spot_img
spot_img

ದೆಹಲಿ ಮಾಲಿನ್ಯದ ಪರಿಣಾಮವಾಗಿ ಶೇ 50ರಷ್ಟು ಸರ್ಕಾರಿ ನೌಕರರಿಗೆ ವರ್ಕ್ ಫ್ರಂ ಹೋಮ್​

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ನವದೆಹಲಿ: ದೆಹಲಿಯ ಸರ್ಕಾರಿ ಕಚೇರಿಗಳ ಶೇ 50ರಷ್ಟು ಉದ್ಯೋಗಿಗಳು ವರ್ಕ್ ಫ್ರಂ ಹೋಮ್ (ಮನೆಯಿಂದ ಕೆಲಸ) ಮಾದರಿಯಲ್ಲಿ ಕೆಲಸ ಮಾಡಲಿದ್ದಾರೆ ಎಂದು ದೆಹಲಿ ಪರಿಸರ ಸಚಿವ ಮತ್ತು ಎಎಪಿ ಮುಖಂಡ ಗೋಪಾಲ್ ರಾಯ್ ಬುಧವಾರ ಪ್ರಕಟಿಸಿದ್ದಾರೆ.

ರಾಜಧಾನಿಯಲ್ಲಿ ಹೆಚ್ಚುತ್ತಿರುವ ಮಾಲಿನ್ಯ ತಡೆಗಟ್ಟುವ ಪ್ರಯತ್ನಗಳ ಭಾಗವಾಗಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.

ಈ ಬಗ್ಗೆ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಗೋಪಾಲ್ ರಾಯ್, “ಮಾಲಿನ್ಯವನ್ನು ಕಡಿಮೆ ಮಾಡಲು, ದೆಹಲಿ ಸರ್ಕಾರವು ಸರ್ಕಾರಿ ಕಚೇರಿಗಳ ನೌಕರರಿಗೆ ವರ್ಕ್ ಫ್ರಂ ಹೋಮ್ ನೀಡಲು ನಿರ್ಧರಿಸಿದೆ.

ಶೇ 50 ರಷ್ಟು ಉದ್ಯೋಗಿಗಳು ಮನೆಯಿಂದ ಕೆಲಸ ಮಾಡಲಿದ್ದಾರೆ. ಈ ಕ್ರಮದ ಅನುಷ್ಠಾನಕ್ಕಾಗಿ ಇಂದು ಸಚಿವಾಲಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು” ಎಂದು ಬರೆದಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟವು ಬುಧವಾರ ಬೆಳಿಗ್ಗೆ ‘ತೀವ್ರ ಕಳಪೆ’ ಹಂತಕ್ಕೆ ತಲುಪಿದೆ. ನಗರದ ಕೆಲ ಭಾಗಗಳನ್ನು ತೆಳುವಾದ ಹೊಗೆ ಆವರಿಸಿದ್ದು, ಗೋಚರತೆ ಕಡಿಮೆಯಾಗಿದೆ.

ಗಾಳಿಯ ಗುಣಮಟ್ಟ ಸೂಚ್ಯಂಕ ಮಾಪನವು (ಎಕ್ಯೂಐ) ತೀವ್ರ ಕಳಪೆ ಹಂತಕ್ಕೆ ತಲುಪಿದೆ. ಕಳೆದ ಎರಡು ದಿನಗಳಿಂದ ವಾಯು ಗುಣಮಟ್ಟ ಸೂಚ್ಯಂಕವು ‘ತೀವ್ರ ಕಳಪೆ ಪ್ಲಸ್’ ವಿಭಾಗದಲ್ಲಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ ಇಂದು ಬೆಳಿಗ್ಗೆ 9 ಗಂಟೆಯ ವೇಳೆಗೆ 424 ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ದಾಖಲಾಗಿದೆ.

ಇದಕ್ಕೂ ಮುನ್ನ ಮಂಗಳವಾರ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರಿಗೆ ಪತ್ರ ಬರೆದ ಗೋಪಾಲ್ ರಾಯ್, ಮಾಲಿನ್ಯ ತಡೆಯ ತುರ್ತು ಕ್ರಮವಾಗಿ ದೆಹಲಿಯಲ್ಲಿ ಮೋಡ ಬಿತ್ತನೆ ನಡೆಸಲು ಅನುಮತಿ ನೀಡುವಂತೆ ಕೋರಿದ್ದಾರೆ.

ಇದಕ್ಕಾಗಿ ದೆಹಲಿ ಸರ್ಕಾರ, ಐಐಟಿ ಕಾನ್ಪುರ ಮತ್ತು ಡಿಜಿಸಿಎ, ಗೃಹ ಸಚಿವಾಲಯ (ಎಂಎಚ್ಎ), ರಕ್ಷಣಾ ಸಚಿವಾಲಯ ಮುಂತಾದ ಇತರ ಎಲ್ಲಾ ಕೇಂದ್ರ ಸರ್ಕಾರಿ ಇಲಾಖೆಗಳೊಂದಿಗೆ ತಕ್ಷಣ ತುರ್ತು ಸಭೆ ಕರೆಯುವಂತೆ ಅವರು ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

ರಾಜಧಾನಿ ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಕಳೆದ ಹಲವಾರು ದಿನಗಳಿಂದ “ತೀವ್ರ ಕಳಪೆ” ವಿಭಾಗದಲ್ಲಿಯೇ ಮುಂದುವರೆದಿದೆ.

ಪಿಎಂ 2.5 ಸಾಂದ್ರತೆಯು 400 ಮಿಗ್ರಾಂ/ಮೀ 3 ದಾಟಿದೆ. ಇದು ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್ಒ) ಸುರಕ್ಷಿತ ಮಿತಿಯಾದ 15 ಮಿಗ್ರಾಂ/ಮೀ 3 ಅನ್ನು ಮೀರಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಹೊನ್ನಾವರ ಪಾವಿನಕುರ್ವೆಯಲ್ಲಿ ಸರ್ವ ಋತು ಬಂದರು

ಉತ್ತರ ಕನ್ನಡ: ಕರ್ನಾಟಕ ಜಲಸಾರಿಗೆ ಮಂಡಳಿ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಪಾವಿನಕುರ್ವೆಯಲ್ಲಿ ಖಾಸಗಿ ಸಹಭಾಗಿತ್ವದಡಿಯಲ್ಲಿ 14 MTPA ಸಾಮರ್ಥ್ಯದ ಸರ್ವಋತು...

ಸ್ಟೀಲ್ ನಟ್​ಗಳಲ್ಲಿ ಅರಳಿದ ಆದಿಯೋಗಿಯ ವಿಗ್ರಹ : ಉಡುಪಿ ಕಲಾವಿದನ ಕೈಚಳಕ

ಉಡುಪಿ: ಉಡುಪಿಯ ಮಟ್ಟು ಗ್ರಾಮದ ಡಿಪ್ಲೋಮಾ ಪದವೀಧರರೊಬ್ಬರು ಮೈಲ್ಡ್ ಸ್ಟೀಲ್ ನಟ್ಸ್​ಗಳಿಂದ 58 ಕೆ.ಜಿ. ತೂಕದ ಆದಿಯೋಗಿಯ ವಿಗ್ರಹ ತಯಾರಿಸಿ ಇಂಡಿಯನ್ ಬುಕ್ ಆಫ್...

ಭರತನಾಟ್ಯದ 52 ಮುದ್ರೆ 3 ವರ್ಷದ ಮಗು ಪ್ರದರ್ಶನ : ಗಿನ್ನಿಸ್ ದಾಖಲೆ ನಿರ್ಮಾಣ

ಕೇರಳ: ಭರತನಾಟ್ಯದ ಎಲ್ಲ 52 ಮುದ್ರೆಗಳನ್ನು ಪ್ರದರ್ಶಿಸುವ ಮೂಲಕ ಕೇರಳದ 3 ವರ್ಷದ ಪುಟ್ಟ ಮಗುವೊಂದು ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​ನಲ್ಲಿ ದಾಖಲೆ ನಿರ್ಮಿಸಿದೆ. "ನನ್ನ...

ಅಂಚೆ ಚೀಟಿ ಸಂಗ್ರಹ : ಗಿನ್ನೆಸ್​ ಬುಕ್​ ಆಫ್​ ರೆಕಾರ್ಡ್ ನಿಮಿಸಿದ ನಿವೃತ್ತ ನೌಕರ

ಉಡುಪಿ: ಕೆಲವೊಮ್ಮೆ ವ್ಯಕ್ತಿಗಳ ಹವ್ಯಾಸವೇ ಅವರನ್ನು ದೊಡ್ಡ ಸಾಧನೆಯತ್ತ ಕೊಂಡೊಯ್ಯುತ್ತದೆ. ಅದರಂತೆ ಕಾಲೇಜೊಂದರ ನಿವೃತ್ತ ಕಚೇರಿ ಸಹಾಯಕ ಡೇನಿಯಲ್​ ಮೊಂತೇರೊ ಅವರು ಅಂಚೆ ಚೀಟಿ...