spot_img
spot_img

CHIEF MINISTER SIDDARAMAIAH : ಮುಡಾ ಕೇಸ್ ಬಗ್ಗೆ ಇ.ಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ

spot_img
spot_img

Share post:

Bangalore News:

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (ಇ.ಡಿ) ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ CHIEF MINISTER SIDDARAMAIAH ಪ್ರತಿಕ್ರಿಯಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ”ಇ.ಡಿಯವರ ಪತ್ರಿಕಾ ಪ್ರಕಟಣೆಗೂ, ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇ.ಡಿ ಮೂಲಕ ಬಿಡುಗಡೆ ಮಾಡಿಸಿದ್ದಾರೆ” ಎಂದು ದೂರಿದರು.  ”ಮುಡಾ ಪ್ರಕರಣದಲ್ಲಿ ಇ.ಡಿಯವರ (ಜಾರಿ ನಿರ್ದೇಶನಾಲಯ) ಪತ್ರಿಕಾ ಪ್ರಕಟಣೆಯು ರಾಜಕೀಯ ಪ್ರೇರಿತವಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

No question of misappropriation of money:

ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ ತೆರಿಗೆ ಹಣದಲ್ಲಿ ನಾಳಿನ ಸಮಾರಂಭ ನಡೆಸುತ್ತಿರುವ ಬಗ್ಗೆ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ”ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ” ಎಂದು ತಿಳಿಸಿದರು.ಮೈಸೂರು ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ಮಾತನಾಡಿ, ”ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಸಿಎಂ ಹೇಳಿದರು. ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ”ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ‍್ಳಲಾಗುವುದು” ಎಂದರು CHIEF MINISTER SIDDARAMAIAH

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...