spot_img
spot_img

ATROCITIES AGAINST MINORITIES : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ ಮೌನವೇಕೆ?

spot_img
spot_img

Share post:

Jaipur (Rajasthan) News:

ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶದಿಂದ ಹೊರಹಾಕಿದ ನಂತರ ಅಲ್ಲಿ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ATROCITIES AGAINST MINORITIES ತಡೆಯಲು ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಗೆಹ್ಲೋಟ್ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೌನವನ್ನು ಅವರು ಪ್ರಶ್ನಿಸಿದ್ದಾರೆ.ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ATROCITIES AGAINST MINORITIES ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್, ಈ ವಿಷಯದಲ್ಲಿ ಕೇಂದ್ರ ಸರ್ಕಾರವು ಢಾಕಾ ಮೇಲೆ ಒತ್ತಡ ಹೇರುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಆಗಸ್ಟ್ 5 ರಂದು, ವಿದ್ಯಾರ್ಥಿ ನೇತೃತ್ವದ ಆಂದೋಲನದ ಭಾಗವಾಗಿ ಹಲವಾರು ವಾರಗಳ ಕಾಲ ನಡೆದ ಪ್ರತಿಭಟನೆ ಮತ್ತು ಘರ್ಷಣೆಗಳ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಲಾಯಿತು.

ATROCITIES AGAINST MINORITIES  76 ವರ್ಷದ ಹಸೀನಾ ಆಗಸ್ಟ್ 5 ರಂದು ಭಾರತಕ್ಕೆ ಪಲಾಯನ ಮಾಡಿದರು ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನುಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರವನ್ನು ರಚಿಸಲಾಯಿತು. ಅಂದಿನಿಂದ, ಅಲ್ಪಸಂಖ್ಯಾತರು, ವಿಶೇಷವಾಗಿ ಹಿಂದೂಗಳು ಮತ್ತು ಅವರ ಪೂಜಾ ಸ್ಥಳಗಳ ಮೇಲೆ ಹಲವಾರು ದಾಳಿಗಳು ನಡೆಯುತ್ತಿರುವ ಬಗ್ಗೆ ವರದಿಗಳು ಬಂದಿವೆ.

ATROCITIES AGAINST MINORITIES ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, “ಬಾಂಗ್ಲಾದೇಶದಲ್ಲಿ ಕ್ಷಿಪ್ರ ದಂಗೆಯ ನಂತರ ನಡೆದ ಹಿಂಸಾಚಾರದಲ್ಲಿ 23 ಹಿಂದೂಗಳು ಸಾವನ್ನಪ್ಪಿದ್ದಾರೆ ಮತ್ತು 152 ದೇವಾಲಯಗಳನ್ನು ಧ್ವಂಸಗೊಳಿಸಲಾಗಿದೆ. ಇಷ್ಟೆಲ್ಲ ಆಗುತ್ತಿದ್ದರೂ ಭಾರತ ಸರ್ಕಾರವು ಈ ಬಗ್ಗೆ ಯಾವುದೇ ಪ್ರಮುಖ ಜಾಗತಿಕ ವೇದಿಕೆಗಳಲ್ಲಿ ಹೇಳಿಕೆ ನೀಡದಿರುವುದು ಅಥವಾ ಬಾಂಗ್ಲಾದೇಶದ ಮೇಲೆ ಒತ್ತಡ ಹೇರದೆ ಇರುವುದು ದುರದೃಷ್ಟಕರ. ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಲು ಭಾರತ ಸರ್ಕಾರ ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಅವರು ಹೇಳಿದರು.

“ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಕಲ್ಯಾಣವನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶ ಸರ್ಕಾರವು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಭಾರತ ನಿರೀಕ್ಷಿಸುತ್ತದೆ. 2024ರ ಡಿಸೆಂಬರ್ 9ರಂದು ಬಾಂಗ್ಲಾದೇಶದ ವಿದೇಶಾಂಗ ಕಾರ್ಯದರ್ಶಿಯ ಭೇಟಿಯ ಸಂದರ್ಭದಲ್ಲೂ ಇದನ್ನು ಪುನರುಚ್ಚರಿಸಲಾಗಿದೆ. ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಬಾಂಗ್ಲಾದೇಶದ ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ” ಎಂದು ಕೀರ್ತಿ ವರ್ಧನ್ ಸಿಂಗ್ ಹೇಳಿದರು.

ATROCITIES AGAINST MINORITIES ಡಿಸೆಂಬರ್ 20 ರಂದು ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್, ಈ ವರ್ಷದ ಡಿಸೆಂಬರ್ 8 ರವರೆಗೆ ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ 2,200 ಹಿಂಸಾಚಾರ ಪ್ರಕರಣಗಳು ವರದಿಯಾಗಿವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನು ಓದಿರಿ : PlayStation Plus Monthly Games For February 2025!

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...