spot_img
spot_img

ಏಷ್ಯಾದ ಅತಿ ದೊಡ್ಡ ತಂತ್ರಜ್ಞಾನ ಶೃಂಗ ಬೆಂಗಳೂರು ಟೆಕ್ ಸಮ್ಮಿಟ್ ಗೆ ಚಾಲನೆ : ಸಿಎಂ ಸಿದ್ದರಾಮಯ್ಯ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಏಷ್ಯಾದ ಅತಿ ದೊಡ್ಡ ತಂತ್ರಜ್ಞಾನ ಶೃಂಗ ಎನಿಸಿರುವ ‘ಬೆಂಗಳೂರು ಟೆಕ್‌ ಶೃಂಗ 2024’ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಚಾಲನೆ ನೀಡಿದರು.

ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಇಲಾಖೆ ಮತ್ತು ಭಾರತ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್‌ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಬೆಂಗಳೂರು ಟೆಕ್ ಶೃಂಗಸಭೆ 2024ರ 27ನೇ ಆವೃತ್ತಿಯನ್ನು ಆಯೋಜಿಸಲಾಗಿದೆ.

ಟೆಕ್ ಅನ್ ಬೌಂಡ್ ಥೀಮ್ ನಡಿ ಅಯೋಜಿಸಲಾಗಿರುವ ಬೆಂಗಳೂರು ಟೆಕ್ ಶೃಂಗಸಭೆ 2024ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಸಿದರು.

ಈ ಸಂದರ್ಬದಲ್ಲಿ ಮಾತನಾಡಿದ ಅವರು, ಬೆಂಗಳೂರು ಟೆಕ್ ಸಮ್ಮಿಟ್ – 2024 ಕಾರ್ಯಕ್ರಮದಲ್ಲಿ ನಿಮ್ಮನ್ನು ಕುರಿತು ಮಾತನಾಡುವುದು ಒಂದು ಸುಯೋಗ ಎಂದೇ ನಾನು ಭಾವಿಸಿದ್ದೇನೆ. ನಾವೀನ್ಯತೆ, ತಂತ್ರಜ್ಞಾನದ ಪ್ರಗತಿ ಮತ್ತು ಜಾಗತಿಕ ಸಹಯೋಗಕ್ಕಾಗಿ ಈ ಸಮ್ಮಿಟ್ ವಿಶಿಷ್ಟ ವೇದಿಕೆಯಾಗಿದೆ.

ಭಾರತದ ತಂತ್ರಜ್ಞಾನ ಪರಿವರ್ತನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವುದು ನನಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.

20ನೇ ಶತಮಾನದ ಆರಂಭದಲ್ಲಿ ಬೆಂಗಳೂರು ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನೆಯ ಕೇಂದ್ರವಾಗಿ ಬೆಳೆಯಿತು. ತನ್ಮೂಲಕ ಕೈಗಾರಿಕಾ ಬೆಳವಣಿಗೆಗೆ ಇಂಬು ನೀಡಿತು.

2000 ಇಸವಿಯ ಆರಂಭದಲ್ಲಿ ಎಸ್.ಎಂ.ಕೃಷ್ಣಾ ಅವರ ದೂರದೃಷ್ಟಿಯ ನಾಯಕತ್ವದಲ್ಲಿ, ಎಲೆಕ್ಟ್ರಾನಿಕ್ ಸಿಟಿ ಮತ್ತು ಐಟಿ ಪಾರ್ಕ್ ಪ್ರಾರಂಭಿಸುವ ಮೂಲಕ ಬೆಂಗಳೂರು ಪರಿವರ್ತನೆಯ ಕಡೆಗೆ ಹೊರಳಿಕೊಂಡಿತು.

ಈ ಮೂಲಕ ನಗರದ ಜಾಗತಿಕ ಟೆಕ್ ಎಂಬ ಪ್ರಖ್ಯಾತಿ ಪಡೆಯಲು ತಳಪಾಯ ಹಾಕಲಾಯಿತು. ಸಾಫ್ಟ್ ವೇರ್, ಬಯೋ ಟೆಕ್ನಾಲಜಿ, ಏರೋಸ್ಪೇಸ್ ಹಾಗು ಅಭಿವೃದ್ಧಿಗೊಂಡ ಉತ್ಪಾದನೆಯಲ್ಲಿ ತನ್ನ ಪ್ರಭಾವಕ್ಕಾಗಿ ಬೆಂಗಳೂರು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದೆ.

