spot_img
spot_img

BBMP ಕಸದ ಲಾರಿ ಡಿಕ್ಕಿ ಹೊಡೆದು ಯುವಕ, ಯುವತಿ ಸಾವು.. ಮೃತ ಶಿಲ್ಪಾ ಯಾರು..?

spot_img
spot_img

Share post:

ನಿನ್ನೆ ರಾತ್ರಿ ಬೆಂಗಳೂರಿನ ಕೆಆರ್​ ಸರ್ಕಲ್​​ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕ-ಯುವತಿ ಸಾವನ್ನಪ್ಪಿದ್ದಾರೆ. ಪ್ರಶಾಂತ್ (25), ಶಿಲ್ಪ (25) ಮೃತ ದುರ್ದೈವಿಗಳು.

ರಾತ್ರಿ ರಾತ್ರಿ 9 ಗಂಟೆ ಊಟ ಮುಗಿಸಿಕೊಂಡು ಬೈಕ್​​ನಲ್ಲಿ ಹೋಗ್ತಿದ್ದಾಗ ಬಿಬಿಎಂಪಿಯ ಕಸದ ಲಾರಿ ಡಿಕ್ಕಿ ಹೊಡೆದು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಿಬ್ಬರು ಸ್ನೇಹಿತರಾಗಿದ್ದು, ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಐಟಿಪಿಎಲ್ ಟಿಸಿಎಸ್​ನಲ್ಲಿ ಕೆಲಸ ಮಾಡ್ತಿದ್ದರು. ಇನ್ನು, ಪ್ರಶಾಂತ್ ಮೂಲತಃ ಬೆಂಗಳೂರಿನ ಬಾಣಸವಾಡಿ ನಿವಾಸಿ ಎಂದು ತಿಳಿದುಬಂದಿದೆ. ಈತನ ಸ್ನೇಹಿತೆ ಶಿಲ್ಪಾ ಆಂಧ್ರ ಪ್ರದೇಶದವಳು. ಉದ್ಯೋಗ ಅರಿಸಿ ಬೆಂಗಳೂರಿಗೆ ಬಂದಿದ್ದ ಶಿಲ್ಪಾ ಪಿಜಿ ಒಂದರಲ್ಲಿ ವಾಸವಿದ್ದಳು.

ನಿನ್ನೆ ಭಾನುವಾರ ರಜೆ ಹಿನ್ನೆಲೆಯಲ್ಲಿ ಸಂಜೆ ಸ್ನೇಹಿತನ ಜೊತೆ ಊಟಕ್ಕೆ ಎಂದು ಹೋಗಿದ್ದಳು. ರಾತ್ರಿಯ ಊಟ ಮುಗಿಸಿ ಮೆಜೆಸ್ಟಿಕ್​​ನಿಂದ ಕೆ.ಆರ್.ಸರ್ಕಲ್ ಮಾರ್ಗವಾಗಿ ಬೈಕ್​ನಲ್ಲಿ ಬರುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಸಿಐಡಿ ಸಿಗ್ನಲ್ ಮಾರ್ಗದಿಂದ ಕೆ.ಆರ್.ಸರ್ಕಲ್ ಕಡೆ ವೇಗವಾಗಿ ಬಂದ ಕಸದ ಲಾರಿ, ಬೈಕ್​ಗೆ ಗುದ್ದಿದೆ. ಅಪಘಾತದ ರಭಸಕ್ಕೆ 10 ಮೀಟರ್ ನಷ್ಟು ದೂರ ಮೃತರ ದೇಹಗಳು ಹೋಗಿ ಬಿದ್ದಿವೆ.

ಪರಿಣಾಮ ರಸ್ತೆ ಮೇಲೆ ರಕ್ತ ಚೆಲ್ಲಿದೆ. ಕೂಡಲೇ ಅಪಘಾತಕ್ಕೊಳಗಾದವರನ್ನ ಆಸ್ಪತ್ರೆಗೆ ಸಾಗಿಸುವ ಕೆಲಸ ನಡೆದಿತ್ತು, ಆದರೆ ಮಾರ್ಗದಲ್ಲಿಯೇ ಸಾವನ್ನಪ್ಪಿದ್ದಾರೆ. ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...