Bangalore News:
ನಗರದ ಫ್ರೀಡಂ ಪಾರ್ಕ್ನಲ್ಲಿ ನಿಗದಿತ ವೇತನ ಹಾಗೂ ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ASHA WORKERS PROTEST ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿರುವ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ.
ರಾಜ್ಯದಲ್ಲಿರುವ 42,000 ಜನ ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಹಲವು ವರ್ಷಗಳಿಂದ ಈಡೇರಿಲ್ಲ. ಆದ್ದರಿಂದ ಕೆಲಸ ಸ್ಥಗಿತಗೊಳಿಸಿ ಧರಣಿಗೆ ನಿರ್ಧರಿಸಿದ್ದೇವೆ ಎಂದು ಪ್ರತಿಭಟನಾ ನಿರತರು ತಿಳಿಸಿದರು.
What are the demands?
ಆಶಾ ಕಾರ್ಯಕರ್ತೆಯರಿಗೆ 15 ಸಾವಿರ ರೂ. ಗೌರವಧನ ನೀಡಬೇಕು. ನಗರ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿ ಕೆಲಸ ಹಾಗೂ ನಗರದ ದುಬಾರಿ ಜೀವನ ವೆಚ್ಚಗಳಿಗೆ ಅನುಗುಣವಾಗಿ 20 ಸಾವಿರ ರೂ. ಗೌರವಧನ ಹೆಚ್ಚಿಸಬೇಕು.
8 ವರ್ಷಗಳಿಂದಲೂ ASHA WORKERS PROTEST ಮಾಡುತ್ತಿರುವ ಕೆಲಸಗಳು ಆಶಾ ನಿಧಿ ಪೋರ್ಟಲ್‌ನಲ್ಲಿ ದಾಖಲಾಗುತ್ತಿಲ್ಲ. ರಾಜ್ಯಾದ್ಯಂತ ಬಾಕಿ ಇರುವ 3 ತಿಂಗಳ ಪ್ರೋತ್ಸಾಹಧನ ಕೂಡಲೇ ಬಿಡುಗಡೆಗೊಳಿಸಬೇಕು ಹಾಗೂ ಆಶಾ ಕಾರ್ಯಕರ್ತೆಯರಿಗೆ ವಹಿಸಿರುವ ಮೊಬೈಲ್ ಆಧಾರಿತ ಕೆಲಸಗಳನ್ನ ಒತ್ತಾಯಪೂರ್ವಕವಾಗಿ ಮಾಡಿಸಿಕೊಳ್ಳಬಾರದು. ಇಲ್ಲದಿದ್ದರೆ ಮೊಬೈಲ್ ಆಧಾರಿತ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.
ಆಶಾ ಕಾರ್ಯಕರ್ತೆಯರನ್ನ ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ, ಭವಿಷ್ಯನಿಧಿ, ಕಾರ್ಮಿಕರ ರಾಜ್ಯ ವಿಮೆ ಸೌಲಭ್ಯ ಒದಗಿಸಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದ್ದಾರೆ. ಪಶ್ಚಿಮ ಬಂಗಾಳ ರಾಜ್ಯದ ಮಾದರಿಯಲ್ಲಿ ಸೇವಾ ನಿವೃತ್ತಿ ಪಡೆಯುವ ಆಶಾ ಕಾರ್ಯಕರ್ತೆಯರಿಗೆ ರೂ.5 ಲಕ್ಷ ನೀಡಬೇಕು. ಪ್ರತಿವರ್ಷ ಆಶಾ ಕಾರ್ಯಕರ್ತೆಯರಿಗೆ ಸಂಪೂರ್ಣ ಆರೋಗ್ಯ ತಪಾಸಣೆ ಸೌಲಭ್ಯ ಕಲ್ಪಿಸಬೇಕು.
CM Siddaramaiah has not fulfilled his earlier promises:
ಈ ಬಗ್ಗೆ ಆಶಾ ಯುನಿಯೂನ್ ರಾಜ್ಯ ಉಪಾಧ್ಯಕ್ಷ ಡಾ. ಪ್ರಮೋದ್ ಮಾತನಾಡಿ, ”ಕಳೆದ ಫೆಬ್ರವರಿಯಲ್ಲಿ ಇದೇ ರೀತಿ ಪ್ರತಿಭಟನೆ ನಡೆಸಲಾಗಿತ್ತು. ಆಗ ಸಿಎಂ ಸಿದ್ದರಾಮಯ್ಯ ಅವರು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರು. 8 ರಿಂದ 9 ತಿಂಗಳು ಕಾದರೂ ಏನೂ ಬದಲಾವಣೆ ಆಗಿಲ್ಲ. 15 ಮೀಟಿಂಗ್ಗಳು ನಡೆದಿದ್ದರೂ, ಏನೂ ಪ್ರಯೋಜನ ಕೂಡ ಆಗಿಲ್ಲ. ಅನಿವಾರ್ಯವಾಗಿ ನಾವು ಇವತ್ತು ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಬಂದಿದ್ದೇವೆ. ಸರ್ಕಾರದಿಂದ ನಮಗೆ ಸೂಕ್ತ ಭರವಸೆ ಸಿಗುವವರೆಗೂ ನಾವು ಇದನ್ನ ಕೈಬಿಡಲ್ಲ” ಎಂದು ಹೇಳಿದರು.
ಇದನ್ನು ಓದಿರಿ : FORMULA E RACE CASE : ಕೆ.ಟಿ.ರಾಮರಾವ್ ಮೇಲಿನ ಎಫ್ಐಆರ್ ರದ್ದತಿಗೆ ಹೈಕೋರ್ಟ್ ನಕಾರ