spot_img
spot_img

CM SIDDARAMAIAH : ಜನಪ್ರಿಯ ಗ್ರಾಮೀಣ ಕ್ರೀಡೆ ಕಂಬಳಕ್ಕೆ ಸರ್ಕಾರದಿಂದ ನೆರವು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Mangalore News :

ಉಳ್ಳಾಲದ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನುCM SIDDARAMAIAH ಉದ್ಘಾಟಿಸಿದರು. ”ಸುಪ್ರೀಂಕೋರ್ಟ್ ನಿಷೇಧಿಸಿದ್ದ ಕಂಬಳ ಕ್ರೀಡೆಗೆ ಮರು ಚಾಲನೆ ಸಿಗುವಂತೆ ಮಾಡಿದ್ದು ನಮ್ಮ ಸರ್ಕಾರ. ಸುಪ್ರೀಂಕೋರ್ಟ್ ನಿಷೇಧವನ್ನು ತೆರವುಗೊಳಿಸಲು ಸರ್ಕಾರ ಶ್ರಮಿಸಿತು. ಇದು ಕರಾವಳಿಯ ಜನಪದ ಸಂಸ್ಕೃತಿಗೆ ನಮ್ಮ ಸರ್ಕಾರ ಕೊಟ್ಟ ಕೊಡುಗೆ” ಎಂದು ತಿಳಿಸಿದರು. ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ”ಜನಪದ ಕ್ರೀಡೆ ಕಂಬಳ ಸರ್ವ ಜಾತಿ, ಧರ್ಮದ ಜನ ಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತದ ಕರಾವಳಿ ಜಿಲ್ಲೆಗಳ ಒಂದು ಸಂಸ್ಕೃತಿಯಾಗಿದೆ. ನಮ್ಮ ಸರ್ಕಾರ ಕೂಡ ಎಲ್ಲಾ ಜಾತಿ, ಎಲ್ಲಾ ಧರ್ಮದ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ” ಎಂದರು. ‘ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ.‌ ನಮ್ಮದು ಬಹುತ್ವದ ದೇಶ‌” ಎಂದು CM SIDDARAMAIAH ಹೇಳಿದರು. ”ತಮ್ಮ ಮನೆ ಮಕ್ಕಳಂತೆ ಕಂಬಳ ಕೋಣಗಳನ್ನು ಸಾಕುತ್ತಾರೆ. ಕಂಬಳ ಕ್ರೀಡೆ ಜಿಲ್ಲೆಯ ಜನಪದ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಹೀಗಾಗಿ, ಈ ಸಾಂಪ್ರದಾಯಿಕ ಕ್ರೀಡೆಯನ್ನು ಉಳಿಸಲು ನಾನು ಮುಂದಾದೆ. 24 ಕಂಬಳಗಳನ್ನು ನಡೆಸಲು ಪ್ರತಿ ಕಂಬಳಕ್ಕೆ ತಲಾ 5 ಲಕ್ಷ ರೂಪಾಯಿ ನೆರವನ್ನು ನಮ್ಮ ಸರ್ಕಾರ ನೀಡಿದೆ” ಎಂದು ಹೇಳಿದರು.

 

The government considers Tulu as a second language:

”ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರ ಬೇಡಿಕೆಯಂತೆ ತುಳು ಭಾಷೆಯನ್ನು ಎರಡನೆಯ ರಾಜ್ಯ ಭಾಷೆಯನ್ನಾಗಿ ಪರಿಗಣಿಸುವ ಬಗ್ಗೆ ಗಂಭೀರವಾಗಿ ಚಿಂತಿಸಲಾಗುವುದು” ಎಂದು ಭರವಸೆ ನೀಡಿದರು.

 

Nothing is permanent in politics:

”ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್ ಅವರು ಸ್ಪೀಕರ್ ಆಗುವ ಮೂಲಕ ಪ್ರೋಟೋಕಾಲ್ ಪ್ರಕಾರ ನನಗಿಂತ ಎತ್ತರದಲ್ಲಿದ್ದಾರೆ. ಮುಂದೆ ಇದಕ್ಕಿಂತ ಒಳ್ಳೆಯ ಅವಕಾಶಗಳು ಸಿಗಬಹುದು. ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ” ಎಂದರು. ಈ ಸಂದರ್ಭದಲ್ಲಿ ಸ್ಪೀಕರ್ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವ ರಹೀಂ ಖಾನ್, ಇತರರು ಉಪಸ್ಥಿತರಿದ್ದರು.

 

Naxalites should stop armed struggle and come into the mainstream:

ನಕ್ಸಲರ ಶರಣಾಗತಿಯ ಬಗ್ಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ”ಜಿಲ್ಲಾ ವರಿಷ್ಠಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಸರ್ಕಾರಿ ನೌಕರರಾಗಿದ್ದರು. ಈಗ ರಾಜಕೀಯದಲ್ಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಅವರಿಂದ ನಾವೇನು ನಿರೀಕ್ಷೆ ಮಾಡಲು ಸಾಧ್ಯ” ಎಂದರು. ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ”ಆರು ನಕ್ಸಲರು ಶರಣಾಗಿದ್ದು, ಅವರನ್ನು ಕಾಡಿನಿಂದ ನ್ಯಾಯಾಲಯಕ್ಕೆ ಕರೆತಂದು, ಅಲ್ಲಿಂದ ನಾಡಿಗೆ ಕರೆತರುವ ಪ್ರಯತ್ನ ಮಾಡಲಾಗಿದೆ.

