spot_img
spot_img

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದ 50 ಕೋಟಿ ರೂಪಾಯಿ ಆಮಿಷದ ರಹಸ್ಯವನ್ನು ಬೇಧಿಸಿದ ಬಿಜೆಪಿ

spot_img
spot_img

Share post:

ಬೆಂಗಳೂರು : ಉಪಚುನಾವಣೆಯ ಬಹಿರಂಗ ಪ್ರಚಾರ ಮುಗಿದ ಬೆನ್ನಲ್ಲೇ, ನೇರವಾಗಿ ಅದೂ ಸಾರ್ವಜನಿಕ ಕಾರ್ಯಕ್ರಮದಲ್ಲಿ ಬಿಜೆಪಿಯು, ಸರ್ಕಾರವನ್ನು ಪತನಗೊಳಿಸಲು ಪ್ರಯತ್ನಿಸುತ್ತಿದೆ. ನಮ್ಮ 50 ಶಾಸಕರಿಗೆ ತಲಾ 50 ಕೋಟಿ ರೂಪಾಯಿಯ ಆಮಿಷವನ್ನು ಒಡ್ಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ, ಬಿಜೆಪಿ ಟ್ವೀಟ್ ಮಾಡಿ, ಮುಖ್ಯಮಂತ್ರಿಗಳ ಕಾಲೆಳೆದಿದೆ.

ಉಪಚುನಾವಣೆಯ ಬಹಿರಂಗ ಪ್ರಚಾರ ಮುಗಿದ ಬೆನ್ನಲ್ಲೇ, ಖುದ್ದು ಮುಖ್ಯಮಂತ್ರಿಗಳೇ ಗಂಭೀರ ಆರೋಪವನ್ನು ಮಾಡಿದ್ದರು. ಸರ್ಕಾರ ಪತನಗೊಳಿಸಲು ಬಿಜೆಪಿಯು, 50 ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿಯ ಆಮಿಷವನ್ನು ನೀಡಿದೆ ಎಂದು ಹೇಳಿದ್ದರು.

ಉಪ ಚುನಾವಣೆಯ ಪ್ರಚಾರದ ವೇಳೆ ಈ ಬಗ್ಗೆ ಏನೂ ಚಕಾರವೆತ್ತದ ಕಾಂಗ್ರೆಸ್, ಬಹಿರಂಗ ಪ್ರಚಾರ ಮುಗಿದ ಬೆನ್ನಲ್ಲೇ ಈ ವಿಚಾರವನ್ನು ಕೈಗೆತ್ತಿಕೊಂಡಿತ್ತು. ಈ ಬಗ್ಗೆ, ಸಿದ್ದರಾಮಯ್ಯನವರ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಂತೋಷ್ ಲಾಡ್, ಡಾ.ಪರಮೇಶ್ವರ್ ಆದಿಯಾಗಿ ಹೆಚ್ಚಿನ ಸಚಿವರು ತಲೆದೂಗಿದ್ದರು.

ಬಿಜೆಪಿ ಕೂಡಾ ಈ ವಿಚಾರದ ನಿಜಾಂಶವನ್ನು ಬಯಲುಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಸವಾಲು ಹಾಕಿತ್ತು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರೂ, ಮುಖ್ಯಮಂತ್ರಿಗಳ ಹೇಳಿಕೆ ಹಾಸ್ಯಾಸ್ಪದ ಎಂದು ಲೇವಡಿ ಮಾಡಿದ್ದರು.

ಕಾಂಗ್ರೆಸ್ ನಾಯಕರಿಂದ ಹೆಚ್ಚಿನ ಪ್ರತಿಕ್ರಿಯೆ ಇದಾದ ನಂತರ ಬರದ ಹಿನ್ನಲೆಯಲ್ಲಿ, ಬಿಜೆಪಿ ಸಾಲುಸಾಲು ಟ್ವೀಟ್ ಮಾಡಿ, ಸ್ಪಷ್ಟನೆಯನ್ನು ಕೇಳುತ್ತಿದೆ. ಇನ್ನೊಂದು ಕಡೆ, ಕಾಂಗ್ರೆಸ್ ನಾಯಕರನ್ನು ಲೇವಡಿ ಮಾಡುವ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದೆ.

