spot_img
spot_img

CM SIDDARAMAIAH : ಫೆ.10 ರೊಳಗೆ ಖಾತಾ ನೀಡುವ ಪ್ರಕ್ರಿಯೆ ಪೂರ್ಣಗೊಳಿಸಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅಭಿಯಾನದ ಮಾದರಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ನಡೆಸಿ. ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ CM SIDDARAMAIAH ಸೂಚನೆ ನೀಡಿದ್ದಾರೆ. ಫೆ.10ರೊಳಗೆ ನಿಗದೊತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ CM SIDDARAMAIAH ಸೂಚಿಸಿದ್ಧಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ CM SIDDARAMAIAH , ಬಿಬಿಎಂಪಿ ವ್ಯಾಪ್ತಿಯಲ್ಲಿ 23 ಲಕ್ಷ ಆಸ್ತಿಗಳ ಡಿಜಿಟೈಸ್‌ ಮಾಡಲಾಗಿದೆ. ಈಗಾಗಲೇ 15 ಲಕ್ಷ ಖಾತೆಗಳನ್ನು ಡೌನ್‌ಲೋಡ್‌ ಮಾಡಲಾಗಿದೆ.

ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಕ್ರಮಬದ್ಧವಲ್ಲದ ಸ್ವತ್ತುಗಳ ನಕಲಿ ಖಾತೆಗಳನ್ನು ಸೃಜಿಸಿ ವಂಚನೆಯಿಂದ ಹೆಚ್ಚು ದಸ್ತಾವೇಜುಗಳ ನೋಂದಣಿ ಮಾಡುವ ಪ್ರಕ್ರಿಯೆಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ಸೂಚಿಸಿದರು. ನಕಲಿ ದಾಖಲೆಗಳ ಪರಿಶೀಲಿಸದೆ ಆಸ್ತಿ ನೋಂದಣಿ ಮಾಡಲಾಗುತ್ತಿದೆ. ಕೆಲವು ಅಧಿಕಾರಿಗಳೂ ಇದರ ಪರವಾಗಿದ್ದಾರೆ.

ಇದೆಲ್ಲಕ್ಕೂ ಕಡಿವಾಣ ಅಗತ್ಯ. ಬಿಬಿಎಂಪಿಯಲ್ಲಿ ಸುಮಾರು 15 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ. ಇದರಿಂದ ತೆರಿಗೆಯೂ ಕಟ್ಟದ ಕಾರಣ ಸಾವಿರಾರು ಕೋಟಿ ರೂ. ತೆರಿಗೆ ಪ್ರತಿ ವರ್ಷ ಸರ್ಕಾರಕ್ಕೆ ನಷ್ಟ ಉಂಟಾಗುತ್ತಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಅಂದಾಜು 30 ಲಕ್ಷ ಆಸ್ತಿಗಳಿಗೆ ಖಾತೆಗಳು ಇರುವುದಿಲ್ಲ‌ ಎಂದರು. ಹಲವು ವರ್ಷಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರಿಕಿರಿ, ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು.

ಇದಕ್ಕೆ ಪರಸ್ಪರ ಹೊಂದಾಣಿಕೆಯಿಂದ ಮೂರೂ ಇಲಾಖೆಗಳು ಕಾರ್ಯನಿರ್ವಹಿಸಿ. ನಿಯಮ ಪಾಲಿಸದ ರೆವಿನ್ಯೂ ಬಡಾವಣೆಗಳಿಗೆ ಬ್ರೇಕ್ ಹಾಕುವ ಅತ್ಯಗತ್ಯವಿದೆ. ಒಂದೇ ಸೈಟನ್ನು ಹಲವರಿಗೆ ಮಾರುವ ವಂಚನೆಗೆ ಸಂಪೂರ್ಣ ಬ್ರೇಕ್ ಹಾಕಲೇಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ. ಗ್ರಾಮ ಪಂಚಾಯತ್‌ಗಳಲ್ಲಿ ಅಂದಾಜು 90 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ.

ಖಾತೆಯಿಲ್ಲದೆ, ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನೋಂದಣಿ ಮಾಡುವ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು. ಇದಕ್ಕೆ ಸ್ಥಳೀಯ ಸಂಸ್ಥೆಗಳು ಮತ್ತು ನೋಂದಣಿ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸ್ಥಳೀಯ ಸಂಸ್ಥೆಗಳು ಖಾತಾ ನೀಡಿರುವ ಆಸ್ತಿಗಳನ್ನು ಮಾತ್ರ ನೋಂದಣಿ ಇಲಾಖೆಯಡಿ ನೋಂದಣಿ ಮಾಡಬೇಕು. ಸ್ಥಳೀಯ ಸಂಸ್ಥೆಗಳು ನೀಡಿರುವ ಖಾತಾ ದಾಖಲೆಗಳ ಡಾಟಾಬೇಸ್‌ ಕಂಪ್ಯೂಟರ್‌ನಲ್ಲಿ ಇರಬೇಕು. ಈ ಡಾಟಾ ಬೇಸ್‌ ಆಧರಿಸಿ ನೋಂದಣಿ ಪ್ರಕ್ರಿಯೆ ಮಾಡಬೇಕು ಎಂದು ಸೂಚಿಸಿದರು.

