spot_img
spot_img

BUFFALO BREEDING CENTER : ಧಾರವಾಡದಲ್ಲಿದೆ ರಾಜ್ಯದ ಏಕೈಕ ಎಮ್ಮೆ ತಳಿ ಸಂವರ್ಧನಾ ಕೇಂದ್ರ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Dharwad News:

BUFFALO BREEDING CENTER ವನ್ನು ಧಾರವಾಡ ತಾಲೂಕಿ‌ನ ತೇಗೂರು ಗ್ರಾಮದಲ್ಲಿ ಸ್ಥಾಪಿಸಲಾಗಿದೆ. 1910ರಲ್ಲಿ ಜಾನುವಾರು ಕ್ಷೇತ್ರವೆಂದು ಶುರುವಾದ ಈ ಕೇಂದ್ರವು 1976ರಲ್ಲಿ ಎಮ್ಮೆ ತಳಿ ಸಂವರ್ಧನಾ ಕೇಂದ್ರವಾಗಿ ಮೇಲ್ದರ್ಜೆಗೇರಿತು. ಧಾರವಾಡ ತಾಲೂಕಿ‌ನ ತೇಗೂರು ಗ್ರಾಮದಲ್ಲಿ ಎಮ್ಮೆ ತಳಿ ಸಂವರ್ಧನಾ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಇದು ರಾಜ್ಯದಲ್ಲಿರುವ ಏಕೈಕ BUFFALO BREEDING CENTER ವಾಗಿದೆ.

ಈ ಕುರಿತ ವರದಿ. ರಾಜ್ಯದ ವಿವಿಧ ಭಾಗಗಳಲ್ಲಿ ಬರಗಾಲ, ಅತಿವೃಷ್ಟಿ ತೊಂದರೆಗಳು ಕಾಣಿಸಿಕೊಳ್ಳುತ್ತಿವೆ. ಇಂತಹ ಸಂದರ್ಭಗಳಲ್ಲಿ ಕೇವಲ ಕೃಷಿಗೆ ಮಾತ್ರ ಅವಲಂಬಿತರಾಗದೆ ಇತರ ಕೃಷಿ ಉಪಕಸುಬುಗಳಾದ ಎಮ್ಮೆ ಸಾಕಾಣಿಕೆ, ಹಂದಿ ಸಾಕಾಣಿಕೆ ಮುಂತಾದ ಕ್ರಮಗಳನ್ನು ಕೈಗೊಳ್ಳುವುದರಿಂದ ಇದು ರೈತರಿಗೆ ಆರ್ಥಿಕವಾಗಿ ಸಹಾಯಕವಾಗಲಿದೆ. ದಕ್ಷಿಣ ಕರ್ನಾಟಕ ಭಾಗಕ್ಕಿಂತ ಉತ್ತರ ಕರ್ನಾಟಕ ಭಾಗದಲ್ಲಿ ಹಾಲು ಉತ್ಪಾದನೆಗೆ ಹೆಚ್ಚು ಅವಕಾಶವಿದೆ.

Buffalo Breeding Center Details:

BUFFALO BREEDING CENTER ದ ಜಾನುವಾರುಗಳ ಆಹಾರಕ್ಕೆ ಅನುಕೂಲವಾಗುವಂತೆ ನೀರಾವರಿ ಆಶ್ರಯದ 53 ಎಕರೆ ಪ್ರದೇಶದಲ್ಲಿ ಮತ್ತು ಮಳೆಯಾಶ್ರಿತ 51 ಎಕರೆ ಪ್ರದೇಶದಲ್ಲಿ ಮೇವು ಬೆಳೆಯಲಾಗುತ್ತದೆ. ಜಾನುವಾರುಗಳನ್ನು ಮೇಯಿಸಲು 126.09 ಎಕರೆಯ ವಿಸ್ತೀರ್ಣದ ಪ್ರದೇಶವನ್ನು ಕಾಯ್ದಿರಿಸಲಾಗಿದೆ. 41 ಎಕರೆ ವಿಸ್ತೀರ್ಣದಲ್ಲಿ ಕೆರೆ, ಬಾವಿ, ಟ್ರೆಂಚ್‍ಗಳನ್ನು ಕೂಡ ನಿರ್ಮಿಸಲಾಗಿದೆ.

Basic Mission of the Centre:

ರಾಜ್ಯ ಜಾನುವಾರು ತಳಿ ಸಂವರ್ಧನಾ ಕೇಂದ್ರದ ಮುಖ್ಯ ಉದ್ದೇಶವೆಂದರೆ ರಾಜ್ಯದ ಘನೀಕೃತ ವೀರ್ಯ ಸಂಸ್ಕರಣಾ ಕೇಂದ್ರಗಳಿಗೆ ಉತ್ಕೃಷ್ಟ ಹಾಲಿನ ಇಳುವರಿ ಹೊಂದಿದ ಎಮ್ಮೆಗಳಿಗೆ ಜನಿಸಿದ ಗಂಡು ಎಮ್ಮೆ ಕರು ಅಥವಾ ಕೋಣ ಕರುಗಳನ್ನು ನೀಡುವುದು.

