spot_img
spot_img

ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅವರು ಅಕ್ರಮವಾಗಿ ಡಿನೋಟಿಫಿಕೇಷನ್ ಪ್ರಕರಣ.!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಅಕ್ರಮ ಭೂ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶನಿವಾರ ಲೋಕಾಯುಕ್ತರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತದ ಪೊಲೀಸ್ ವಿಭಾಗವು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿತ್ತು. ಅದರಂತೆ ಮಾಜಿ ಸಿಎಂ ಇಂದು ತನಿಖಾಧಿಕಾರಿಯ ಮುಂದೆ ಹಾಜರಾಗಿದ್ದರು.

ಇದನ್ನೂ ಓದಿ : ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ : BJP ಶಾಸಕ.!

ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಅಕ್ರಮ ಡಿನೋಟಿಫಿಕೇಶನ್ ಆರೋಪಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧದ ತನಿಖೆಯನ್ನು ತ್ವರಿತಗೊಳಿಸುವಂತೆ ಲೋಕಾಯುಕ್ತರನ್ನು ಕೋರಿದ ಎರಡು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

ಗುರುವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ್ದ ಸಚಿವರಾದ ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್ ಹಾಗೂ ಸಂತೋಷ್ ಲಾಡ್ ಅವರು ಬೆಂಗಳೂರು ಉತ್ತರ ಕಸಬಾ ಹೋಬಳಿಯ ಗಂಗೇನಹಳ್ಳಿಯಲ್ಲಿ 1.11 ಎಕರೆ ಜಮೀನು ಡಿನೋಟಿಫಿಕೇಷನ್ ಮಾಡಿರುವ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ : ವಂಚನೆ ಮಾಡಿದ ಬ್ಯಾಂಕ್‌ ಸಿಬ್ಬಂದಿಯೂ ಸೇರಿ 14 ಜನರು ; 74 ಕೋಟಿ ರೂಪಾಯಿಗಳು.!

ಈ ಭೂಮಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) 1976 ರಲ್ಲಿ ಲೇಔಟ್ ಮಾಡಲು ಸ್ವಾಧೀನಪಡಿಸಿಕೊಂಡಿತು ಮತ್ತು ಅದರ ಸ್ವಾಧೀನ ಪ್ರಕ್ರಿಯೆಯು 1977 ರಲ್ಲಿ ಪೂರ್ಣಗೊಂಡಿತು. 2007 ಮತ್ತು 2010ರ ನಡುವೆ ಮುಖ್ಯಮಂತ್ರಿಯಾಗಿದ್ದ ಎಚ್ ಡಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅವರು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ.

ಡಿನೋಟಿಫಿಕೇಷನ್ ಬಳಿಕ 2010ರ ಜುಲೈನಲ್ಲಿ ಕುಮಾರಸ್ವಾಮಿ ಅವರ ಸೋದರಮಾವ ಚನ್ನಪ್ಪ ಅವರ ಹೆಸರಿಗೆ ಜಮೀನು ನೋಂದಣಿಯಾಗಿದೆ ಎಂದು ಸಚಿವರು ಆರೋಪಿಸಿದ್ದರು.

 

WhatsApp Group Join Now
Telegram Group Join Now
Instagram Account Follow Now
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...