WhatsApp Group
Join Now
Telegram Group
Join Now
Instagram Account
Follow Now
Facebook Page
Follow Now
Bitter Gourd Juice Benefits News:
ಹಾಗಲಕಾಯಿ ರಸವನ್ನು ನಿಯಮಿತವಾಗಿ ನೆತ್ತಿ ಹಾಗೂ ಕೂದಲಿಗೆ ಹಚ್ಚುವುದರಿಂದ ಕೂದಲು ಉದುರುವಿಕೆಯ ಸಮಸ್ಯೆ ಕಡಿಮೆಯಾಗುತ್ತದೆ. ಕೂದಲಿನ ವಿವಿಧ ಸಮಸ್ಯೆಗಳನ್ನು ಹಾಗಲಕಾಯಿ ರಸದಿಂದ ಹೇಗೆ ತಡೆಗಟ್ಟಬಹುದು ಎಂಬುದನ್ನು ತಿಳಿಯೋಣ. ಹಾಗಲಕಾಯಿ ಸೇವಿಸುವುದರಿಂದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳು ದೊರೆಯುತ್ತವೆ. ಅದರಲ್ಲಿ ಹಾಗಲಕಾಯಿ ರಸದಿಂದ ಕೂದಲಿನ ಸೌಂದರ್ಯ ಹೆಚ್ಚಿಸಲು ಸಹಾಯವಾಗುತ್ತದೆ ಎಂದು ತಜ್ಞರು ಹೇಳುತ್ತಾರೆ.
Tips for applying bitter gourd juice to prevent hair fall:ಅರ್ಧ ಗಂಟೆಯ ಬಳಿಕ ಬೆಚ್ಚಗಿನ ನೀರಿನಿಂದ ಸ್ನಾನ ಮಾಡಿ. ಈ ಮಿಶ್ರಣವನ್ನು ವಾರಕ್ಕೆ ಎರಡು ಬಾರಿ ಹಚ್ಚುವುದರಿಂದ ಕೂದಲು ಉದುರುವಿಕೆಯನ್ನು ನಿಯಂತ್ರಿಸಲು ಸಹಾಯ ಆಗುತ್ತದೆ ಎಂದು ತಜ್ಞರು ತಿಳಿಸುತ್ತಾರೆ.
ಅರ್ಧ ಕಪ್ ಹಾಗಲಕಾಯಿ ರಸವನ್ನು ತೆಗೆದುಕೊಂಡು ಅದಕ್ಕೆ ಒಂದು ಟೀಸ್ಪೂನ್ ತೆಂಗಿನ ಎಣ್ಣೆ ಮಿಶ್ರಣ ಮಾಡಿ. ಬಳಿಕ ಈ ಮಿಶ್ರಣವನ್ನು ನಿಮ್ಮ ನೆತ್ತಿ ಹಾಗೂ ಕೂದಲಿಗೆ ಹಚ್ಚಿ ಹತ್ತು ನಿಮಿಷಗಳ ಕಾಲ ಮಸಾಜ್ ಮಾಡಬೇಕಾಗುತ್ತದೆ.
2019ರಲ್ಲಿ ಜರ್ನಲ್ ಆಫ್ ಕಾಸ್ಮೆಟಿಕ್ಸ್, ಡರ್ಮಟೊಲಾಜಿಕಲ್ ಸೈನ್ಸಸ್ ಹಾಗೂ ಅಪ್ಲಿಕೇಶನ್ಸ್‌ನಲ್ಲಿ ಪ್ರಕಟವಾದ ‘ಕೂದಲು ಬೆಳವಣಿಗಾಗಿ ಬಯೋಆಕ್ಟಿವ್ ಕಾಂಪೌಂಡ್ ಲೋಡೆಡ್ ನ್ಯಾನೊಕ್ಯಾರಿಯರ್ಸ್: ಪ್ರಸ್ತುತ ಸ್ಥಿತಿ ಮತ್ತು ಭವಿಷ್ಯದ ದೃಷ್ಟಿಕೋನಗಳು” ಎಂಬ ಅಧ್ಯಯನದಲ್ಲಿ ಈ ವಿಷಯವು ಸ್ಪಷ್ಟವಾಗಿ ತಿಳಿದಿದೆ.
Prevents hair split ends: ಸುಮಾರು 40 ನಿಮಿಷಗಳ ನಂತರ ಬೆಚ್ಚಗಿನ ನೀರಿನಿಂದ ಸ್ನಾನ ಮಾಡಬೇಕಾಗುತ್ತದೆ. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದರೆ ಮೂರು ವಾರಗಳಲ್ಲಿ ಉತ್ತಮ ಫಲಿತಾಂಶ ದೊರೆಯುತ್ತದೆ ಎಂದು ತಜ್ಞರು ತಿಳಿಸುತ್ತಾರೆ.
ನಾವು ಬಳಸುವ ಕೂದಲಿನ ಉತ್ಪನ್ನಗಳಲ್ಲಿನ ರಾಸಾಯನಿಕಗಳು ಹಾಗೂ ಬಾಹ್ಯ ಮಾಲಿನ್ಯದ ಪರಿಣಾಮಗಳಿಂದಾಗಿ ಕೂದಲುಗಳು ಸ್ಪ್ಲಿಟ್ ಆಗುವುದನ್ನು ತಡೆಗಟ್ಟಲು ಹಾಗಲಕಾಯಿ ರಸವನ್ನು ಕೂದಲಿನ ಬೇರುಗಳಿಗೆ ಹಚ್ಚಿ ಹಾಗೆಯೇ ಬಿಡಬೇಕಾಗುತ್ತದೆ.
