ಕೆಲಸದ ವೇಳೆ CHEMICAL LEAK ಯಾಗಿ 12ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥರಾದ ಘಟನೆ ಕಾರವಾರದಲ್ಲಿ ನಡೆದಿದೆ. ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ CHEMICAL LEAK ಯಾಗಿ ಈ ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅಸ್ವಸ್ಥಗೊಂಡ ಕಾರ್ಮಿಕರನ್ನು ಕಾರವಾರದ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪತ್ರದೇಶ ಹಾಗೂ ಬಿಹಾರ ಮೂಲದವರಾದ ನೀಲಕಂಠ (22), ಜಹಾನೂರ (20), ಕಮಲೇಶ ವರ್ಮಾ (22), ನಂದಕಿಶೋರ (21), ದೀಪು (28), ಅಜೀಜ್ (23), ಕಲ್ಲು (37), ಸುಜನ್ (26), ನಜೀದುಲ್ಲಾ (24), ಬೇಜನಕುಮಾರ್ (27), ಕಿಶನ್ ಕುಮಾರ್ (28) ಮತ್ತು ಮೋಹಿತ ವರ್ಮಾ(21) ಅಸ್ವಸ್ಥಗೊಂಡವರು ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಕಂಪನಿ ಅಧಿಕಾರಿಗಳು ದೌಡಾಯಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಕ್ಲೋರಿನ್ ಸೋರಿಕೆಯಿಂದ ಕಾರ್ಮಿಕನೋರ್ವ ಮೃತಪಟ್ಟಿದ್ದ ಘಟನೆ ನಡೆದಿತ್ತು. ಈ ಬೆನ್ನಲ್ಲೇ ಇದೀಗ ಮತ್ತೆ CHEMICAL LEAK ಯಾಗಿದೆ. ಕಾರವಾರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.