Dharwad News:
ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ವಹಿಸುವಂತೆ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು, ಧಾರವಾಡ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು.
ಈ ಅರ್ಜಿ ವಿಚಾರಣೆ ಮಾಡಿದ್ದ ಹೈಕೋರ್ಟ್ ತೀರ್ಪು ಅನ್ನು ಇಂದಿಗೆ ಕಾಯ್ದಿರಿಸಿತ್ತು. ಅದರಂತೆ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸುವುದು ಬೇಕಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ.ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ನಿಂದ ಬಿಗ್ ರಿಲೀಫ್ ಸಿಕ್ಕಿದ್ದು ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ನಿರಾಕರಣೆ ಮಾಡಲಾಗಿದೆ.ದೂರುದಾರ ಮೊದಲು ರಾಜ್ಯಪಾಲರ ಅನುಮತಿ ಕೇಳಿದರು. ಆ ಮೇಲೆ ಲೋಕಾಯುಕ್ತ ತನಿಖೆ ಕೋರಿದರು. ಈ ಎರಡನ್ನು ಕೊಟ್ಟಿದ್ದರು.
ಆದರೆ ಈಗ ತನಿಖೆ ಪೂರ್ಣಗೊಳ್ಳುವ ಮೊದಲೇ ಸಿಬಿಐಗೆ ತನಿಖೆ ವಹಿಸಿ ಎಂದು ಕೇಳುತ್ತಿದ್ದಾರೆ. ಇಲ್ಲಿ ಗಮನಿಸುವುದು ಏನೆಂದರೆ ಲೋಕಾಯುಕ್ತರು ಮಾಡಿದ ತನಿಖೆಯ ಲೋಪ ಏನು ಅಂತ ಹೇಳಿಲ್ಲ ಎಂದು ಕೋರ್ಟ್ಗೆ ಮನವಿ ಮಾಡಿದರು.ಸಿದ್ದರಾಮಯ್ಯ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಸಿಬಿಐ ತನಿಖೆಗೆ ಕೊಡಲು ಇದೇನು ಅಪರೂಪದ ಕೇಸ್ ಅಲ್ಲ.
ಇದರಲ್ಲಿ ಸ್ವತಂತ್ರ ನ್ಯಾಯಸಮ್ಮತ ತನಿಖೆ ಆಗಬೇಕಿದೆ ಎಂದು ಕೋರ್ಟ್ಗೆ ಮನವಿ ಮಾಡಿದರು. ಎರಡು ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಪ್ರಕರಣವನ್ನು ಸಿಬಿಐಗೆ ವಹಿಸಲು ನಿರಾಕರಣೆ ಮಾಡಿದೆ. ಇದರಿಂದ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ.
ಸ್ನೇಹಮಯಿ ಕೃಷ್ಣಗೆ ಹಿನ್ನಡೆ ಆಗಿದೆ.ಇನ್ನು ದೂರದಾರ ಸ್ನೇಹಮಯಿ ಪರ ವಕೀಲ ಮಣಿಂದರ್ ಸಿಂಗ್ ಅವರು ವಾದ ಮಂಡನೆ ಮಾಡಿದರು. ಸಿಎಂ ಸಿದ್ದರಾಮಯ್ಯ ಅವರ ರಕ್ಷಣೆಗೆ ಸಚಿವ ಸಂಪುಟ ಒಟ್ಟಾಗಿದೆ. ಸ್ಥಳೀಯ ಅಧಿಕಾರಿಗಳು ಸ್ವತಂತ್ರ ತನಿಖೆ ಸಾಧ್ಯವಾಗುವುದಿಲ್ಲ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕು ಎಂದರೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು.
ಇದನ್ನು ಓದಿರಿ :What happened in Belgaum?:ಜಸ್ಟ್ ನಾಲ್ಕು ದಿನದಲ್ಲಿ 40 ಅಧಿಕಾರಿಗಳ ವರ್ಗಾವಣೆ..!