spot_img
spot_img

CHAMPIONS TROPHY 2025 : ಚಾಂಪಿಯನ್ಸ್ ಟ್ರೋಫಿಗಾಗಿ ಲಾಹೋರ್ನ ಗಡಾಫಿ ಸ್ಟೇಡಿಯಂ ಸಜ್ಜು

spot_img
spot_img

Share post:

New Delhi News:

CHAMPIONS TROPHY 2025 ಪಂದ್ಯಾವಳಿಗಾಗಿ ಲಾಹೋರ್​ನ ಗಡಾಫಿ ಸ್ಟೇಡಿಯಂ ಸಜ್ಜುಗೊಂಡಿದೆ. 117 ದಿನಗಳ ದಾಖಲೆಯ ಸಮಯದಲ್ಲಿ ಕ್ರೀಡಾಂಗಣದ ನವೀಕರಣ ಕಾರ್ಯಗಳು ಪೂರ್ಣಗೊಂಡಿವೆ ಮತ್ತು ಈಗ CHAMPIONS TROPHY 2025 ಸೇರಿದಂತೆ ಎಲ್ಲಾ ಪ್ರಮುಖ ಐಸಿಸಿ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಲು ಕ್ರೀಡಾಂಗಣ ಸಿದ್ಧವಾಗಿದೆ ಎಂದು ಪಿಸಿಬಿ ಗುರುವಾರ ಹೇಳಿಕೆಯಲ್ಲಿ ತಿಳಿಸಿದೆ.

ಹೊಸ ರೂಪವನ್ನು ಪಡೆದುಕೊಂಡಿರುವ ಕ್ರೀಡಾಂಗಣದಲ್ಲಿ ಪ್ರಕಾಶಮಾನವಾದ ಎಲ್ಇಡಿ ದೀಪಗಳು, ಎರಡು ಹೊಸ ದೊಡ್ಡ ಸ್ಕೋರ್ ಪರದೆಗಳು ಮತ್ತು ಎಲ್ಲಾ ಕಡೆಗೂ ಆರಾಮದಾಯಕ ಆಮದು ಮಾಡಿಕೊಳ್ಳಲಾದ ಆಸನಗಳನ್ನು ಅಳವಡಿಸಲಾಗಿದೆ. CHAMPIONS TROPHY 2025  ಇದು ಪ್ರೇಕ್ಷಕರಿಗೆ ಅತ್ಯುತ್ತಮ ವೀಕ್ಷಣೆಯ ಅನುಭವ ನೀಡಲಿದೆ.

ಲಾಹೋರ್​ನಲ್ಲಿರುವ ನವೀಕರಿಸಲಾದ ಗಡಾಫಿ ಕ್ರೀಡಾಂಗಣವನ್ನು ಶುಕ್ರವಾರ ಉದ್ಘಾಟಿಸುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಘೋಷಿಸಿದೆ. ಫೆಬ್ರವರಿ 8 ರಿಂದ ಪಾಕಿಸ್ತಾನ, ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾಗಳನ್ನು ಒಳಗೊಂಡ ತ್ರಿಕೋನ ಏಕದಿನ ಸರಣಿ ಆರಂಭವಾಗಲಿದ್ದು, ಅದಕ್ಕೂ ಒಂದು ದಿನ ಮುಂಚೆ ಗಡಾಫಿ ಕ್ರೀಡಾಂಗಣ ಉದ್ಘಾಟನೆಯಾಗಲಿದೆ.

“ನಮ್ಮ ಕ್ರೀಡಾಂಗಣಗಳು ಈಗ ಅಂತರರಾಷ್ಟ್ರೀಯ ಮಾನದಂಡಗಳಿಗೆ ಸಮಾನವಾಗಿವೆ ಮತ್ತು ಕ್ರಿಕೆಟ್ ಅಭಿಮಾನಿಗಳಿಗೆ ಸಾಧ್ಯವಾದಷ್ಟು ಉತ್ತಮ ಅನುಭವವನ್ನು ನೀಡಲು ನಾವು ಹೆಮ್ಮೆಪಡುತ್ತೇವೆ. ಇಷ್ಟು ಕಡಿಮೆ ಸಮಯದಲ್ಲಿ ಈ ಕ್ರೀಡಾಂಗಣದ ರೂಪಾಂತರವು ನಮ್ಮ ಇಡೀ ತಂಡದ ಕಠಿಣ ಪರಿಶ್ರಮ ಮತ್ತು ಸಮರ್ಪಣೆಗೆ ಸಾಕ್ಷಿಯಾಗಿದೆ” ಎಂದು ಅವರು ತಿಳಿಸಿದರು.

