ಬೆಂಗಳೂರು: ಈ ಬಾರಿ ನವೆಂಬರ್ ೧ ರಂದು ಕನ್ನಡ ರಾಜ್ಯೋತ್ಸವ ದಿನದಂದು ಧ್ವಜಾರೋಹಣ ಮತ್ತು ಸಾಂಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ರಾಜ್ಯ ಸರ್ಕಾರ ಕಡ್ಡಾಯ ಎಂದು ತಿಳಿಸಿದೆ.
ಈ ಬಗ್ಗೆ ರಾಜ್ಯ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಡಿಸಿಎಮ್ ಡಿಕೆ ಶಿವಕುಮಾರ್ ಅವರು ಸೂಚಿಸಿದ್ದಂತೆ ಕರ್ನಾಟಕ ರಾಜ್ಯ ೭೦ ವರ್ಷ ತುಂಬಿರುವ ಕಾರಣ ರಾಜ್ಯದ ಎಲ್ಲ ಶಾಲೆಗಳಲ್ಲಿ ನ್. ೧ ರಂದು ಕನ್ನಡ ರಾಜ್ಯೋತ್ಸವ ದಿನವನ್ನು ಆಚರಿಸಬೇಕು ಈ ದಿನ ಶಾಲೆಗಳಲ್ಲಿ ಧ್ವಜಾರೋಹಣ ಮಾಡುವುದು ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು ಕೂಡ ಕಡ್ಡಾಯವಾಗಿರಬೇಕು.
ಈಗಿನ ಪೀಳಿಗೆಗೆ ಕನ್ನಡ ಮಾಡಿನ ಸಂಸ್ಕೃತಿ ಕಲೆ ಇತಿಹಾಸದ ಬಗ್ಗೆ ಅರಿವು ಮೂಡಿಸಬೇಕು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ, ಕನ್ನಡಕ್ಕಾಗಿ ಹೋರಾಟ ಮಾಡಿರುವ ಹೋರಾಟಗಾರರ ಬಗ್ಗೆ ಮಾಹಿತಿ ನೀಡಬೇಕು ಎಂದು ಹೇಳಿದ್ದಾರೆ.
ನಾಡಗೀತೆ, ರಾಷ್ಟ್ರಗೀತೆ ಹಾಡಿ ತಾಯಿ ಭುವನೇಶ್ವರಿಗೆ ಪುಷ್ಪಆಚರಣೆ ಮಾಡಿಡಾ ಬಳಿಕ ಉದಯವಾಗಲಿ ಚೆಲುವ ಕನ್ನಡ ನಾಡು, ಎಲ್ಲಾದರೂ ಇರು ಎಂತಾದರು ಇರು ಇನ್ನು ಹಲವು ೫ ಕನ್ನಡ ಗೀತೆಗಳನ್ನು ಹಾಡಬೇಕು ಎಂದು ಸರ್ಕಾರ ಆದೇಶಿಸಲಾಗಿದೆ.