WhatsApp Group
Join Now
Telegram Group
Join Now
Instagram Account
Follow Now
Facebook Page
Follow Now
Mathura (Uttar Pradesh) News:
ಉತ್ತರಪ್ರದೇಶದ ಮಥುರಾದಲ್ಲಿ ತೆಲಂಗಾಣದ 50ಕ್ಕೂ ಹೆಚ್ಚು ಜನರಿದ್ದ BUSವೊಂದು ಬೆಂಕಿಗಾಹುತಿಯಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.ತೆಲಂಗಾಣದ ಜನರಿಂದ ತುಂಬಿದ್ದ ಬಸ್ವೊಂದು ಮಥುರಾದಲ್ಲಿ ಹೊತ್ತಿ ಉರಿದಿದೆ. ಸುದ್ದಿ ತಿಳಿದ ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು.
Bus fire: ಈ ವೇಳೆ ಇದ್ದಕ್ಕಿದ್ದಂತೆ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಲೇ ಬೆಂಕಿ ಆವರಿಸಿ, BUS ಸಂಪೂರ್ಣ ಸುಟ್ಟು ಹೋಯಿತು. ಬೆಂಕಿ ಹೊತ್ತುಕೊಳ್ಳುತ್ತಿದ್ದಂತೆ BUSನಲ್ಲಿದ್ದ ಪ್ರಯಾಣಿಕರು ಕಿಟಕಿ ಗಾಜುಗಳನ್ನು ಒಡೆದು ಹೊರಬಂದು ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ.
ಆದ್ರೆ ಬಸ್ಸಿನಲ್ಲಿದ್ದ ವೃದ್ಧ ಪ್ರಯಾಣಿಕರೊಬ್ಬರು ಹೊರಬರಲು ಸಾಧ್ಯವಾಗದೇ ಒಳಗಡೆ ಸಿಲುಕಿಕೊಂಡು ಸಾವನ್ನಪ್ಪಿದ್ದಾರೆ.ತೆಲಂಗಾಣದ 50 ಜನರಿದ್ದ ಖಾಸಗಿ BUSವೊಂದು ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಆಗಮಿಸಿದ್ದರು.
ಮಂಗಳವಾರ ಪ್ರಯಾಗರಾಜ್‌ನಲ್ಲಿ ಮಹಾಕುಂಭ ಸ್ನಾನ ಮಾಡಿದ ನಂತರ ತೆಲಂಗಾಣದ 50 ಪ್ರಯಾಣಿಕರ ಗುಂಪು ಖಾಸಗಿ BUS ಹತ್ತಿ ಹೆದ್ದಾರಿಯಲ್ಲಿರುವ ಪ್ರವಾಸಿ ಸೌಲಭ್ಯ ಕೇಂದ್ರಕ್ಕೆ ತೆರಳುತ್ತಿದ್ದರು.ಬೆಂಕಿ ಅವಘಡದ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸ್ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಆದರೆ ಅಷ್ಟೊತ್ತಿಗಾಗಲೇ BUS ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು.
BUSನಲ್ಲಿ ಮೃತ ಪ್ರಯಾಣಿಕನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.ಸ್ಥಳಕ್ಕೆ ತಲುಪಿದ ಎಸ್‌ಎಸ್‌ಪಿ ಶೈಲೇಶ್ ಕುಮಾರ್ ಪಾಂಡೆ ಮಾತನಾಡಿ, ತೆಲಂಗಾಣದಿಂದ ಬಂದ ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಮಾಡಲಾಗಿದ್ದು, ಎಲ್ಲಾ ಪ್ರಯಾಣಿಕರನ್ನು ಅವರ ಸ್ವಗ್ರಾಮಕ್ಕೆ ಕಳುಹಿಸಲಾಗುತ್ತಿದೆ.
ಅಲ್ಲದೆ ಎಲ್ಲಾ ಪ್ರಯಾಣಿಕರಿಗೆ ಆಹಾರ ವ್ಯವಸ್ಥೆಯನ್ನು ಸಹ ಮಾಡಲಾಗಿದೆ ಎಂದು ಹೇಳಿದರು.ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರು ಸಿಗರೇಟ್ ಸೇದಿದ್ದರಿಂದ ಹಠಾತ್ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.
ಇದನ್ನು ಇದಿರಿ : HOMEOWNERS NOTE TO THIEVES : ಸಂಕ್ರಾಂತಿಗೆ ಊರಿಗೆ ಹೋಗುವಾಗ ಜಾಣತನ ಮೆರೆದ ಮನೆ ಮಾಲೀಕ