ಭೋಪಾಲ್: ಸೆಂಟ್ರಲ್ ಸೆಕ್ಯುರಿಟಿ ಇನ್‌ಸ್ಟಿಟ್ಯೂಟ್ ಆರ್ಡನೆನ್ಸ್ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದೆ. ಮಧ್ಯಪ್ರದೇಶದ ಜಬಲ್ಪುರದಲ್ಲಿ ಈ ಘಟನೆ ನಡೆದಿದ್ದು, ಬರೋಬ್ಬರಿ 12 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ.
ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಸ್ಫೋಟಗೊಂಡು ಗಾಯಗೊಂಡಿರುವವರಲ್ಲಿ ಅನೇಕರ ಸ್ಥಿತಿ ಚಿಂತಾಜನಕವಾಗಿದ್ದು, ಒಬ್ಬ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಪತ್ತೆಯಾಗಿರುವ ಕಾರ್ಮಿಕ ಸ್ಫೋಟ ಸಂಭವಿಸಿದ ವಿಭಾಗದ ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್‌ಗಳು ತಕ್ಷಣ ಸ್ಥಳಕ್ಕೆ ಧಾವಿಸಿದ್ದು,ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಸಿಡಿಮದ್ದು ತುಂಬುವ ಪ್ರಕ್ರಿಯೆಯಲ್ಲಿ, ಕಾರ್ಖಾನೆಯ F-6 ವಿಭಾಗದ 200 ಅನ್ನು ನಿರ್ಮಿಸುವಲ್ಲಿ ಹೈಡ್ರಾಲಿಕ್ ವ್ಯವಸ್ಥೆಯು ಅಸಮರ್ಪಕವಾಗಿ ಕಾರ್ಯನಿರ್ವಹಿಸಿತು.
ಸ್ಫೋಟ ತೀವ್ರಯೆ ಎಷ್ಟಿತ್ತು ಎಂದರೆ ಅದು ಐದು ಕಿಲೋಮೀಟರ್‌ಗಳಷ್ಟು ದೂರದ ಪ್ರದೇಶಗಳಲ್ಲಿ ಕೇಳಿಸಿತು. ಸ್ಥಳೀಯ ನಿವಾಸಿಗಳು ಆರಂಭದಲ್ಲಿ ಭೂಕಂಪ ಸಂಭವಿಸಿದೆ ಎಂದು ಭಾವಿಸಿದ್ದರು.
ಈ ಕಾರ್ಖಾನೆ ರಕ್ಷಣಾ ಉತ್ಪಾದನಾ ಇಲಾಖೆಯ ಅಡಿಯಲ್ಲಿ ಪ್ರಮುಖ ಯುದ್ಧಸಾಮಗ್ರಿ ಉತ್ಪಾದನಾ ಘಟಕವಾಗಿದೆ. ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದ್ದು, ಸ್ಫೋಟದ ಹಿಂದಿನ ನಿಖರ ಕಾರಣ ತನಿಖೆ ಪೂರ್ಣಗೊಂಡ ನಂತರ ತಿಳಿಯಲಿದೆ.
ಎರಡು ದಿನಗಳ ಹಿಂದೆ ದೆಹಲಿಯಲ್ಲಿರುವ ಕೇಂದ್ರೀಯ ಮೀಸಲು ಪಡೆ(CRPF) ಶಾಲೆಯ ಬಳಿ ಭಾರೀ ಸ್ಫೋಟವೊಂದು ಸಂಭವಿಸಿತ್ತು.
ಇನ್ನು ಸ್ಥಳಕ್ಕೆ ದೌಡಯಿಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ರಾಷ್ಟ್ರೀಯ ಭದ್ರತಾ ಸಿಬ್ಬಂದಿ (NSG) ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ. ಶಾಲೆಯ ಗೋಡೆ, ಸಮೀಪದ ಅಂಗಡಿಗಳು ಮತ್ತು ಕಾರಿಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.