ವಿಶ್ವದಾದ್ಯಂತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವೆಂದು ತನ್ನನ್ನು ಸ್ಥಾಪಿಸಿಕೊಂಡಿದೆ.
ಐ. ಟಿ, ಡೀಪ್ ಟೆಕ್, ಬಯೋ ಟೆಕ್ನಾಲಜಿ ಮತ್ತು ಜೀವ ವಿಜ್ಞಾನ ಕ್ಷೇತ್ರಗಳಲ್ಲಿ ಪ್ರಗತಿಯನ್ನು ರಾಜ್ಯದ ವ್ಯಾಪಕ ಪ್ರತಿಭೆ, ಪ್ರವರ್ಧಮಾನಕ್ಕೆ ಬರುತ್ತಿರುವ ಸ್ಟಾರ್ಟ್ ಅಪ್ ಪರಿಸರ ಮತ್ತು ಸದೃಢವಾದ ಮೂಲಸೌಕರ್ಯ ವ್ಯವಸ್ಥೆ ಉತ್ತೇಜಿಸಿದೆ.

ಈ ಹೆಮ್ಮೆಯ ಪರಂಪರೆಯನ್ನು ಆಧರಿಸಿ ನಾವೀನ್ಯತೆ, ಸುಸ್ಥಿರತೆ ಮತ್ತು ಒಳಗೊಂಡ ಬೆಳವಣಿಗೆಗೆ ನಮ್ಮ ಬದ್ಧತೆ ಆಚಲವಾಗಿದೆ.
ಭಾರತದ ಮೊದಲ ಗ್ಲೋಬಲ್ ಕೆಪೆಬಿಲಿಟಿ ಸೆಂಟರ್ ನೀತಿಯನ್ನು ಕರ್ನಾಟಕ ಜಾರಿಗೆ ತಂದಿದ್ದು, ಈ ಕೇಂದ್ರಗಳನ್ನು ಸಶಕ್ತಹೋಲಿಸಲು ಹಾಗೂ ಬೆಂಬಲಿಸಲು ಉದ್ದೇಶಿಸಿದೆ.

ಇದರ ಮುಂದುವರೆದ ಭಾಗವಾಗಿ ಬೆಂಗಳೂರು, ಮೈಸೂರು ಹಾಗೂ ಬೆಳಗಾವಿಯಲ್ಲಿ ಮೂರು ಜಾಗತಿಕ ನಾವೀನ್ಯತಾ ಜಿಲ್ಲೆಗಳನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಲು ನನಗೆ ಹೆಮ್ಮೆ ಎನಿಸಿದೆ.

ರಾಜ್ಯದಲ್ಲಿ ಜಿಸಿಸಿಗಳನ್ನು ಸ್ಥಾಪಿಸಲು ಈ ಪಾರ್ಕ್ ಗಳು ಮೀಸಲಾಗಿರುತ್ತದೆ. ಬೆಂಗಳೂರು ಜಾಗತಿಕ ನಾವೀನ್ಯತಾ ಜಿಲ್ಲೆಯು ಜ್ಞಾನ, ಆರೋಗ್ಯ ಮತ್ತು ನಾವೀನ್ಯತೆಯ ನಗರದ ಭಾಗವಾಗಿರಲಿದೆ(ಕ್ವಿನ್ ಸಿಟಿ). ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 45 ನಿಮಿಷಗಳ ಅಂತರದಲ್ಲಿದ್ದು, ನಾವೀನ್ಯತೆ ಮತ್ತು ಸಂಶೋಧನೆಗೆ ಜಾಗತಿಕ ಕೇಂದ್ರವಾಗಿ ಪರಿಣಮಿಸಲಿದೆ.

