯೋಗದ ಅನುದಾನದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ರೋಗ ಪತ್ತೆ ಮೂಲ ಸೌಕರ್ಯಗಳನ್ನು ಒದಗಿಸಲು ರೂ. 145.99 ಕೋಟಿಗಳಲ್ಲಿ ಉಪಕರಣಗಳನ್ನು ಖರೀದಿಸಲು ಹಾಗೂ ರೂ. 84.88 ಕೋಟಿಗಳ ಅಂದಾಜು ಮೊತ್ತದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕ್ಷೇಮ ಕೇಂದ್ರ – ನಮ್ಮ ಕ್ಲಿನಿಕ್ ಗಳಲ್ಲಿನ ಪ್ರಯೋಗಾಲಯಗಳನ್ನು ಮತ್ತು ಆರೋಗ್ಯ ಸೇವೆಗಳನ್ನು ಬಲಪಡಿಸಲು ಉಪಕರಣಗಳನ್ನು ಖರೀದಿಸಲು ಹಾಗೂ 5 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲು ಮತ್ತು ರೂ. 72.96 ಕೋಟಿಗಳ ಅಂದಾಜು ಮೊತ್ತದಲ್ಲಿ ನಮ್ಮ ಕ್ಲಿನಿಕ್‌ಗಳಿಗೆ ಅಗತ್ಯವಿರುವ ಔಷಧಿ ಮತ್ತು ರಾಸಾಯನಿಕಗಳನ್ನು PM- ABHIM ಅನುದಾನದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
PM- ABHIM ಯೋಜನೆಯಡಿಯಲ್ಲಿ ಚಿಕ್ಕಬಳ್ಳಾಪುರದ CIMS , ಇಲ್ಲಿಗೆ ಅನುಮೋದನೆಯಾಗಿರುವ 50 ಹಾಸಿಗೆ ತೀವ್ರ ನಿಗಾ ಆರೈಕೆ ಘಟಕವನ್ನು ಜಿಲ್ಲೆಯ ಚಿಂತಾಮಣಿ ತಾಲ್ಲೂಕಿಗೆ ಸ್ಥಳಾಂತರಿಸಿ 16.63 ಕೋಟಿ ವೆಚ್ಚಲದಲಿ ನಿರ್ಮಿಸಲು ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ.
PM- ABHIM ಯೋಜನೆಯಡಿಯಲ್ಲಿ 108.36 ಕೋಟಿ ರೂ ವೆಚ್ಚದಲ್ಲಿ ಒಟ್ಟು 254 ನಗರ ಆರೋಗ್ಯ ಕ್ಷೇಮಕೇಂದ್ರ – ನಮ್ಮ ಕ್ಲಿನಿಕ್ ಗಳನ್ನು ಉಪಕರಣಗಳೊಂದಿಗೆ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...