ಹೈನೋದ್ಯಮದಲ್ಲಿ ಆಸಕ್ತರಿಗೆ ಅಧಿಕ ಇಳುವರಿ ನೀಡುವ ಮೇವಿನ ಬೀಜ, ಬೇರು ಮತ್ತು ಕಾಂಡಗಳನ್ನು ಇಲಾಖೆ ನಿಗದಿಪಡಿಸಿದ ದರದಲ್ಲಿ ವಿತರಿಸಲಾಗುತ್ತದೆ ಮತ್ತು ಹೆಚ್ಚುವರಿಯಾಗಿ ಉಳಿದ ಹಸಿರು ಮೇವನ್ನು ರಸಮೇವನ್ನಾಗಿ ಪರಿವರ್ತಿಸಿ ಬೇಸಿಗೆ ಹಾಗೂ ಮೇವು ಅಭಾವದ ಸಂದರ್ಭಗಳಲ್ಲಿ ಜಾನುವಾರುಗಳಿಗೆ ನೀಡಲಾಗುತ್ತದೆ. ಕ್ಷೇತ್ರದಲ್ಲಿ ಎರೆಹುಳು ಗೊಬ್ಬರ ತಯಾರಿಸುವ ಘಟಕವಿದ್ದು, ಪ್ರಾತ್ಯಕ್ಷಿಕೆಯೊಂದಿಗೆ ಆಸಕ್ತರಿಗೆ ವಿವರಿಸಲಾಗುತ್ತದೆ.

ನಂತರ ಈ ಕೋಣಗಳಿಂದ ವೀರ್ಯವನ್ನು ಸಂಗ್ರಹಿಸಿ ಸಂಸ್ಕರಿಸಿದ ವೀರ್ಯ ಕಣಗಳನ್ನು ರಾಜ್ಯದ ಎಲ್ಲಾ ಪಶುವೈದ್ಯಕೀಯ ಸಂಸ್ಥೆಗಳಿಗೆ, ಕೃತಕ ಗರ್ಭಧಾರಣೆ ಮಾಡಿಸಲು ಉಪಯೋಗಿಸಲಾಗುತ್ತಿದೆ. ಆದರಿಂದ ಇದು ರಾಜ್ಯದ ಏಕೈಕ ಮಾತೃ ಕೋಣ ಉತ್ಪಾದನಾ ಸಂಸ್ಥೆಯಾಗಿದೆ. ಹೆಚ್ಚಿನ ಇಳುವರಿ ಬರುವ ಸೂಪರ್ ಹೈಬ್ರಿಡ್ ನೇಪಿಯರ್, ಗಿನಿಹುಲ್ಲು, ಗ್ರೇಝಿಂಗ್‍ಗಿನಿ, ಮೆಕ್ಕೆಜೋಳ, ಅಲಸಂದೆ, ಸುಬಾಬುಲ್ಸ್ ಮುಂತಾದ ಮೇವಿನ ಬೆಳೆಗಳನ್ನು ಬೆಳೆದು ನಿಯಮಿತವಾಗಿ ಜಾನುವಾರುಗಳಿಗೆ ನೀಡಲಾಗುತ್ತದೆ.

2019-20ನೇ ಸಾಲಿನಲ್ಲಿ ಅಳುವಿನಂಚಿನಲ್ಲಿರುವ ದೇಶಿ ಆಕಳು ತಳಿಯಾದ ಕೃಷ್ಣವ್ಯಾಲಿ ಜಾನುವಾರುಗಳನ್ನು ಜಾನುವಾರು ಸಂವರ್ಧನಾ ಕೇಂದ್ರ ಮುನಿರಾಬಾದ್​​ನಿಂದ ತೇಗೂರು ಕ್ಷೇತ್ರಕ್ಕೆ ವರ್ಗಾಯಿಸಿ ತಳಿ ಸಂರಕ್ಷಣಾ ಯೋಜನೆಯನ್ನು ಮುಂದುವರಿಸಲಾಗುತ್ತಿದೆ. ಆಸಕ್ತ ಹಂದಿ ಸಾಕಣಿಕೆದಾರರಿಗೆ ಇಲ್ಲಿ ಬೆಳೆಸಿದ 3 ರಿಂದ 4 ತಿಂಗಳ ಶುದ್ಧ ಹಾಗೂ ಮಿಶ್ರತಳಿ ಹಂದಿ ಮರಿಗಳನ್ನು ರೋಗ ಮುಂಜಾಗ್ರತಾ ಲಸಿಕೆ ಹಾಗೂ ಜಂತುನಾಷಕ ಔಷಧಿಗಳನ್ನು ನೀಡಿದ ನಂತರ ಸಾಕಣೆಗೆ ಇಲಾಖೆ ನಿಗದಿಪಡಿಸಿದ ದರಗಳಲ್ಲಿ ವಿತರಿಸಲಾಗುತ್ತದೆ.

