WhatsApp Group
Join Now
Telegram Group
Join Now
Instagram Account
Follow Now
Facebook Page
Follow Now
ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿ ಸದಸ್ಯತ್ವ ಅಭಿಯಾನದಡಿ 50 ಲಕ್ಷ ಸದಸ್ಯರ ನೋಂದಣಿ ಪೂರ್ಣಗೊಳಿಸಿದೆ ಎಂದು
ಬಿಜೆಪಿ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಹೇಳಿದ್ದಾರೆ.
ಉಭಯ ಸದನಗಳ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ, ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಎಲ್ಲ ಪದಾಧಿಕಾರಿಗಳ ಸಹಕಾರದಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಹೇಳಿದರು.
2014 ಮತ್ತು 19ರ ನಂತರ ಹೆಚ್ಚಿನ ಸದಸ್ಯರನ್ನು ನೋಂದಣಿ ಮಾಡಲಾಗಿದೆ. ರಾಜ್ಯದ ಸದಸ್ಯತ್ವ ನೋಂದಣಿ ಕುರಿತು ಕೇಂದ್ರ ನಾಯಕತ್ವ ಪ್ರಶಂಸೆ ವ್ಯಕ್ತಪಡಿಸಿದೆ. ಈ ಅವಧಿಯಲ್ಲಿ ಇನ್ನಷ್ಟು ಜನರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದರು.