spot_img

BUDGET SESSION : ರಾಷ್ಟ್ರಪತಿಗಳ ಭಾಷಣದೊಂದಿಗೆ ಇಂದಿನಿಂದ ಬಜೆಟ್ ಅಧಿವೇಶನ

spot_img
spot_img

Share post:

New Delhi News:

ಇಂದಿನಿಂದ ಕೇಂದ್ರದ BUDGET SESSION ಆರಂಭವಾಗಲಿದೆ. ಮೊದಲ ದಿನ ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ಮಾತನಾಡಲಿದ್ದಾರೆ. ರಾಷ್ಟ್ರಪತಿಗಳ ಭಾಷಣದ ಬಳಿಕ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು​ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ.

ನಾಳೆ ಸಚಿವೆ (ಫೆ.1) 8ನೇ ಬಾರಿ BUDGET SESSION​ ಮಂಡಿಸಲಿದ್ದಾರೆ. ಸೋಮವಾರದಿಂದ ಸಂಸತ್​​ನ ಎರಡೂ ಸದನಗಳಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲೆ ಚರ್ಚೆ ಆರಂಭವಾಗಲಿದೆ. 2025-26ನೇ ಸಾಲಿನ ಸಂಸತ್ BUDGET SESSION ಇಂದಿನಿಂದ ಆರಂಭವಾಗಲಿದೆ.

ಮೊದಲ ದಿನ ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ.ಬಜೆಟ್​ ಅಧಿವೇಶನದ ಮೊದಲ ಭಾಗ 9 ದಿನಗಳ ಕಾಲ ಅಂದರೆ ಜನವರಿ 31ರಿಂದ ಫೆಬ್ರವರಿ 13ರವರೆಗೆ ನಡೆಯಲಿದೆ. ಇದಾದ ಬಳಿಕ ಮತ್ತೆ ಫೆಬ್ರವರಿ 13ರಿಂದ ಸದನ ಆರಂಭವಾಗಲಿದ್ದು ಮಾರ್ಚ್​ 10ಕ್ಕೆ ಬಜೆಟ್​ ಪ್ರಕ್ರಿಯೆ ಮುಕ್ತಾಯವಾಗಲಿದೆ. ಏಪ್ರಿಲ್​ 4ರಂದು BUDGET SESSION ಮುಕ್ತಾಯವಾಗುತ್ತದೆ. ಒಟ್ಟಾರೆ 27 ದಿನಗಳ ಬಜೆಟ್​ ಅಧಿವೇಶನ ಇದಾಗಿದೆ.

ಜ.30ರಂದು ಅಧಿವೇಶನದ ಹಿನ್ನೆಲೆಯಲ್ಲಿ ಸರ್ವಪಕ್ಷಗಳ ಸಭೆ ನಡೆಸಲಾಯಿತು. ಈ ವೇಳೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್​ ರಿಜಿಜು​ ಅವರು, ಬಜೆಟ್​ ಅಧಿವೇಶನ ಸರಾಗವಾಗಿ ನಡೆಯಲು ಪ್ರತಿಪಕ್ಷಗಳ ಸಹಕಾರ ಕೋರಿದ್ದರು.

ಲೋಕಸಭೆಯಲ್ಲಿ ಫೆ.3 ಮತ್ತು 4ರಂದು ಎರಡು ದಿನ ರಾಷ್ಟ್ರಪತಿಗಳ ಭಾಷಣದ ಮೇಲೆ ವಂದನಾ ನಿರ್ಣಯದ ಚರ್ಚೆಗೆ ಅವಕಾಶ ನೀಡಲಾಗಿದೆ. ರಾಜ್ಯಸಭೆಯಲ್ಲಿ ಮೂರು ದಿನ ಚರ್ಚೆಗೆ ಅವಕಾಶವಿದೆ. ಫೆ.6ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಚರ್ಚೆಗೆ ಉತ್ತರಿಸುವರು.

Challenges before the Finance Minister:

ಕುಸಿಯುತ್ತಿರುವ ಆರ್ಥಿಕ ವೃದ್ಧಿ ದರ, ಅಮೆರಿಕದ ಡಾಲರ್​ ಎದುರು ರೂಪಾಯಿ ಕುಸಿತ ಸೇರಿದಂತೆ ಹಲವು ಸವಾಲುಗಳನ್ನು ಕೇಂದ್ರ ವಿತ್ತ ಸಚಿವರು ಬಜೆಟ್​ನಲ್ಲಿ ಎದುರಿಸಬೇಕಿದೆ.

ಇದನ್ನು ಓದಿರಿ : HARDIK PANDYA : ಇನ್ನು 4 ರನ್ ಗಳಿಸಿದರೆ ವಿರಾಟ್ ಕೊಹ್ಲಿಯ ದೊಡ್ಡ ದಾಖಲೆ ಮುರಿಯಲಿರುವ ಹಾರ್ದಿಕ್ ಪಾಂಡ್ಯ!

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...