ಇಂಜಿನಿಯರಿಂಗ್ ಪ್ರತಿಭೆ ಮತ್ತು ಜಾಗತಿಕವಾಗಿ ಅತ್ಯಧಿಕ ಎ.ಐ ವೃತ್ತಿಪರರನ್ನು ಹೊಂದಿರುವ ಕರ್ನಾಟಕ ಜಿಸಿಸಿಗಳಿಗೆ ಅತಿ ಪ್ರಿಯವಾದ ಗಮ್ಯವಾಗಿದೆ. ಎನ್ ಐ ಪಿ ಯು ಎನ್ ಎ ಕರ್ನಾಟಕದಡಿಯಲ್ಲಿ ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸಲು ಸಿದ್ದರಿರುವ ಕಾರ್ಮಿಕಪಡೆಯನ್ನು ತಯಾರು ಮಾಡಲು ನಾವು ಕೈಗೊಂಡ ಯೋಜನೆಗಳು ಇನ್ನಷ್ಟು ಬಲಪಡಿಸಲಿವೆ.

ಈಗ ತಾನೇ ಮೈಕ್ರೋ ಸಾಫ್ಟ್, ಇಂಟೆಲ್, ಆಕ್ಸೆಂಚರ್, ಐ.ಬಿ.ಎಂ ಮತ್ತು ಬಿ ಎಫ್ ಎಸ್ ಕಾಂಸಾರ್ಟಿಯಂ ಜೊತೆಗೆ ಸಹಿ ಹಾಕಲಾದ ಐದು ಒಪ್ಪಂದಗಳು ಕರ್ನಾಟಕದ ಒಂದು ಲಕ್ಷ ವ್ಯಕ್ತಿಗಳನ್ನು ಕೌಶಲಯುಕ್ತಗೊಳಿಸಲಿದೆ.

ಮಂಗಳೂರಿನ ಫಿನ್ ಟೆಕ್ ಲೀಡರ್ ಶಿಪ್ ನಿಂದ ಹುಬ್ಬಳ್ಳಿ ಧಾರವಾಡದ ಇವಿ ಪ್ರಗತಿ ಮತ್ತು ಡ್ರೋನ್ ಗಳು ಹಾಗೂ ಮೈಸೂರು ಪಿಸಿಬಿ ಕ್ಲಸ್ಟರ್ ಆಗುವವರೆಗೆ ಕ್ಲಸ್ಟರ್ ಆಧಾರಿತ ಅನುಸಂಧಾನದ ಮೂಲಕ ಸಮತೋಲಿತ ಪ್ರಾದೇಶಿಕ ಬೆಳವಣಿಗೆಯನ್ನು ಸಾಧಿಸಲಾಗುತ್ತಿದೆ ಎಂದು ತಿಳಿಸಿದರು.

ಬೆಂಗಳೂರಿನ ಮೇಲೆ ನಮ್ಮ ಗಮನವನ್ನು ಕೇಂದ್ರೀಕರಿಸುತ್ತಲೇ, ಪ್ರಾದೇಶಿಕ ಬಲವನ್ನು ಸಜ್ಜುಗೊಳಿಸಲು ಹಾಗೂ ಹೂಡಿಕೆಗಳನ್ನು ಆಕರ್ಷಿಸಲು ಸೂಕ್ತ ನೀತಿ ಮತ್ತು ಮೂಲ ಸೌಕರ್ಯಗಳನ್ನು ಸೃಜಿಸಲಾಗುತ್ತಿದೆ. ಟೆಕ್ ಆಧಾರಿತ ವಲಯಗಳನ್ನು ಉತ್ತೇಜಿಸಲು ಭೌತಿಕ ಮತ್ತು ಡಿಜಿಟಲ್ ಮೂಲಸೌಕರ್ಯದ ಮೇಲೆ ನಮ್ಮ ಸರ್ಕಾರವು ಗಮನಾರ್ಹ ಹೂಡಿಕೆಗಳನ್ನು ಮಾಡಿದೆ.

ಗ್ರಾಮೀಣ ಸಂಪರ್ಕಕ್ಕಾಗಿ ‘ನಮ್ಮ ಗ್ರಾಮ ನಮ್ಮ ಯೋಜನೆ’ ಮತ್ತು ವಿಶೇಷ ಅಭಿವೃದ್ಧಿ ಯೋಜನೆಗಳು ಸಂಪರ್ಕ ಮತ್ತು ಆರ್ಥಿಕ ಅವಕಾಶಗಳನ್ನು ಕರ್ನಾಟಕದಾದ್ಯಂತ ವೃದ್ಧಿಸಿದೆ.