ಇನ್ನು ಮುಂದೆ ಕಂದಾಯ ಜಮೀನಿನಲ್ಲಿ ಲೇಔಟ್‌ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಇದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಇರುವ ಅಂತಹ ಲೇಔಟ್‌ಗಳ ಕುರಿತು ಸೂಕ್ತ ಕ್ರಮ‌ ಕೈಗೊಳ್ಳಬೇಕು. ನಿವೇಶನಗಳಲ್ಲಿರುವ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳಾಗಿ ಪರಿಗಣಿಸುವ ಕುರಿತು ಕ್ರಮ ಪರಿಶೀಲಿಸಬೇಕು. ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು ಕಾವೇರಿ ಮತ್ತು ಇ – ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದರು.

ನೋಂದಣಿ ಪ್ರಕ್ರಿಯೆ ಇಂಟಿಗ್ರೇಷನ್‌ ಆದ ಮೇಲೆ ಅಕ್ರಮಗಳ ಮೇಲೆ ಕಡಿವಾಣ ಸಾಧ್ಯವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒನ್ ಟೈಮ್‌ ಪರಿಹಾರ ನೀಡುವ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾತಾ ನೀಡಿರುವುದನ್ನು ಡಾಟಾ ಬೇಸ್‌ನಲ್ಲಿ ಹಾಕಬೇಕು. ಇದರಿಂದ ಖಾತೆ ಆದ ಆಸ್ತಿಗಳನ್ನು ಮಾತ್ರ ನೋಂದಣಿ ಮಾಡಬಹುದು.

ಕಾಗದ ದಾಖಲೆಗಳ ಆಧಾರದಲ್ಲಿ ಯಾವುದೇ ಕಾರಣಕ್ಕೂ ನೋಂದಣಿಗೆ ಪರಿಗಣಿಸಬಾರದು ಎಂದು ಸೂಚಿಸಿದರು. ಈ ವರ್ಷ ಡಿಸೆಂಬರ್‌ ಕೊನೆಗೆ 16,993 ಕೋಟಿ ರೂ ರಾಜಸ್ವ ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.17ರಷ್ಟು ಹೆಚ್ಚುವರಿ ಪ್ರಗತಿ ಸಾಧಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಸರ್ವೇ ನಂಬರ್‌ಗಳಲ್ಲಿ ನಿರ್ಮಿಸಿದ ಅನಧಿಕೃತ ಬಡಾವಣೆಗಳು/ನಿವೇಶನಗಳ ದತ್ತಾಂಶ ಮಾಹಿತಿ ಇದ್ದು, ಸದರಿ ಮಾಹಿತಿಯನ್ನು ಆಧರಿಸಿ ಒಂದೇ ಯೋಜನೆಯಲ್ಲಿ ಸದರಿ ಸ್ವತ್ತುಗಳಿಗೆ ಖಾತಾ ದಾಖಲೆಗಳನ್ನು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಬೇಕು.

ಗ್ರಾಮ ಪಂಚಾಯತ್‌ಗಳಲ್ಲಿ 44 ಲಕ್ಷ ಆಸ್ತಿಗಳಿಗೆ ಮಾತ್ರ ಖಾತೆಯಿದೆ. ಇದರಿಂದ 800 ಕೋಟಿ ರೂ. ಆದಾಯ ಪ್ರತಿ ವರ್ಷ ಬರುತ್ತಿದೆ. ಆದರೆ ಸುಮಾರು 96 ಲಕ್ಷ ಆಸ್ತಿಗಳಿಗೆ ಇನ್ನೂ ಈ ಖಾತಾ ಇರುವುದಿಲ್ಲ. ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಖಾತೆ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುವ ಕುರಿತು ಕ್ರಮ ವಹಿಸಲು ಸೂಚಿಸಿದರು.

ಇದನ್ನು ಓದಿರಿ : DELHI POLLING DATE : ದೆಹಲಿ ವಿಧಾನಸಭೆಗೆ ಚುನಾವಣೆ ಘೋಷಣೆ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...