2022-23ನೇ ಸಾಲಿನಲ್ಲಿ ಉತ್ತರ ಕರ್ನಾಟಕದಲ್ಲಿ ಮೊದಲ ಬಾರಿಗೆ ಸರ್ಕಾರಿ ಸ್ವಾಮ್ಯದ ಹಂದಿ ಉತ್ಪಾದನಾ ಘಟಕವನ್ನು ತೇಗೂರಿನಲ್ಲಿ ಪ್ರಾರಂಭಿಸಲಾಗಿದೆ. ಇಲ್ಲಿ ಪ್ರಮುಖ ಮಾಂಸ ಹಾಗೂ ಮರಿ ಉತ್ಪಾದನೆಯಲ್ಲಿ ಉತ್ಕೃಷ್ಟವಾದ ವಿದೇಶಿ ಹಂದಿ ತಳಿಗಳಾದ ಯಾರ್ಕಶೈರ್, ಡ್ಯೂರಾಕ್ ಮತ್ತು ಲ್ಯಾಂಡ್ ರೇಸ್​ ಹಂದಿಗಳನ್ನು ಸಾಕಣೆ ಮಾಡಲಾಗುತ್ತದೆ.

ಕಿತ್ತೂರು ಕರ್ನಾಟಕ ಭಾಗದಲ್ಲಿ ಹಂದಿ ಸಾಕಾಣಿಕೆಗೆ ನಿರುದ್ಯೋಗ ಯುವಕ ಮತ್ತು ಯುವತಿಯರು ಹೆಚ್ಚಿನ ಆಸಕ್ತಿಯನ್ನು ತೋರಿಸುತ್ತಿದ್ದು, ಆನೇಕ ಹಂದಿ ಫಾರ್ಮ್​ಗಳು ಪ್ರಾರಂಭವಾಗಿವೆ. ಹಂದಿಮರಿಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಬೇಡಿಕೆಯನ್ನು ಪೂರೈಸಲು ನಮ್ಮ ಹಂದಿ ಉತ್ಪಾದನಾ ಘಟಕದಲ್ಲಿ ಮಾತೃ ಹಂದಿಗಳ ಸಾಮರ್ಥ್ಯ ಹೆಚ್ಚಿಸಿ ಹಂದಿಮರಿಗಳನ್ನು ಉತ್ಪಾದಿಸಿ ಆಸಕ್ತರಿಗೆ ನೀಡಿದಲ್ಲಿ ನಿರುದ್ಯೋಗಿ ಯುವಕರಿಗೆ ಪ್ರೋತ್ಸಾಹ ನೀಡಿ ಅವರ ಆರ್ಥಿಕ ಸಾಮರ್ಥ್ಯ ಹೆಚ್ಚಿಸಬಹುದು.

ಆದ್ದರಿಂದ ಮಾತೃ ಹಂದಿಗಳ ಪಾಲನೆಗಾಗಿ ಎರಡು ಹೆಚ್ಚುವರಿ ಹಂದಿ ಶೆಡ್​ಗಳನ್ನು ಅನುದಾನದ ಲಭ್ಯತೆಯ ಅನುಗುಣವಾಗಿ ನಿರ್ಮಿಸಲಾಗುತ್ತದೆ. ಈ ಕುರಿತು ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, “1910ರಲ್ಲಿ ಇದು ಒಂದು ಫಾರ್ಮ್ ಆಗಿ ಸ್ಥಾಪನೆಯಾಗಿತ್ತು. 1976ರಲ್ಲಿ ಎಮ್ಮೆ ತಳಿ ಸಂವರ್ಧನಾ ಕೇಂದ್ರವಾಗಿ ಮೇಲ್ದರ್ಜೆಗೇರಿತು. ಇಲ್ಲಿ ಹಲವಾರು ಬ್ರೀಡಿಂಗ್​ ಅನ್ನು ಯಶಸ್ವಿಯಾಗಿ ಮಾಡಿಕೊಂಡು ಬಂದಿದ್ದಾರೆ. ಇದರ ಜೊತೆಗೆ ತಳಿ ಸಂರಕ್ಷಣೆ ಬ್ರೀಡಿಂಗ್ ಅನ್ನು ಮಾಡಲಾಗುತ್ತಿದೆ. ಕೃಷ್ಣವ್ಯಾಲಿ ಎಂಬ ಸ್ಥಳೀಯ ತಳಿಯನ್ನು ಇಲ್ಲಿ ಸಂರಕ್ಷಣೆ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಮುಖ್ಯ ಪಶುವೈದ್ಯಾಧಿಕಾರಿ ಅನಿಲಕುಮಾರ ಶೀಲವಂತಮಠ ಮಾತನಾಡಿ, “ನಾವು ಇಲ್ಲಿ ಮುರ್ರಾ ಮತ್ತು ಸೂರ್ತಿ ತಳಿಗಳ ಎಮ್ಮೆಗಳನ್ನು ಸಾಕಾಣಿಕೆ ಮಾಡುತ್ತಿದ್ದೇವೆ. ಮುರ್ರಾ ಮತ್ತು ಸೂರ್ತಿ ತಳಿಯ ಕೋಣಗಳನ್ನು ವೀರ್ಯ ಸಂಸ್ಕರಣಾ ಕೇಂದ್ರಕ್ಕೆ ಕಳುಹಿಸುತ್ತಿದ್ದೇವೆ. 2019 ರಲ್ಲಿ ಕೃಷ್ಣವ್ಯಾಲಿ ಜಾನುವಾರುಗಳನ್ನು ಇಲ್ಲಿಗೆ ತರಲಾಗಿದೆ. ಇವು ಅಳಿವಿನ ಅಂಚಿನಲ್ಲಿರುವ ಜಾನುವಾರುಗಳಾಗಿವೆ” ಎಂದು ಮಾಹಿತಿ ನೀಡಿದರು.