ಕೋಚನಹಳ್ಳಿಯಲ್ಲಿ ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ (EMC) ನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಲು ನನಗೆ ಅತ್ಯಂತ ಸಂತೋಷವಾಗಿದೆ. ಇದು ಜಾಗತಿಕ ಸೆಮಿಕಂಡಕ್ಟರ್ ಉದ್ಯಮದಲ್ಲಿ ಕರ್ನಾಟಕದ ಪಾತ್ರವನ್ನು ಸಧೃಢಗೊಳಿಸುತ್ತದೆಯಲ್ಲದೆ.

ಉದ್ಯೋಗಗಳನ್ನು ಸೃಷ್ಟಿಸಿ, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಬೆಳವಣಿಗೆಗೆ ಚಾಲನೆ ನೀಡಲಿದೆ. ದೂರದೃಷ್ಟಿವುಳ್ಳ ನಮ್ಮ ನಾಯಕರು ಮತ್ತು ಪ್ರವರ್ತಕರು ಹಾಕಿಕೊಟ್ಟ ಅಡಿಪಾಯದ ಮೇಲೆ ನಾವೀನ್ಯತೆ ಮತ್ತು ಉದ್ಯಮಶೀಲತೆಯ ನೆಲೆ ಎಂಬ ಕರ್ನಾಟಕದ ದೀರ್ಘಕಾಲದ ಖ್ಯಾತಿಯನ್ನು ನಿರ್ಮಿಸಲಾಗಿದೆ.

ಈ ಪರಂಪರೆಯನ್ನು ವಿಸ್ತರಿಸಲು ನಾವು ಬದ್ಧರಾಗಿದ್ದು, ತಂತ್ರಜ್ಞಾನ ಮತ್ತು ಪ್ರಗತಿಯಲ್ಲಿ ಕರ್ನಾಟಕವು ಜಾಗತಿಕ ನಾಯಕನಾಗಿ ಉಳಿಯಲಿರುವುದನ್ನು ಖಾತ್ರಿಪಡಿಸುತ್ತೇವೆ. ನಾವೀನ್ಯತೆ, ಸಹಯೋಗ ಮತ್ತು ಬೆಳವಣಿಗೆಯ ಈ ಪ್ರಯಾಣದಲ್ಲಿ ನಮ್ಮೊಂದಿಗೆ ಕೈಜೋಡಿಸಿದ್ದಕ್ಕಾಗಿ ಧನ್ಯವಾದಗಳು. ಕರ್ನಾಟಕ ಮತ್ತು ಅದರಾಚೆಗಿನ ಪರಿವರ್ತನೆಯನ್ನು ಮುಂದುವರಿಸೋಣ ಎಂದು ಹೇಳಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಮೀನುಗಾರಿಕೆಗೆ ಕೇಂದ್ರದಿಂದ ₹4,969 ಕೋಟಿ ಅನುದಾನ

ನವದೆಹಲಿ: 4,969.62 ಕೋಟಿ ರೂ.ಗಳ ಪ್ರಸ್ತಾವನೆಗಳಿಗೆ ಕೇಂದ್ರದ ಮೀನುಗಾರಿಕೆ ಇಲಾಖೆ ಅನುಮೋದನೆ ನೀಡಿದೆ. ಸಣ್ಣ ಮೀನುಗಾರ ಸಮುದಾಯಗಳು ಹಾಗೂ ಸಾಂಪ್ರದಾಯಿಕ ಮೀನುಗಾರರ ಅಭಿವೃದ್ಧಿಗಾಗಿ ಮತ್ತು ಅವರ...

ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್.ಐ.ಆರ್. : ಸಿದ್ದರಾಮಯ್ಯ

ಬೆಂಗಳೂರು : ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ...

ಶಾಂತಿ, ಸೌಹಾರ್ದತೆ ಕಾಪಾಡಬೇಕು : ಸಂಭಲ್ ಜಾಮಾ ಮಸೀದಿ

ಹೊಸದಿಲ್ಲಿ: ಸಂಭಲ್ ಜಾಮಾ ಮಸೀದಿಯ ಆವರಣದಲ್ಲಿನ ಸಮೀಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಹೇಳಿದೆ. ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಲಹಾಬಾದ್...

99.17 crore released to Karnataka

The central government has taken steps to globally develop major tourist destinations that are not so popular in...