Dandruff disappears: ನಂತರ ಬೆಚ್ಚಗಿನ ನೀರಿನಿಂದ ತೊಳೆಯಿರಿ. ವಾರದಲ್ಲಿ ಎರಡರಿಂದ ಮೂರು ಬಾರಿ ಹೀಗೆ ಮಾಡುವುದರಿಂದ ತಲೆಹೊಟ್ಟು ಸಮಸ್ಯೆ ನಿವಾರಣೆಯಾಗುತ್ತದೆ.
ತಲೆಹೊಟ್ಟು ಸಮಸ್ಯೆಯನ್ನು ನಿವಾರಿಸಲು, ಸ್ವಲ್ಪ ಜೀರಿಗೆ ಬೀಜಗಳನ್ನು ತೆಗೆದುಕೊಂಡು ಅದರಿಂದ ಪೇಸ್ಟ್ ತಯಾರಿಸಿ. ತಯಾರಾದ ಪೇಸ್ಟ್ ಅನ್ನು ಹಾಗಲಕಾಯಿ ರಸದೊಂದಿಗೆ ಸೇರಿಸಿ ನೆತ್ತಿಗೆ ಹಚ್ಚಿಕೊಳ್ಳಿ. ಇದನ್ನು 15 ರಿಂದ 20 ನಿಮಿಷಗಳವರೆಗೆ ಹಾಗೆಯೇ ಬಿಡಬೇಕಾಗುತ್ತದೆ.
Solution for gray hair problem:ಇದನ್ನು ಕೆಲವು ದಿನಗಳವರೆಗೆ ನಿಯಮಿತವಾಗಿ ಮಾಡುವುದರಿಂದ ಉತ್ತಮ ಫಲಿತಾಂಶ ದೊರೆಯುತ್ತದೆ ಎಂದು ತಜ್ಞರು ಸಲಹೆ ನೀಡುತ್ತಾರೆ.ಹಾಗಲಕಾಯಿ ರಸವನ್ನು ಕೂದಲಿನ ಬೇರುಗಳಿಂದ ತುದಿಯವರೆಗೆ ಹಚ್ಚಿ ಒಂದು ಗಂಟೆ ಬಿಡಿ. ಬಳಿಕ ನಿಮ್ಮ ಕೂದಲನ್ನು ತಣ್ಣೀರಿನಿಂದ ತೊಳೆದುಕೊಳ್ಳಿ.
Best for dry hair:ಈ ಮಿಶ್ರಣವನ್ನು ನಿಮ್ಮ ಕೂದಲಿಗೆ ಹಚ್ಚಿ ಸ್ವಲ್ಪ ಹೊತ್ತು ನಿಧಾನವಾಗಿ ಮಸಾಜ್ ಮಾಡಿ. ನಿಮ್ಮ ಕೂದಲಿಗೆ ಹಚ್ಚಿ ಅರ್ಧ ಗಂಟೆಯವರೆಗೆ ಬಿಡಬೇಕಾಗುತ್ತದೆ. ಬಳಿಕ ನಿಮ್ಮ ಕೂದಲನ್ನು ಬೆಚ್ಚಗಿನ ನೀರಿನಿಂದ ತೊಳೆಯಿರಿ.
ಇದನ್ನು ಆಗಾಗ್ಗೆ ಮಾಡುವುದರಿಂದ ನಿಮ್ಮ ಕೂದಲು ತೇವಾಂಶದಿಂದ ಕೂಡಿರುತ್ತದೆ ಎಂದು ಆರೋಗ್ಯ ತಜ್ಞರು ವಿವರಿಸುತ್ತಾರೆ.ನಮ್ಮಲ್ಲಿ ಹಲವರ ಕೂದಲು ಒಣಗಿದಂತೆ ಕಾಣುತ್ತದೆ. ಅಂತಹ ಜನರು ಅರ್ಧ ಕಪ್ ಹಾಗಲಕಾಯಿ ರಸ ಹಾಗೂ ಮೊಸರು ಹಚ್ಚಿಕೊಳ್ಳಬೇಕಾಗುತ್ತದೆ. ಇದಕ್ಕೆ ಎರಡು ಟೀಸ್ಪೂನ್ ನಿಂಬೆ ರಸ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಬೆಕಾಗುತ್ತದೆ.
Important Note to Readers:ಈ ಲೇಖನದಲ್ಲಿ ನಿಮಗೆ ನೀಡಿರುವ ಎಲ್ಲ ಆರೋಗ್ಯ ಮಾಹಿತಿ, ಸಲಹೆಗಳು ನಿಮ್ಮ ತಿಳಿವಳಿಕೆಗಾಗಿ ಮಾತ್ರ. ವೈಜ್ಞಾನಿಕ ಸಂಶೋಧನೆ, ಅಧ್ಯಯನಗಳು, ವೈದ್ಯಕೀಯ ಮತ್ತು ಆರೋಗ್ಯ ವೃತ್ತಿಪರ ಸಲಹೆಯನ್ನು ಆಧರಿಸಿ ನಾವು ಈ ಮಾಹಿತಿಯನ್ನು ಒದಗಿಸುತ್ತಿದ್ದೇವೆ. ಆದರೆ, ಇವುಗಳನ್ನು ಅನುಸರಿಸುವ ಮೊದಲು ಪರಿಣತ ವೈದ್ಯರ ಸಲಹೆಗಳನ್ನು ತೆಗೆದುಕೊಳ್ಳುವುದು ಉತ್ತಮ.
ಇದನ್ನು ಓದಿರಿ :World Pulses Day 2025: India’s Plan for Food Security and Better Health