ನಕ್ಸಲರು ಶಸ್ತ್ರಾಸ್ತ್ರ ಹೋರಾಟ ನಿಲ್ಲಿಸಿ ಮುಖ್ಯವಾಹಿನಿಗೆ ಬರಬೇಕು. ಅವರ ಶಾಂತಿಯುತ ಹೋರಾಟಕ್ಕೆ ನಮ್ಮ ತಕರಾರೇನಿಲ್ಲ. ಸಂವಿಧಾನದಲ್ಲಿ ಶಾಂತಿಯುತ ಹೋರಾಟಕ್ಕೆ ಅವಕಾಶವಿದ್ದು, ಅದರಂತೆ ಹೋರಾಟ ಮಾಡಿದರೆ ಅದಕ್ಕೆ ಸಹಕಾರವಿದೆ” ಎಂದು ತಿಳಿಸಿದರು.

”ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಕಗಳ ಜೊತೆಗೆ 10 ಸಾವಿರ ರೂ.ಗಳ ಗೌರವಧನ ನೀಡಲು ಸರ್ಕಾರ ಒಪ್ಪಿದೆ. ಒಂದು ವೇಳೆ 10 ಸಾವಿರಗಳಷ್ಟು ಪ್ರೋತ್ಸಾಹಕಗಳು ಬಾರದೆ ಹೋದರೆ ಸರ್ಕಾರವೇ ಅದನ್ನು ಭರಿಸಲಿದೆ” ಎಂದು ತಿಳಿಸಿದರು.

ಇದನ್ನು ಓದಿರಿ : BOY DIES AFTER SNAKE BITE : ಕಬ್ಬಿನ ಗದ್ದೆಯಲ್ಲಿ ಆಟವಾಡುವಾಗ ಹಾವು ಕಚ್ಚಿ 2 ವರ್ಷದ ಬಾಲಕ ಸಾವು

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

NARGIS FAKHRI MARRIAGE:ವರ ಟೋನಿ ಬಗ್ಗೆ ಇಲ್ಲಿದೆ ಮಾಹಿತಿ

  Nargis marriage news: ಸೂಪರ್​ ಹಿಟ್​ ರಾಕ್‌ಸ್ಟಾರ್, ಮೆ ತೇರಾ ಹೀರೋ ಮತ್ತು ಹೌಸ್‌ಫುಲ್ 3 ಚಿತ್ರಗಳಿಗೆ ಹೆಸರುವಾಸಿಯಾಗಿರುವ ಬಾಲಿವುಡ್ ನಟಿ ನರ್ಗಿಸ್ ಫಕ್ರಿ (Nargis...

THREE BUS EXPLOSION IN ISRAEL:ಉಗ್ರರ ಕೃತ್ಯದ ಶಂಕೆ, ವ್ಯಗ್ರಗೊಂಡ ಇಸ್ರೇಲ್

Bat Yam News: ಒಂದೂವರೆ ವರ್ಷಗಳ ಕಾಲ ನಡೆದ ಯುದ್ದದ ಬಳಿಕ ಕದನ ವಿರಾಮಕ್ಕೆ ಹಮಾಸ್​, ISRAEL​ ಒಪ್ಪಿದ್ದು, ಇದರ ಭಾಗವಾಗಿ ಹಸ್ತಾಂತರ ಪ್ರಕ್ರಿಯೆ ಕೂಡ...

NEW BAT CORONAVIRUS: ಕೋವಿಡ್ ರೀತಿಯ ಮತ್ತೊಂದು ವೈರಸ್ ಬಾವಲಿಯಲ್ಲಿ ಪತ್ತೆ

  Beijing, China News: ಇದು ಜನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಚೀನಾದ ಬ್ಯಾಟ್​ ವುಮೆನ್​ ಎಂದೇ ಖ್ಯಾತಿಯಾಗಿರುವ ವೈರಾಲಾಜಿಸ್ಟ್​​ ಶಿ ಜೆಂಗಾಲಿ ಅಧ್ಯಯನ ನಡೆಸಿದ್ದಾರೆ....

CONTENT CREATORS KUMBH JOURNEY:1500 ಕಿ.ಮೀ ದೂರದ ಪ್ರಯಾಗ್ರಾಜ್ಗೆ ನಯಾಪೈಸೆ ಖರ್ಚಿಲ್ಲದೆ ತಲುಪಿದ ಕಂಟೆಂಟ್ ಕ್ರಿಯೇಟರ್!

New Delhi News: ಮಹಾರಾಷ್ಟ್ರದ ಕಂಟೆಂಟ್​ ಕ್ರಿಯೇಟರ್​ ದಿವ್ಯಾ ಫೋಫಾನಿ ಕುಂಭಮೇಳಕ್ಕೆ ತಾವು ಮುಂಬೈನಿಂದ ಬಂದ ರೀತಿ ಮತ್ತು ಹಾದಿಯ ನಡುವೆ ಜನರು ನೀಡಿದ ನೆರವನ್ನು...