spot_img
spot_img

BCCI OMBUDSMAN:ನಿವೃತ್ತ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇಮಕ .

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

New Delhi News:

ಅರುಣ್ ಮಿಶ್ರಾ ಜುಲೈ 7, 2014 ರಿಂದ ಸೆಪ್ಟೆಂಬರ್ 2, 2020 ರವರೆಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದ್ದಾರೆ. ನಂತರ ಅವರನ್ನು ಜೂನ್ 2, 2021 ರಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ಎಚ್ಆರ್​ಸಿ) ಅಧ್ಯಕ್ಷರಾಗಿ ನೇಮಿಸಲಾಯಿತು ಮತ್ತು ಜೂನ್ 1, 2024 ರವರೆಗೆ ಅವರು ಈ ಹುದ್ದೆಯಲ್ಲಿದ್ದರು.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಯ ನೂತನ OMBUDSMAN ಮತ್ತು ನೈತಿಕ ಅಧಿಕಾರಿಯಾಗಿ ಸುಪ್ರೀಂಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ. ಸೆಪ್ಟೆಂಬರ್ 3, 1955 ರಂದು ಗ್ವಾಲಿಯರ್​ನಲ್ಲಿ ಜನಿಸಿದ ಮಿಶ್ರಾ 1978 ರಿಂದ 1999 ರವರೆಗೆ ವೃತ್ತಿಪರ ವಕೀಲರಾಗಿ ಕೆಲಸ ಮಾಡಿದರು.

ಈ ಅವಧಿಯಲ್ಲಿ ಅವರು ಮಧ್ಯಪ್ರದೇಶ ಹೈಕೋರ್ಟ್​ನ ನ್ಯಾಯಪೀಠದಲ್ಲಿ ಸಾಂವಿಧಾನಿಕ, ಸಿವಿಲ್, ಕೈಗಾರಿಕಾ, ಕ್ರಿಮಿನಲ್ ಮತ್ತು ಸೇವಾ ವಿಷಯಗಳಲ್ಲಿ ಪರಿಣಿತ ವಕೀಲರಾಗಿ ಸೇವೆ ಸಲ್ಲಿಸಿದ್ದರು .ಬಿಸಿಸಿಐ ಈ ಬಗ್ಗೆ ತನ್ನ ವೆಬ್​ಸೈಟ್​ನಲ್ಲಿ ಅಧಿಕೃತವಾಗಿ ಪ್ರಕಟಣೆ ನೀಡಿದೆ.

ಅಕ್ಟೋಬರ್ 25, 1999 ರಂದು ಮಧ್ಯಪ್ರದೇಶ ಹೈಕೋರ್ಟ್​ನ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ಮಿಶ್ರಾ ನವೆಂಬರ್ 26, 2010 ರಂದು ರಾಜಸ್ಥಾನ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡರು ಮತ್ತು ಡಿಸೆಂಬರ್ 14, 2012 ರಂದು ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಳ್ಳುವವರೆಗೂ ಈ ಹುದ್ದೆಯಲ್ಲಿದ್ದರು.

ಅವರು 1998 ರಿಂದ 1999 ರವರೆಗೆ ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಈ ಉನ್ನತ ಹುದ್ದೆಗೆ ಆಯ್ಕೆಯಾದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾದರು. ಹೊಸ ಸಂವಿಧಾನದ ಪ್ರಕಾರ ಸುಪ್ರೀಂ ಕೋರ್ಟ್ ತನ್ನ ಮಾಜಿ ನ್ಯಾಯಮೂರ್ತಿ ಡಿ.ಕೆ. ಜೈನ್ ಅವರನ್ನು 2019 ರ ಫೆಬ್ರವರಿಯಲ್ಲಿ ಹೊಸ ಬಿಸಿಸಿಐ OMBUDSMAN ಮತ್ತು ನೈತಿಕ ಅಧಿಕಾರಿಯಾಗಿ ನೇಮಿಸಿತು. ಅವರು 2021 ರವರೆಗೆ ಈ ಹುದ್ದೆಯಲ್ಲಿ ಸೇವೆ ಸಲ್ಲಿಸಿದರು.

