Dharwad News:
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಗಂಭ್ಯಾಪುರ ಗ್ರಾಮದಲ್ಲಿ ನಿನ್ನೆ ಸಂಜೆ ಶಾಲೆಯಿಂದ ಬರುತ್ತಿದ್ದ ವಿದ್ಯಾರ್ಥಿಗಳು ದಾರಿಯಲ್ಲಿ ಔಡಲ ಗಿಡದ ಕಾಯಿ ತಿಂದು CHILDREN FALL SICK. ಬಳಿಕ ರಾತ್ರಿ ವಾಂತಿ ಬೇದಿಯಿಂದ ಬಳಲಿದ್ದು, ಪೋಷಕರು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದರು. ಔಡಲ ಗಿಡದ ಕಾಯಿ ತಿಂದು CHILDREN FALL SICK ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಸಂತೋಷ್ ಲಾಡ್ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿದರು. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಜಟ್ರೊಬಾ ಎಂಬ ಗಿಡದ ಕಾಯಿ ತಿಂದು ನನ್ನ ಕ್ಷೇತ್ರದ ಗಂಭ್ಯಾಪುರ ಗ್ರಾಮದ 13 ಮಕ್ಕಳು ಅಸ್ವಸ್ಥರಾಗಿದ್ದರು. ಅವರಲ್ಲಿ 10 ಮಕ್ಕಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಲ್ಲ ಮಕ್ಕಳು ಸುರಕ್ಷಿತರಾಗಿದ್ದಾರೆ. ಯಾವುದೇ ರೀತಿಯ ಅನಾಹುತ ಆಗಿಲ್ಲ” ಎಂದು ಹೇಳಿದರು.
ಇದನ್ನು ಓದಿರಿ : MAHAKUMBH MELA : ಕಾಶಿ ವಿಶ್ವನಾಥ ಮಂದಿರಕ್ಕೆ ಭೇಟಿ ನೀಡಿದ ಸ್ಟೀವ್ ಜಾಬ್ಸ್ ಪತ್ನಿ