ಇನ್ನು ಓದಿರಿ : TAX COLLECTION IN KARNATAKA : ರಾಜ್ಯದಲ್ಲಿ ಬಜೆಟ್ ಗುರಿ ಮುಟ್ಟದ ತೆರಿಗೆ ಸಂಗ್ರಹ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

CHIKALLUR FAIR : ಪ್ರಾಣಿ ಬಲಿ, ಟ್ಯಾಟೂ ಹಾಕುವುದಕ್ಕೆ ನಿಷೇಧ

Chamarajanagar News: ಐದು ದಿನಗಳ ಕಾಲ ನಡೆಯುವ ಈ ಜಾತ್ರೆಯಲ್ಲಿ ಚಂದ್ರಮಂಡಲೋತ್ಸವದಿಂದ ಆರಂಭಗೊಂಡು ಮುತ್ತತ್ತಿರಾಯನ ಸೇವೆಯಲ್ಲಿ ಸಂಪನ್ನವಾಗಲಿದೆ. ಜಾತ್ರೆಯ 4ನೇ ದಿನದಂದು ಪಂಕ್ತಿಸೇವೆ ಎಂಬ ವಿಶಿಷ್ಟ...

SILVER MEDAL IN YOGASANA : ಬೆಳ್ಳಿ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ ತಂದ ಶ್ರೀಧರ್ ಹೊಸಮನಿ

Hubli News: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ನೌಕರರಾಗಿರುವ ಡಾ.ಶ್ರೀಧರ್ ಹೊಸಮನಿ ಅವರು ಭಾರತವನ್ನು ಪ್ರತಿನಿಧಿಸಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಇವರ ಯೋಗ ಸಾಧನೆ ಕುರಿತ...

TAX COLLECTION IN KARNATAKA : ರಾಜ್ಯದಲ್ಲಿ ಬಜೆಟ್ ಗುರಿ ಮುಟ್ಟದ ತೆರಿಗೆ ಸಂಗ್ರಹ

Bangalore News: ಪ್ರಸಕ್ತ ಬಜೆಟ್ ವರ್ಷದ ಅಂತಿಮ ತ್ರೈಮಾಸಿಕದಲ್ಲಿರುವ ಕಾಂಗ್ರೆಸ್ ಸರ್ಕಾರ ಇದೀಗ ಮುಂದಿನ ಆರ್ಥಿಕ ವರ್ಷದ ಬಜೆಟ್ ಸಿದ್ಧತೆ ಆರಂಭಿಸಿದೆ. ಬಜೆಟ್ ವರ್ಷದ 9...

HOLLYWOOD WILDFIRES :ಲಾಸ್ ಏಂಜಲೀಸ್ನಲ್ಲಿ ಭೀಕರ ಕಾಡ್ಗಿಚ್ಚು;

Los Angeles (USA) News: ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಲಾಸ್​ ಏಂಜಲೀಸ್ ನಗರದಲ್ಲಿ ಕಾಡ್ಗಿಚ್ಚಿನ ರುದ್ರ ನರ್ತನವಾಗುತ್ತಿದೆ. ಹಾಲಿವುಡ್‌ ಹಿಲ್ಸ್‌ನಲ್ಲಿ ಅನೇಕ ​ ಸೆಲೆಬ್ರಿಟಿಗಳ ಮನೆಗಳು...