ಈ ಬಗ್ಗೆ ಮಾತನಾಡಿದ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ, “ಅಸಾಧ್ಯವಾದ ಕೆಲಸವನ್ನು ಸಾಧ್ಯವಾಗಿಸಿದ ಕಾರ್ಮಿಕರಿಗೆ ನಾನು ಧನ್ಯವಾದ ಹೇಳುತ್ತೇನೆ. ಫ್ರಂಟಿಯರ್ ವರ್ಕ್ಸ್ ಆರ್ಗನೈಸೇಶನ್ (ಎಫ್ ಡಬ್ಲ್ಯುಒ), ಎನ್ ಇಎಸ್ ಪಿಎಕೆ, ಗುತ್ತಿಗೆದಾರರು ಮತ್ತು ಪಿಸಿಬಿ ತಂಡಗಳ ಸಂಯೋಜಿತ ಪ್ರಯತ್ನಗಳು ಈ ಕನಸನ್ನು ನನಸಾಗಿಸಿದೆ.” ಎಂದು ಹೇಳಿದರು.

CHAMPIONS TROPHY 2025  ಅಧ್ಯಕ್ಷ ನಖ್ವಿ ಖುದ್ದಾಗಿ ನಿಂತು ಪುನರ್ ನಿರ್ಮಾಣ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸಿದ್ದಾರೆ. ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲು ಆಗಾಗ ಹಗಲು ಮತ್ತು ರಾತ್ರಿ ಸಮಯದಲ್ಲಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದಾರೆ ಎಂದು ಪಿಸಿಬಿ ತಿಳಿಸಿದೆ. ಅವರ ಸಮರ್ಪಣಾ ಮನೋಭಾವದ ಕೆಲಸದಿಂದಾಗಿ ವಿಶ್ವದರ್ಜೆಯ ಸೌಲಭ್ಯಗಳು ನಿರ್ಮಾಣವಾಗಿವೆ. ಇದರಲ್ಲಿ ಹೊಸದಾಗಿ ನಿರ್ಮಿಸಲಾದ ಆತಿಥ್ಯ ಆಸನಗಳು, ಆಟಗಾರರು ಮತ್ತು ಪ್ರೇಕ್ಷಕರಿಗೆ ನವೀಕರಿಸಿದ ಸೌಲಭ್ಯಗಳು ಸೇರಿವೆ ಎಂದು ಅದು ಹೇಳಿದೆ.

ಲಾಹೋರ್ ಹೊರತುಪಡಿಸಿ, ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣ ಮತ್ತು ರಾವಲ್ಪಿಂಡಿ ಕ್ರಿಕೆಟ್ ಕ್ರೀಡಾಂಗಣವನ್ನು ಫೆಬ್ರವರಿ 19 ರಿಂದ ಪ್ರಾರಂಭವಾಗುವ 2025 ರ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳಿಗೆ ಆತಿಥ್ಯ ವಹಿಸಲು ಮೇಲ್ದರ್ಜೆಗೇರಿಸಲಾಗುತ್ತಿದೆ.

ಫೆಬ್ರವರಿ 12 ರಂದು ಕ್ರೀಡಾಂಗಣಗಳನ್ನು ಐಸಿಸಿಗೆ ಹಸ್ತಾಂತರಿಸಲಾಗುವುದು. ಪ್ರಧಾನಿ ಶೆಹಬಾಜ್ ಷರೀಫ್ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದು, ಸಮಾರಂಭದಲ್ಲಿ ಪಟಾಕಿ ಸಿಡಿಸುವಿಕೆ, ವಿಶಿಷ್ಟ ಬೆಳಕಿನ ಪ್ರದರ್ಶನ, ಖ್ಯಾತ ಗಾಯಕರಾದ ಅಲಿ ಜಾಫರ್, ಆರಿಫ್ ಲೋಹರ್ ಮತ್ತು ಐಮಾ ಬೇಗ್ ಅವರ ಪ್ರದರ್ಶನಗಳು ಹಾಗೂ ಬೆರಗುಗೊಳಿಸುವ ಡ್ರಮ್ ಮತ್ತು ಪಟಾಕಿ ಪ್ರದರ್ಶನ ನಡೆಯಲಿವೆ.

ಇದನ್ನು ಓದಿರಿ : PM Modi Aims To Make India A Hub Of Electronics Manufacturing: Ashwini Vaishnaw

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...