spot_img
spot_img

BAHUROOPI NATIONAL THEATRE FESTIVAL : ಜನವರಿ 14 ರಿಂದ 19ರವರೆಗೆ ಬಹುರೂಪಿ ನಾಟಕೋತ್ಸವ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Mysore News:

ROOBAHUPI NATIONAL THEATRE FESTIVAL-2025 ಕುರಿತಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು. ನಾಟಕೋತ್ಸವಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಕೈಜೋಡಿಸುವ ಮೂಲಕ ಯಶಸ್ವಿಗೊಳಿಸಲು ಸಹಕರಿಸಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಮನವಿ ಮಾಡಿದರು. ಮಹಾನಗರ ಪಾಲಿಕೆಯ ವತಿಯಿಂದ ಕಲಾಮಂದಿರ ಹಾಗೂ ರಂಗಾಯಣದ ಆವರಣದಲ್ಲಿ ಸ್ವಚ್ಛತೆ ಮಾಡಬೇಕು.

ಶುದ್ಧ ಕುಡಿಯುವ ನೀರು, ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು. ನಗರದ ಪ್ರಮುಖ ಸ್ಥಳಗಳಲ್ಲಿ ಸರ್ಕಾರದ ಯೋಜನೆಗಳಿಗೆ ಪ್ರಚಾರ ನೀಡಲು ವ್ಯವಸ್ಥೆ ಮಾಡಿರುವ ಡಿಜಿಟಲ್ ಸ್ಕ್ರೀನ್ ಮೂಲಕ ಉತ್ಸವದ ಪ್ರಚಾರ ಮಾಡಬೇಕು.  BAHUROOPI THEATRE FESTIVALನಡೆಯುವುದರಿಂದ ಆ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಆಗದಂತೆ ಚೆಸ್ಕಾ ಅಧಿಕಾರಿಗಳು ಜಾಗ್ರತೆ ವಹಿಸಬೇಕು.

ಉತ್ಸವದ ದಿನಗಳಲ್ಲಿ ಸಂಜೆ 6ರಿಂದ ರಾತ್ರಿ 10 ಗಂಟೆಯವರೆಗೆ ನಗರದ ವಿವಿಧ ಬಡಾವಣೆಗಳಿಗೆ ನಗರ ಸಾರಿಗೆ ಬಸ್ ಸೌಲಭ್ಯವನ್ನು ಕೆಎಸ್​​ಆರ್​​ಟಿಸಿ ವತಿಯಿಂದ ಒದಗಿಸಬೇಕು. ಶಾಲಾ ಕಾಲೇಜು ಶಿಕ್ಷಕರು ಹಾಗೂ ಮಕ್ಕಳು ನಾಟಕೋತ್ಸವದಲ್ಲಿ ಭಾಗವಹಿಸಲು ಅವರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ BAHUROOPI NATIONAL THEATRE FESTIVAL-2025ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೈಸೂರು ಜಿಲ್ಲೆಗೆ ರಂಗಾಯಣವು ಒಂದು ಹೆಮ್ಮೆ, ಮಾನ್ಯ ಮುಖ್ಯಮಂತ್ರಿಗಳ ತವರು ಜಿಲ್ಲೆ. ನಾಡಹಬ್ಬ ದಸರಾವನ್ನು ಮೈಸೂರು ಜಿಲ್ಲೆಯಲ್ಲಿ ಆಚರಿಸುವುದು ನಮ್ಮ ಜಿಲ್ಲೆಗೆ ಕೀರ್ತಿ. ನಾಟಕೋತ್ಸವದಲ್ಲಿ ನಾಗರಿಕ ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ನಾಟಕಗಳನ್ನು ಆಯೋಜಿಸಲಾಗುತ್ತದೆ ಎಂದು ತಿಳಿಸಿದರು. ರಂಗಾಯಣದ ನಿರ್ದೇಶಕರಾದ ಸತೀಶ್ ತಿಪಟೂರು ಅವರು ಮಾತನಾಡಿ, ರಂಗಾಯಣ ಪ್ರಾರಂಭವಾಗಿ 35 ವರ್ಷಗಳು ಸಂದಿವೆ.

ROOBAHUPI THEATRE FESTIVALದಲ್ಲಿ 6 ದಿನಗಳ ಕಾಲ 24 ನಾಟಕಗಳು ಪ್ರದರ್ಶನ ಆಗುತ್ತವೆ. ಇವು ಬೇರೆ ಬೇರೆ ಭಾಷೆಯ ನಾಟಕಗಳಾಗಿವೆ. ಈ ಬಾರಿ ಮಕ್ಕಳಿಗಾಗಿ ಮಕ್ಕಳ ನಾಟಕೋತ್ಸವವನ್ನು ಒಂದು ವೇದಿಕೆಯಲ್ಲಿ ಮಾಡಲಾಗುತ್ತದೆ. ಎಲ್ಲ ಇಲಾಖೆಗಳು ಸಹಕಾರ ನೀಡುವ ಮೂಲಕ ನಾಟಕೋತ್ಸವ ಯಶಸ್ವಿಗೆ ಕೈಜೋಡಿಸಿ ಎಂದು ಮನವಿ ಮಾಡಿದರು. ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜವರೇಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ. ಹರೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ, ಬಹುರೂಪಿ ನಾಟಕೋತವಕ್ಕೆ ಆಗಮಿಸುವ ಅತಿಥಿಗಳು, ಕಲಾತಂಡಗಳು ಹಾಗೂ ವಿದ್ವಾಂಸರನ್ನು ಕರೆತರಲು 4 ಮಿನಿ ಬಸ್​​ಗಳು ಹಾಗೂ 3 ಟಾಟಾ ಸುಮೊ ವಾಹನಗಳನ್ನು ಒದಗಿಸಬೇಕು. ಗಣ್ಯರ ವಾಸ್ತವ್ಯಕ್ಕಾಗಿ ವಸತಿ ಗೃಹಗಳನ್ನು ಲೋಕೋಪಯೋಗಿ ಇಲಾಖೆಯಿಂದ ಕಾಯ್ದಿರಿಸಬೇಕು. ಬಹುರೂಪಿ ವಸ್ತು ಪ್ರದರ್ಶನದಲ್ಲಿ ಕರಕುಶಲ ಮಳಿಗೆಗಳನ್ನು ತೆರೆಯಲಾಗುವುದು ಎಂದು ತಿಳಿಸಿದರು.

 

ಇದನ್ನು ಓದಿರಿ : SABARIMALA TEMPLE : 41 ದಿನದಲ್ಲಿ 32 ಲಕ್ಷ ಭಕ್ತರ ಭೇಟಿ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

Badrinath Mandir News: ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ...