spot_img
spot_img

ಸಾರ್ವಜನಿಕರ ಕುಂದುಕೊರತೆ ನಿವಾರಿಸಲು BBMP ಕ್ರಮ : ನೋಡಲ್‌ ಅಧಿಕಾರಿ ನಿಯೋಜನೆ

spot_img
spot_img

Share post:

ಬೆಂಗಳೂರು: ಡಿಸಿಎಂ ಡಿಕೆ,ಶಿವಕುಮಾರ್ ಅವರ ಸೂಚನೆ ಮೇರೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ನಗರದ ಎಲ್ಲಾ ಎಂಟು ವಲಯಗಳ 217 ವಾರ್ಡ್‌ಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

ನಗರದ ಎಲ್ಲಾ ವಾರ್ಡ್‌ಗಳಲ್ಲಿಯೂ ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸಲು ಮುಂದಾಗಿರುವ ಬಿಬಿಎಂಪಿ, ಪ್ರತಿ ವಾರ್ಡ್‌ಗೆ ಒಬ್ಬ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿದೆ.
ಡಿಸಿಎಂ ಡಿಕೆ,ಶಿವಕುಮಾರ್ ಅವರ ಸೂಚನೆ ಮೇರೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ನಗರದ ಎಲ್ಲಾ ಎಂಟು ವಲಯಗಳ 217 ವಾರ್ಡ್‌ಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

ಸಭೆ ನಡೆಯುವ ಕುರಿತು ಪ್ರಚಾರ ಮಾಡಬೇಕು. ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇತರೆ ಇಲಾಖೆಗಳಿಗೆ ಸಂಬಂಧಿಸಿದ ದೂರುಗಳಿದ್ದರೆ, ಆಯಾ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಸಮಸ್ಯೆಯನ್ನು ವಾರ್ಡ್ ಹಂತದಲ್ಲಿಯೇ ಪರಿಹರಿಸಬೇಕು. ಅಲ್ಲಿ ಬಗೆಹರಿಸಲಾಗದ ಸಮಸ್ಯೆಗಳನ್ನು ವಲಯ ಮಟ್ಟದಲ್ಲಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಮೇಲಧಿಕಾರಿಗಳಿಗೆ ಸೂಕ್ತ ಪ್ರಸ್ತಾವವನ್ನು ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಆದೇಶದಲ್ಲಿ ತಮಗೆ ನಿಯೋಜಿಸಿರುವ ವಾರ್ಡ್‌ನಲ್ಲಿ ಕಡ್ಡಾಯವಾಗಿ ಪ್ರತಿ ಬುಧವಾರ ಕಚೇರಿಯ ಅವಧಿಯಲ್ಲಿ ಹಾಜರಿರಬೇಕು. ಸಾರ್ವಜನಿಕರೊಂದಿಗೆ ಸಭೆ ನಡೆಸಿ, ಅವರ ದೂರು, ಸಮಸ್ಯೆಗಳನ್ನು ಆಲಿಸಬೇಕು. ಇತರೆ ಅಧಿಕಾರಿಗಳ ಸಹಯೋಗದೊಂದಿಗೆ ಸಮಸ್ಯೆಯನ್ನು ಇತ್ಯರ್ಥಪಡಿಸಬೇಕು ಎಂದು ಸೂಚನೆ ನೀಡಿದ್ದಾರೆ.

ವಾರ್ಡ್ ಮಟ್ಟದಲ್ಲಿ ಪರಿಹರಿಸಲಾಗದ ಸಮಸ್ಯೆಗಳನ್ನು ಪರಿಶೀಲಿಸಿ ಸೂಕ್ತ ಪ್ರಸ್ತಾವನೆಗಳನ್ನು ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಸಲ್ಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರತಿ ವಾರ್ಡ್‌ಗೆ ನಿಯೋಜಿಸಿರುವ ನೋಡಲ್ ಅಧಿಕಾರಿಯ ಹೆಸರು, ವಾರ್ಡ್ ಹೆಸರು, ಹುದ್ದೆ ಹಾಗೂ ದೂರವಾಣಿ ಸಂಖ್ಯೆಯುಳ್ಳ ಪಟ್ಟಿಯನ್ನು ಪಾಲಿಕೆಯ ವೆಬ್‌ಸೈಟ್‌ bbmp.gov.in/home ನಲ್ಲಿ ಅಪ್ಲೋಡ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...