Bangalore News:
ಬೆಂಗಳೂರಲ್ಲಿ ಚಿತ್ರಕಲಾ ಪರಿಷತ್ತು ಆಯೋಜಿಸಿದ್ದ 22ನೇ ಚಿತ್ರಸಂತೆಯನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿ, ಕಲಾವಿದರನ್ನ ಬೆಂಬಲಿಸುವಂತೆ ಕರೆ ನೀಡಿದರು. ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿ ಚಿತ್ರಕಲಾ ಪರಿಷತ್ತು ಇಂದು ಆಯೋಜಿಸಿರುವ 22 ನೇ CHITRASANTHE ಯನ್ನು ಉದ್ಘಾಟನೆ ಮಾಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಸಿಎಂ ಮಾತನಾಡಿದರು. ಏಳನೇ ಬಾರಿ CHITRASANTHE ಉದ್ಘಾಟಿಸುತ್ತಿದ್ದು, ರಾಜ್ಯದ ಸಂಸ್ಕೃತಿ, ಪರಂಪರೆ, ಸಂಪ್ರದಾಯವನ್ನು ಚಿತ್ರದ ಮೂಲಕ ರಾಜ್ಯ ಮತ್ತು ಜಗತ್ತಿಗೆ ತಿಳಿಸಬೇಕೆಂಬ ಪ್ರಯತ್ನವನ್ನು ಚಿತ್ರ ಕಲಾ ಪರಿಷತ್ತು ಮಾಡುತ್ತಿದೆ ಎಂದ ಸಿದ್ದರಾಮಯ್ಯ ಅವರು ಚಿತ್ರಸಂತೆ ಆಯೋಜಿಸಿದ್ದ ಎಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸಿದರು. ಕಲಾಸಕ್ತರು CHITRASANTHE ಗೆ ಭೇಟಿ ನೀಡಿ ಕಲಾಕೃತಿಯನ್ನು ಕೊಂಡು ಕಲಾವಿದರಿಗೆ ಬೆಂಬಲ ನೀಡಬೇಕು. ಮನೆಯಲ್ಲಿ ಕಲಾಕೃತಿಯಿದ್ದರೆ ಚಿತ್ರ ಸಂತೆ ಏರ್ಪಾಡು ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
Artists from 22 states participated;
ಅನೇಕ ಚಿತ್ರಕಲಾವಿದರಿಗೆ ವೇದಿಕೆಯನ್ನು ಕಲ್ಪಿಸಿ ಅವರ ಪ್ರತಿಭೆಯನ್ನು ಪ್ರದರ್ಶಿಸಿ ಆಸಕ್ತರಿಗೆ ಕೊಳ್ಳುವ ಅವಕಾಶವನ್ನೂ ಚಿತ್ರದಂತೆ ಒದಗಿಸುತ್ತಿದೆ. ಒಂದು ದಿನಕ್ಕೆ ನಾಲ್ಕು ಲಕ್ಷ ಜನರು ಭೇಟಿ ನೀಡುತ್ತಾರೆ. ಬೆಂಗಳೂರಿಗೆ ಇದೊಂದು ಸುವರ್ಣಾವಕಾಶ ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು. ಚಿತ್ರ ಸಂತೆಯಲ್ಲಿ 22 ರಾಜ್ಯಗಳ ಕಲಾವಿದರು ಪಾಲ್ಗೊಂಡಿರುವುದು ಶ್ಲಾಘನೀಯ. ಜಗತ್ತಿನ ಯಾವ ಭಾಗದಲ್ಲಿಯೂ CHITRASANTHE ನಡೆಯುವುದನ್ನು ನಾನು ನೋಡಿಲ್ಲ. ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಚಿತ್ರಸಂತೆ ನಡೆಯುವುದು ಹೆಮ್ಮೆಯ ಸಂಗತಿ.
Dedicated to Women of Chitrasante:
ಈ ಬಾರಿಯ ಚಿತ್ರಸಂತೆಯನ್ನು ಹೆಣ್ಣುಮಕ್ಕಳಿಗೆ ಸಮರ್ಪಣೆ ಮಾಡಿರುವುದು ವಿಶೇಷ. ಹೆಣ್ಣುಮಕ್ಕಳ ಪರವಾಗಿ ಕೆಲಸ ಮಾಡಿದ ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ಫಾತಿಮಾ ಶೇಖ್, ಕಮಲಾ ಬಾಯಿ ಚಟ್ಟೋಪಾಧ್ಯಾಯ, ಯಶೋಧರಮ್ಮ ದಾಸಪ್ಪ, ದತ್ತಮ್ಮ ಮೊದಲಾದವರ ಚಿತ್ರಗಳನ್ನು ಪ್ರದರ್ಶಿಸಿದ್ದಾರೆ. ಒಬ್ಬ ಪುರುಷನಿಗೆ ಶಿಕ್ಷಣ ನೀಡಿದರೆ ಒಬ್ಬ ವ್ಯಕ್ತಿಗೆ ಶಿಕ್ಷಣ ನೀಡಿದಂತಾಗುತ್ತದೆ. ಒಬ್ಬ ಮಹಿಳೆಗೆ ಶಿಕ್ಷಣ ನೀಡಿದರೆ ಒಂದು ಕುಟುಂಬವೇ ಕಲಿತಂತಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
A picture is worth a thousand words:
ಸಂವಿಧಾನದ ಪೀಠಿಕೆಯನ್ನು ಕೂಡ ಇಲ್ಲಿ ಪ್ರದರ್ಶಿಸಲಾಗಿದೆ. ಸಮಾಜದ ಎಲ್ಲಾ ವರ್ಗದ ಜನರನ್ನೂ ಪ್ರತಿನಿಧಿಸುತ್ತಿದೆ. ಒಂದು ಚಿತ್ರ ಸಾವಿರ ಪದಗಳಿಗಿಂತಲೂ ಪ್ರಭಾವಶಾಲಿಯಾಗಿದೆ. ಚಿತ್ರದ ಮೂಲಕ ಜನಜೀವನ, ಸಂಸ್ಕೃತಿ, ಪರಂಪರೆ ಬಿಂಬಿಸಬಹುದಾಗಿದೆ. ಚಿತ್ರಕಲಾ ಪರಿಷತ್ತು ಉತ್ತಮ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಶ್ಲಾಘಿಸಿದರು.
ಇದನ್ನು ಓದಿರಿ : GOVT SCHOOLS CLOSED : ಚಾಮರಾಜನಗರದಲ್ಲಿ 20 ಸರ್ಕಾರಿ ಶಾಲೆಗಳು ಬಂದ್