spot_img
spot_img

BENGALURU SECURITY – ಕ್ರಿಸ್ಮಸ್, ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆ ನಡೆದರೆ ಡಿಸಿಪಿಗಳೇ ಹೊಣೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

ಬೆಂಗಳೂರಿನ ಎಂ.ಜಿ.ರಸ್ತೆ, ಬಿಗ್ರೇಡ್ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್​​ನಲ್ಲಿ ಹೊಸ ವರ್ಷ ಆಚರಿಸಲು ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಈ ವೇಳೆ ಅಹಿತಕರ ಘಟನೆಗಳು ಸಂಭವಿಸಿದರೆ ಆಯಕಟ್ಟಿನ ಡಿಸಿಪಿಗಳೇ ಹೊಣೆಗಾರರು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.ಕ್ರಿಸ್​​ಮಸ್ ಹಾಗೂ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದೆ.

ಮುಂಬರುವ ಕ್ರಿಸ್​​ಮಸ್ ಹಾಗೂ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಎಸಿಪಿ ಮೇಲ್ಪಟ್ಟ ಅಧಿಕಾರಿಗಳೊಂದಿಗೆ ಇಂದು ನಗರ ಪೊಲೀಸ್ ಆಯುಕ್ತ ಕಚೇರಿಯಲ್ಲಿ ಸಭೆ ನಡೆಸಿ ಅವರು ಮಾತನಾಡಿದರು. ಕ್ರಿಸ್​ಮಸ್ ಹಾಗೂ ಹೊಸ ವರ್ಷಾಚರಣೆಯನ್ನು ಜನರು ಸಂತೋಷದಿಂದ ಆಚರಿಸಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಲಾಗುವುದು. ಬೆಂಗಳೂರಿಗೆ ಬರಲು ಯಾರೂ ಭಯಪಡದಂತೆ ಆಚರಿಸುವ ರೀತಿ ವಾತಾವರಣ ನಿರ್ಮಿಸಬೇಕು ಎಂದರು.

ಪ್ರತಿವರ್ಷದಂತೆ ಈ ಬಾರಿಯೂ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಂತೋಷದಿಂದ ಹೊಸ ವರ್ಷ ಆಚರಿಸಬೇಕು. ಇದು ಅವರ ಪಾಲಿಗೆ ದುಃಖದ ದಿನವಾಗಬಾರದು. ಈ ದಿಸೆಯಲ್ಲಿ ಕಾನೂನು ಸುವ್ಯವಸ್ಥೆ, ಸಂಚಾರ ದಟ್ಟಣೆ ಹೇಗೆ ನಿಭಾಯಿಸಬೇಕು‌ ಹಾಗೂ ಮಾದಕವಸ್ತು ಮಾರಾಟ, ಸರಬರಾಜು ಹೇಗೆ ಹತ್ತಿಕ್ಕಬೇಕು ಎಂಬುದರ ಬಗ್ಗೆ ಚರ್ಚಿಸಲಾಗಿದೆ‌. ಆದಾಗ್ಯೂ ಅಹಿತಕರ ಘಟನೆ ನಡೆದರೆ ಆಯಾ ವಿಭಾಗದ ಡಿಸಿಪಿಯೇ ಜವಾಬ್ದಾರರು ಎಂದು ಸಚಿವರು ಎಚ್ಚರಿಸಿದ್ದಾರೆ.

 

Practice is not restricted:

ಹೊಸ ವರ್ಷ ದಿನದಂದು ಹೆಚ್ಚು ಜನ ಸೇರುವ ಎಂ.ಜಿ.ರಸ್ತೆ, ಬಿಗ್ರೇಡ್ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್​​ನಲ್ಲಿ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿಲ್ಲ. ಬದಲಾಗಿ ಜನರನ್ನು ಒಂದು ಕಡೆ ಬಂದು ಇನ್ನೊಂದು ಬದಿಯಲ್ಲಿ ಹೋಗುವ ಹಾಗೆ ಮಾಡಲಾಗಿದೆ. ಸುಮಾರು 7 ಲಕ್ಷ ಜನರು ಬರುವ ಸಾಧ್ಯತೆಯಿದೆ ಎಂದು ಹೇಳಿದರು.

 

Don’t give police leave:

ಅಗತ್ಯ ಬಂದೋಬಸ್ತ್ ಹಿನ್ನೆಲೆಯಲ್ಲಿ ನಗರ‌ದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ರಜೆ ನೀಡಬಾರದು. ತೀರ ಅಗತ್ಯತೆ ಮತ್ತು ಅನಿವಾರ್ಯತೆ ಇದ್ದವರಿಗೆ ರಜೆ ನೀಡುವಂತೆ ಸಚಿವರು ತಾಕೀತು ಮಾಡಿದರು.ಕ್ರಿಸ್​ಮಸ್ ಆಚರಣೆ ಹಿನ್ನೆಲೆಯಲ್ಲಿ ಗುಪ್ತದಳ ಇಲಾಖೆಯೊಂದಿಗೆ ನಿರಂತರವಾಗಿ‌ ಸಂಪರ್ಕದಲ್ಲಿರಬೇಕು. ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಸಣ್ಣ ಪುಟ್ಟ ಅನಾಹುತಗಳೂ ಸಂಭವಿಸದಂತೆ ಎಚ್ಚರಿಕೆ ವಹಿಸಬೇಕಿದೆ. ಹೊಸ ವರ್ಷ ಆಚರಿಸುವವರಿಗೆ ಆಡಚಣೆ ಮಾಡುವುದು ಬೇಡ. ಅವರಿಗೆ ಸುರಕ್ಷತೆ ನೀಡಬೇಕು. ತೊಂದರೆ ಉಂಟು ಮಾಡುವ ಕಿಡಿಗೇಡಿಗಳ ಮೇಲೆ ನಿಗಾವಹಿಸಿ ಕ್ರಮ ಜರುಗಿಸಬೇಕು.

 

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

HIGH COURT : ಚಾಮರಾಜಪೇಟೆ ಪಶು ವೈದ್ಯಕೀಯ ಆಸ್ಪತ್ರೆ ಜಾಗ ಮೊರಾರ್ಜಿ ಶಾಲೆಗೆ ಹಸ್ತಾಂತರ

Bangalore News: HIGH COURT ಪ್ರಕರಣ ಸಂಬಂಧ ವಕೀಲ ಗಿರೀಶ್ ಭಾರದ್ವಾಜ್​ ​ ಹಾಗೂ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ...

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...