spot_img
spot_img

CHALLENGING PRIYANKAS ELECTION – ಕೇರಳ ಹೈಕೋರ್ಟ್ ಮೊರೆ ಹೋದ ವಯನಾಡು ಬಿಜೆಪಿ ಅಭ್ಯರ್ಥಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Kochi, Kerala News:

ಚುನಾವಣಾ ಆಯೋಗದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್​ ಕೇರಳ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಮತ್ತು ತಮ್ಮ ಕುಟುಂಬದ ಆಸ್ತಿಗಳ ಬಗ್ಗೆ ಸರಿಯಾದ ಮಾಹಿತಿ ನೀಡಿಲ್ಲ, ಹೀಗಾಗಿ ಭಾರತೀಯ ಚುನಾವಣಾ ಆಯೋಗದ ನಿಯಮಗಳ ಉಲ್ಲಂಘನೆಯಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹರಿದಾಸ್ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ವಯನಾಡು ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಿರುದ್ಧ ಸೋತ ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್ ಹೈಕೋರ್ಟ್‌ಗೆ ಶುಕ್ರವಾರ ಅರ್ಜಿ ಸಲ್ಲಿಸಿದ್ದಾರೆ. ಪ್ರಿಯಾಂಕಾ 6,22,338 ಮತಗಳನ್ನು ಪಡೆದರೆ, ಹಿರಿಯ ಸಿಪಿಐ ಮಾಜಿ ಶಾಸಕ ಸತ್ಯನ್ ಮೊಕೇರಿ 2,11,407 ಮತಗಳನ್ನು ಪಡೆದು ಎರಡನೇ ಸ್ಥಾನ ಹಾಗೂ ಹರಿದಾಸ್ ಕೇವಲ 1,09,939 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು.

ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಪ್ರಿಯಾಂಕಾ ಚುನಾವಣಾ ಗೆಲುವನ್ನು ರದ್ದುಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ವಯನಾಡು ಲೋಕಸಭಾ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು 4,10,931 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

2004 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ತನ್ನ ತಾಯಿ ಸೋನಿಯಾ ಗಾಂಧಿ ಪರವಾಗಿ ರಾಯ್​​ಬರೇಲಿ​​​​​​​​ ಮತ್ತು ಸಹೋದರ ರಾಹುಲ್​ ಪರ ಅಮೇಥಿಯಲ್ಲಿ ಪ್ರಿಯಾಂಕಾ ಗಾಂಧಿ ಮೊದಲ ಬಾರಿಗೆ ಪ್ರಚಾರ ಕಣಕ್ಕೆ ಇಳಿದಿದ್ದರು. ಇದಾದ ಸುಮಾರು 20 ವರ್ಷಗಳ ನಂತರ ವಾದ್ರಾ ನೇರವಾಗಿ ಚುನಾವಣಾ ಅಖಾಡದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಏಪ್ರಿಲ್ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಗಳಿಸಿದ 3.60 ಲಕ್ಷ ಮತಗಳ ಗೆಲುವಿನ ಅಂತರವನ್ನು ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತಮಗೊಳಿಸಿದ್ದರು. ರಾಹುಲ್​ ಗಾಂಧಿ ರಾಯಬರೇಲಿ ಕ್ಷೇತ್ರ ಉಳಿಸಿಕೊಂಡಿದ್ದರಿಂದ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದರು. ಹೀಗಾಗಿ ಇಲ್ಲಿ ಉಪಚುನಾವಣೆ ನಡೆದಿತ್ತು. ಚುನಾಯಿತ ಪ್ರತಿನಿಧಿಯಾಗಿ ಅವರ ಚೊಚ್ಚಲ ಸಂಸತ್​​ ಪ್ರವೇಶವು ಕೇರಳದಲ್ಲಿ ಕಾಂಗ್ರೆಸ್‌ನ ಅಸ್ತಿತ್ವ ಗಟ್ಟಿಗೊಳಿಸುವಲ್ಲಿ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಪಕ್ಷದ ಅದೃಷ್ಟವನ್ನು ಪುನರುಜ್ಜೀವನಗೊಳಿಸುವಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SHAH JAHAN URUS: ಪ್ರವಾಸಿಗರಿಗೆ ಉಚಿತ ಪ್ರವೇಶ, ಬಿಗಿ ಭದ್ರತೆ.

Agra (Uttar Pradesh) News : ಉಚಿತ ಅಷ್ಟೇ ಅಲ್ಲ, ಪ್ರವಾಸಿಗರು ಚಕ್ರವರ್ತಿ ಷಹಜಹಾನ್ ಮತ್ತು ಬೇಗಂ ಮುಮ್ತಾಜ್ ಅವರ ನಿಜವಾದ ಸಮಾಧಿಗಳನ್ನು ವೀಕ್ಷಿಸಬಹುದಾಗಿದೆ.ಜನವರಿ 26,...

UN AID TO GAZA : ಪರಿಹಾರ ಸಾಮಗ್ರಿ ಹೊತ್ತ 1,000 ಟ್ರಕ್ ಗಾಜಾ ಪ್ರವೇಶ

United Nations News: ಕದನ ವಿರಾಮ ಜಾರಿಯಾಗಿದ್ದರಿಂದ ವಿಶ್ವಸಂಸ್ಥೆಯ ಕಾರ್ಯಕರ್ತರು GAZAದೊಳಕ್ಕೆ ಪರಿಹಾರ ಸಾಮಗ್ರಿ ತಲುಪಿಸುವ ಕಾರ್ಯಗಳನ್ನು ಪುನಾರಂಭಿಸಿದ್ದಾರೆ.ಇದಲ್ಲದೆ ಮನೆ ಮಠ ಕಳೆದುಕೊಂಡ ನಿರಾಶ್ರಿತರಾಗಿರುವ GAZA...

HIGH COURT : ಅವಾಚ್ಯ ಪದ ಬಳಕೆ ಆರೋಪ

Bangalore News: ಅವಾಚ್ಯ ಪದ ಬಳಕೆ ಮಾಡಿರುವ ಆರೋಪ ಪ್ರಕರಣದಲ್ಲಿ ವಿಧಾನಪರಿಷತ್​ ಸದಸ್ಯ ಸಿ.ಟಿ.ರವಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ HIGH COURT ಮಧ್ಯಂತರ ಆದೇಶ...

FARMER SUCCESS STORY : ದೇಶಿ ಬೀಜಗಳ ಸಂರಕ್ಷಣೆಗೆ ಪಣ, 18 ತಳಿಗಳ ಜೋಳ ಬೆಳೆದ ರೈತ

Belgaum News: ಸಗಣಿ, ಎರೆ ಹುಳು - ಹಸಿರು ಎಲೆಯಂತಹ ಸಾವಯವ ಗೊಬ್ಬರ ಬಳಸಿ ದೇಶಿ ತಳಿಯ 18 ಬಗೆಯ ಜೋಳ ಬೆಳೆದ ರೈತನ ಬಗ್ಗೆ...