ನ್ಯಾಯಮೂರ್ತಿ ಮಿಶ್ರಾ ಅವರ ನೇಮಕಕ್ಕೂ ಮೊದಲು ನ್ಯಾಯಮೂರ್ತಿ ವಿನೀತ್ ಸರನ್ ಅವರನ್ನು 2022 ರಲ್ಲಿ ಬಿಸಿಸಿಐ OMBUDSMAN ಮತ್ತು ನೈತಿಕ ಅಧಿಕಾರಿಯಾಗಿ ನೇಮಿಸಲಾಗಿತ್ತು.ದೆಹಲಿ ಮತ್ತು ಮದ್ರಾಸ್ ಹೈಕೋರ್ಟ್​ಗಳ ಮಾಜಿ ಮುಖ್ಯ ನ್ಯಾಯಮೂರ್ತಿ ಅಜಿತ್ ಪ್ರಕಾಶ್ ಶಾ ಅವರು ಬಿಸಿಸಿಐನ ಮೊದಲ OMBUDSMAN ಮನ್ ಆಗಿ ನೇಮಕಗೊಂಡಿದ್ದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

NARGIS FAKHRI MARRIAGE:ವರ ಟೋನಿ ಬಗ್ಗೆ ಇಲ್ಲಿದೆ ಮಾಹಿತಿ

  Nargis marriage news: ಸೂಪರ್​ ಹಿಟ್​ ರಾಕ್‌ಸ್ಟಾರ್, ಮೆ ತೇರಾ ಹೀರೋ ಮತ್ತು ಹೌಸ್‌ಫುಲ್ 3 ಚಿತ್ರಗಳಿಗೆ ಹೆಸರುವಾಸಿಯಾಗಿರುವ ಬಾಲಿವುಡ್ ನಟಿ ನರ್ಗಿಸ್ ಫಕ್ರಿ (Nargis...

THREE BUS EXPLOSION IN ISRAEL:ಉಗ್ರರ ಕೃತ್ಯದ ಶಂಕೆ, ವ್ಯಗ್ರಗೊಂಡ ಇಸ್ರೇಲ್

Bat Yam News: ಒಂದೂವರೆ ವರ್ಷಗಳ ಕಾಲ ನಡೆದ ಯುದ್ದದ ಬಳಿಕ ಕದನ ವಿರಾಮಕ್ಕೆ ಹಮಾಸ್​, ISRAEL​ ಒಪ್ಪಿದ್ದು, ಇದರ ಭಾಗವಾಗಿ ಹಸ್ತಾಂತರ ಪ್ರಕ್ರಿಯೆ ಕೂಡ...

NEW BAT CORONAVIRUS: ಕೋವಿಡ್ ರೀತಿಯ ಮತ್ತೊಂದು ವೈರಸ್ ಬಾವಲಿಯಲ್ಲಿ ಪತ್ತೆ

  Beijing, China News: ಇದು ಜನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಚೀನಾದ ಬ್ಯಾಟ್​ ವುಮೆನ್​ ಎಂದೇ ಖ್ಯಾತಿಯಾಗಿರುವ ವೈರಾಲಾಜಿಸ್ಟ್​​ ಶಿ ಜೆಂಗಾಲಿ ಅಧ್ಯಯನ ನಡೆಸಿದ್ದಾರೆ....

CONTENT CREATORS KUMBH JOURNEY:1500 ಕಿ.ಮೀ ದೂರದ ಪ್ರಯಾಗ್ರಾಜ್ಗೆ ನಯಾಪೈಸೆ ಖರ್ಚಿಲ್ಲದೆ ತಲುಪಿದ ಕಂಟೆಂಟ್ ಕ್ರಿಯೇಟರ್!

New Delhi News: ಮಹಾರಾಷ್ಟ್ರದ ಕಂಟೆಂಟ್​ ಕ್ರಿಯೇಟರ್​ ದಿವ್ಯಾ ಫೋಫಾನಿ ಕುಂಭಮೇಳಕ್ಕೆ ತಾವು ಮುಂಬೈನಿಂದ ಬಂದ ರೀತಿ ಮತ್ತು ಹಾದಿಯ ನಡುವೆ ಜನರು ನೀಡಿದ ನೆರವನ್ನು...