ನವದೆಹಲಿ: ನಗರದ ರೋಹಿಣಿ ಪ್ರದೇಶದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಶಾಲೆಯ ಸಮೀಪ ಭಾನುವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದೆ ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಫೋಟ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶಾಲೆಯ ಗೋಡೆಗೆ ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.
ರೋಹಿಣಿಯ ಸೆಕ್ಟರ್ 14 ರ ಸಿಆರ್‌ಪಿಎಫ್ ಶಾಲೆಯ ಹೊರ ಗೋಡೆಯ ಬಳಿ ಬೆಳಿಗ್ಗೆ 7.50ರ ಸುಮಾರಿಗೆ ಸಂಭವಿಸಿದೆ.
ಅಗ್ನಿಶಾಮಕ ದಳದ ಸಿಬ್ಬಂದಿಗಳು ಪರಿಶೀಲನೆ ನಡೆಸಿ ಪರಿಶೀಲನೆ ವೇಳೆ ವೈಟ್ ಪೌಡರ್ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.
ಸ್ಫೋಟದ ತೀವ್ರತೆಗೆ ಸಮೀಪದ ಅಂಗಡಿಯ ಗಾಜುಗಳು ಹಾಗೂ ಅಂಗಡಿ ಬಳಿ ನಿಲ್ಲಿಸಿದ್ದ ಕಾರಿನ ಗಾಜುಗಳು ಹಾನಿಗೊಳಗಾಗಿವೆ.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಡಿಸಿಪಿ (ರೋಹಿಣಿ) ಅಮಿತ್ ಗೋಯೆಲ್ ಅವರು ತಿಳಿಸಿದ್ದಾರೆ.
ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದ ವೇಳೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರಿಗೆ ಸ್ಥಳದಲ್ಲಿ ಅನುಮಾನಾಸ್ಪದ ಬಿಳಿ ಪುಡಿಯನ್ನು ಪತ್ತೆ ಮಾಡಿದ್ದಾರೆ.
ಅಲ್ಲಿದ್ದ ಸ್ಥಳೀಯರು ಭಾರೀ ಸ್ಫೋಟದ ಶಬ್ಧ ಕೇಳಿಸಿದಾಗ ಎಚ್ಚರಗೊಂಡೆವು. ಆರಂಭದಲ್ಲಿ ಕಟ್ಟಡ ಕುಸಿದಿರಬಹುದು ಎಂದೇ ಭಾವಿಸಿದ್ದೆವು. ಆದರೆ, ಹೊರ ಬಂದು ನೋಡಿದಾಗ ದಟ್ಟ ಹೊಗೆ ಆವರಿಸಿರುವುದು ಹಾಗೂ ದುರ್ವಾಸನೆ ಬರುತ್ತಿರುವುದು ತಿಳಿಯಿತು ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.
ರಾಸಾಯನಿಕ ವಾಸನೆ ಕೂಡ ಬರುತ್ತಿತ್ತು ಎಂದು ಮತ್ತೊಬ್ಬ ನಿವಾಸಿ ರಾಕೇಶ್ ಗುಪ್ತಾ ಅವರು ಹೇಳಿದ್ದಾರೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now