New Delhi News:
2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಫೆ.1ರಂದು ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. BUDGET SESSION OF PARLIAMENTದ ಮೊದಲ ದಿನ ಜನವರಿ 31ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸಂಸತ್ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣೆ ಮಾಡಲಿದ್ದು, ಆರ್ಥಿಕ ಸಮೀಕ್ಷೆ ಮಂಡನೆ ಕೂಡ ಆಗಲಿದೆ.
ಸಂಸದೀಯ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಲಿದ್ದು, ಏಪ್ರಿಲ್ 4ರವರೆಗೆ ನಡೆಯಲಿದೆ. ಫೆ. 1ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದು, ಇದು ಅವರ ಏಂಟನೇ ಬಜೆಟ್ ಮಂಡನೆಯಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದೀಯ ಸಚಿವ ಕಿರಣ್ ರಿಜುಜ್, ಗೌರವಾನ್ವಿತ ರಾಷ್ಟ್ರಪತಿಗಳು 2025ರ ಜನವರಿ 31ರಂದು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಫೆ 1ರಂದು ಲೋಕಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ. ಬಜೆಟ್ ಅಧಿವೇಶನದ ಮೊದಲ ಭಾಗ ಜನವರಿ 31ರಿಂದ ಫೆಬ್ರವರಿ 13ರವರೆಗೆ 9ದಿನಗಳ ಕಾಲ ನಡೆಯಲಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾರ್ಪಣೆ ಸಲ್ಲಿಸಲಿದ್ದು, ಸೀತಾರಾಮನ್ ಅವರು ಬಜೆಟ್ ಚರ್ಚೆಗೆ ಉತ್ತರಿಸಲಿದ್ದಾರೆ.
ಇದನ್ನು ಓದಿರಿ : BESAN FLOUR BENEFITS FOR FACE : ಕಡಲೆಬೇಳೆ ಹಿಟ್ಟಿನಿಂದ ಎಷ್ಟು ಪ್ರಯೋಜನಗಳಿವೆ ಗೊತ್ತಾ?