ನಿಮ್ಮ ಅವಾಸ್ತವಿಕ ಗ್ಯಾರಂಟಿಗಳು ಮಹಾದೇಪ್ಪರಿಗೂ ತಲುಪುತ್ತಿಲ್ಲ, ಕಾಕಾ ಪಾಟೀಲರಿಗೂ ತಲುಪುತ್ತಿಲ್ಲ. ಅಷ್ಟಕ್ಕೂ ನಿಮ್ಮ ಅವಾಸ್ತವಿಕ ಗ್ಯಾರಂಟಿಗಳ ಅಪ್ರಬುದ್ಧ ಅನುಷ್ಟಾನಕ್ಕೆ ಹಣವನ್ನು ಜನಸಾಮಾನ್ಯರ ತೆರಿಗೆಯಿಂದ ಭರಿಸುತ್ತಿದ್ದಿರೆ ಹೊರತು ಕ್ವೀನ್ಸ್‌ ರಸ್ತೆಯ ಕೆಪಿಸಿಸಿ ಭವನದ ಇಡುಗಂಟಿನಿಂದಲ್ಲ ಎಂದು ಬಿಜೆಪಿ ಟ್ವೀಟ್ (ಎಕ್ಸ್) ಮಾಡಿದೆ.

ಇನ್ನೊಂದು ಟ್ವೀಟ್ ಅನ್ನು ಮಾಡಿ, ಅದರಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್ ಮತ್ತು ಸತೀಶ್ ಜಾರಕಿಹೊಳಿ ಅವರ ಫೋಟೋಗಳನ್ನು ಹಾಕಿ, ಎಲ್ಲರ ಫೋಟೋದ ಮೇಲೆ, ನನ್ನನ್ನು ಸಿಎಂ ಆಗಿ ಮುಂದುವರಿಸಿ ಅನ್ನೋ ಶಾಸಕರಿಗೆ 50 ಕೋಟಿ ಎಂದು ಸಿದ್ದರಾಮಯ್ಯ ಹೇಳುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ.

“ಕಾಂಗ್ರೆಸ್ ಸರಕಾರ ಪ್ರತಿಯೊಂದಕ್ಕೂ ಎಸ್‌ಐಟಿ ರಚನೆ ಮಾಡಿ ತನಿಖೆ ಮಾಡಿಸುತ್ತಿದ್ದಾರೆ. ಶಾಸಕರ ಖರೀದಿ ವಿಷಯಕ್ಕೂ ಒಂದು ಎಸ್ ಐಟಿ ರಚನೆ ಮಾಡಲಿ. ಸಿಎಂ ಹೇಳಿಕೆ ಹಾಸ್ಯಾಸ್ಪದವಾಗಿದೆ. 50 ಶಾಸಕರಿಗೆ ತಲಾ ₹50 ಕೋಟಿ ಎಂದು ಅಷ್ಟು ನಿಖರವಾಗಿ ಹೇಳುತ್ತಿದ್ದಾರೆ. ಹಾಗಿದ್ದರೆ ಸಿಎಂ ಬಳಿ ಎಲ್ಲಾ ಮಾಹಿತಿ ಇದೆ ಎಂದಾಯಿತು” ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದರು.

ಒಬ್ಬರಿಗೆ 50 ಕೋಟಿ ಎಂದರೆ 50 ಜನರಿಗೆ 2,500 ಕೋಟಿ ರೂಪಾಯಿ ಆಯಿತು. ಇದು, ಹಣದ ವ್ಯವಹಾರದ ಬಗ್ಗೆ ಮುಖ್ಯಮಂತ್ರಿಗಳು ಆಪಾದನೆಯನ್ನು ಮಾಡಿದ್ದಾರೆ. ಹಾಗಾಗಿ, ಇದು ತನಿಖೆಯಾಗಲೇ ಬೇಕು, ಸರ್ಕಾರ ಈ ವಿಚಾರಕ್ಕೆ ಸಂಬಂಧಿಸಿದಂತೆ, ಇಡಿಗೆ ಮಾಹಿತಿಯನ್ನು ನೀಡಲಿ ಎಂದು ಬಿಜೆಪಿ ನಾಯಕರು, ಸವಾಲು ಎಸೆದಿದ್ದರು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...